ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಎಂದಿಗೂ ನಮ್ಮ ನೆರವಿದೆ; ಅಮೆರಿಕ

|
Google Oneindia Kannada News

ವಾಷಿಂಗ್ಟನ್, ಮೇ 18: ಕೊರೊನಾ ಸೋಂಕಿನ ವಿರುದ್ಧ ಭಾರತದ ಹೋರಾಟಕ್ಕೆ ತನ್ನ ಸಹಕಾರವನ್ನು ಮುಂದುವರೆಸುವುದಾಗಿ ಅಮೆರಿಕ ಘೋಷಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೊರೊನಾ ಸೋಂಕಿನ ನಿರ್ವಹಣೆಗೆ ಸಂಬಂಧಿಸಿದಂತೆ ಭಾರತಕ್ಕೆ ನೂರು ಮಿಲಿಯನ್ ಡಾಲರ್ ನೆರವು ನೀಡುವುದಾಗಿ ಘೋಷಿಸಿದ್ದು, ಹಲವು ಯೋಜನೆಗಳಲ್ಲಿ ತೊಡಗಿಕೊಂಡಿರುವುದಾಗಿ ವೈಟ್ ಹೌಸ್ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.

ಭಾರತೀಯರಿಗೆ ಕೊಟ್ಟ ಮಾತು ಉಳಿಸಿಕೊಂಡ ಅಮೆರಿಕ ಅಧ್ಯಕ್ಷ ಬೈಡನ್ಭಾರತೀಯರಿಗೆ ಕೊಟ್ಟ ಮಾತು ಉಳಿಸಿಕೊಂಡ ಅಮೆರಿಕ ಅಧ್ಯಕ್ಷ ಬೈಡನ್

ಕೊರೊನಾ ಸೋಂಕು ಇಡೀ ವಿಶ್ವವನ್ನೇ ವ್ಯಾಪಿಸಿದೆ. ಇಂಥ ಸಂಕಷ್ಟ ಕಾಲದಲ್ಲಿ ನಮ್ಮ ಪ್ರಮುಖ ಪಾಲುದಾರ ಭಾರತಕ್ಕೆ ನಾವು ಏನು ಸಹಕಾರ ನೀಡಬಹುದೋ ಎಲ್ಲವನ್ನೂ ನೀಡುವ ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದರು. ಕೊರೊನಾ ನಿಯಂತ್ರಣದ ವಿಷಯದಲ್ಲಿ ಭಾರತಕ್ಕೆ ಅಗತ್ಯ ನೆರವು ನೀಡಲಿದ್ದೇವೆ ಎಂದು ಹೇಳಿದರು.

US Announces Continued Assistance To India Fight Against Covid 19

ಈಗಾಗಲೇ ಇಂಟರ್ ನ್ಯಾಷನಲ್ ಡೆವಲಪ್‌ಮೆಂಟ್ ಟು ಇಂಡಿಯಾ ಎಂಬ ಅಮೆರಿಕ ಸಂಸ್ಥೆ ಮೂಲಕ ಭಾರತಕ್ಕೆ ಏಳು ವಿಮಾನಗಳಲ್ಲಿ ನೆರವು ಕಳುಹಿಸಿದ್ದೇವೆ. ಏಳನೇ ವಿಮಾನದಲ್ಲಿ ಆಮ್ಲಜನಕ ಉತ್ಪಾದಿಸುವ ಕಾನ್ಸನ್‌ಟ್ರೇಟರ್‌ಗಳನ್ನು ಭಾರತಕ್ಕೆ ರವಾನೆ ಮಾಡಿದ್ದೇವೆ ಎಂದು ತಿಳಿಸಿದರು.

ಭಾರತದಲ್ಲಿ ಮಂಗಳವಾರ 2,63,533 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 4,22,436 ಜನರು ಗುಣಮುಖರಾಗಿದ್ದಾರೆ. 4,329 ಜನರು ಸಾವನ್ನಪ್ಪಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,52,28,996ಕ್ಕೆ ತಲುಪಿದೆ.

English summary
The United States will continue to provide a range of assistance to India to fight the COVID-19 pandemic, the White House said Monday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X