ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಸೂದ್ ಬೆಂಬಲಕ್ಕೆ ನಿಂತ ಚೀನಾಕ್ಕೆ ಮಹಾಮಂಗಳಾರತಿ

|
Google Oneindia Kannada News

ವಾಷಿಂಗ್ಟನ್, ಮಾರ್ಚ್ 14: ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮಸೂದ್ ಅಝರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸಿ, ಕಪ್ಪು ಪಟ್ಟಿಗೆ ಸೇರಿಸಲು ಅಡ್ಡಗಾಲು ಹಾಕಿದ ಚೀನಾವನ್ನು ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಚೀನಾ ತನ್ನ ನಿಲುವನ್ನು ಬದಲಿಸಿಕೊಳ್ಳದೆ, ಇದೇ ರೀತಿಯ ಉದ್ದಟತನ ಮುಂದುವರಿಸಿದರೆ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಯುಎಸ್ ಎಸ್ ಸಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ನಾಲ್ಕನೇ ಬಾರಿಗೆ ವಿಶ್ವಸಂಸ್ಥೆ ಭದ್ರತಾ ಸಮಿತಿಯಲ್ಲಿ ಅಜರ್ ನನ್ನು ರಕ್ಷಿಸಿದ ಚೀನಾನಾಲ್ಕನೇ ಬಾರಿಗೆ ವಿಶ್ವಸಂಸ್ಥೆ ಭದ್ರತಾ ಸಮಿತಿಯಲ್ಲಿ ಅಜರ್ ನನ್ನು ರಕ್ಷಿಸಿದ ಚೀನಾ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ಸೇನೆಯ ನಲವತ್ತು ಯೋಧರು ಹುತಾತ್ಮರಾದ ಘಟನೆಯ ನಂತರ ಜೈಷ್ ಇ ಮೊಹಮ್ಮದ್ ಸಂಘಟನೆಯೇ ಅದರ ಹೊಣೆ ಹೊತ್ತುಕೊಂಡಿತ್ತು. ಅದರೊಟ್ಟಿಗೆ ಹಲವು ಉಗ್ರದಾಳಿಯಲ್ಲಿ ತನ್ನ ಕೈವಾಡವನ್ನು ಜೆಇಎಂ ಸ್ವತಃ ಒಪ್ಪಿಕೊಂಡಿದ್ದರೂ, ಅದರ ಮುಖ್ಯಸ್ಥ ಮಸೂದ್ ಅಝರ್ ಬೆಂಬಲಕ್ಕೆ ನಿಂತ ಚೀನಾ ನಡೆಯನ್ನು ಸದಸ್ಯರು ಟೀಕಿಸಿದ್ದಾರೆ.

UNSC members warn China for its move Masood Azhar issue

'ಮಸೂದ್ ಅಝರ್ ಪ್ರಕರಣ ಕೇಂದ್ರ ಸರ್ಕಾರದ ರಾಜತಾಂತ್ರಿಕ ದುರಂತ''ಮಸೂದ್ ಅಝರ್ ಪ್ರಕರಣ ಕೇಂದ್ರ ಸರ್ಕಾರದ ರಾಜತಾಂತ್ರಿಕ ದುರಂತ'

ಪುಲ್ವಾಮಾ ಘಟನೆಯ ನಂತರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾದ ಅಮೆರಿಕ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳು ಅಝರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಪ್ರಸ್ತಾವವನ್ನು ವಿಶ್ವಸಂಸ್ಥೆಯ ಮುಂದೆ ಇರಿಸಿದ್ದವು.

English summary
UNSC members warn China that they may be forced to pursue other action forChina's move Masood Azhar issue
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X