'ಮಹಾತ್ಮ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕೆ ಕ್ಷಮೆ ಇರಲಿ'

ವಾಷಿಂಗ್ಟನ್, ಜೂನ್ 4: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕೆ ಕ್ಷಮೆ ಇರಲಿ ಎಂದು ಅಮೆರಿಕ ಭಾರತೀಯ ರಾಯಭಾರಿ ಕೆನ್ ಜಸ್ಟರ್ ಹೇಳಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೊರಗಿನ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಜನಾಂಗೀಯ ಪ್ರತಿಭಟನೆ ಭಾಗವಾಗಿದ್ದ ವಿಧ್ವಂಸಕರಿಂದ ಅಪವಿತ್ರಗೊಳಿಸಲಾಗಿದೆ.

ಅವರು ಮಾಡಿದ್ದು ತಪ್ಪು ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೆನ್ ಜಸ್ಟರ್ ತಿಳಿಸಿದ್ದಾರೆ.ಪ್ರತಿಭಟನಾಕಾರರು ಮಹಾತ್ಮಾಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ್ದಾರೆ. ಈ ಸಂಬಂಧ ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಿಳಿಯ ಪೊಲೀಸ್ ದೌರ್ಜನ್ಯದಿಂದ ಕಪ್ಪು ವರ್ಣೀಯ ದುರಂತ ಸಾವಿಗೀಡಾದ ಬೆನ್ನಲ್ಲೇ ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆ ಹಾಗೂ ಹಿಂಸಾಚಾರ ಭುಗಿಲೆದ್ದಿದೆ.

Us Apologises To India After Mahatma Gandhis Statue Vandalised In Washington

ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ (45) ಅಮೆರಿಕದ ಮಿನ್ನೆಪೊಲಿಸ್‍ನಲ್ಲಿ ಮೇ 25ರಂದು ಒಂದು ಅಂಗಡಿಯಲ್ಲಿ 20 ಡಾಲರ್ ನೀಡಿ ಸಿಗರೇಟ್ ಖರೀದಿಸಿದ್ದ.

ಅಂಗಡಿಯವರು ಆ ನೋಟು ನಕಲಿ ಎಂದು ಗೊತ್ತಾಗಿ ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಬಂದಾಗ ಫ್ಲಾಯ್ಡ್ ಇನ್ನೂ ಅಂಗಡಿಯ ಹೊರಗೆ ಆತನ ಕಾರಿನಲ್ಲಿ ಕುಳಿತಿದ್ದ.

ಪೊಲೀಸರು ಬಂದವರೇ ಅನಾಮತ್ತಾಗಿ ಆತನನ್ನು ಹಿಡಿದು ಹೊರಗೆಳೆದು, ತಮ್ಮ ಕಾರಿನ ಬಳಿ ಎಳೆದುಕೊಂಡು ಹೋದರು. ಇದನ್ನು ಜಾರ್ಜ್ ಫ್ಲಾಯ್ಡ್ ಪ್ರತಿಭಟಿಸಿದಾಗ ಓರ್ವ ಪೊಲೀಸ್ ಆತನನ್ನು ನೆಲಕ್ಕೆ ಒತ್ತಿಹಿಡಿದು, ಕುತ್ತಿಗೆಯ ಮೇಲೆ ತಮ್ಮ ಮೊಣಕಾಲೂರಿ ನಿಂತಿದ್ದ. ಸುಮಾರು ಎಂಟು ನಿಮಿಷ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಪರಿಣಾಮ ಜಾರ್ಜ್ ಫ್ಲಾಯ್ಡ್ ಸ್ಥಳದಲ್ಲೇ ಸಾವನ್ನಪ್ಪಿದ್ದ.

ಜಾರ್ಜ್ ಫ್ಲಾಯ್ಡ್ ಸಾವು ಖಂಡಿಸಿ ಅಮೆರಿಕ ಅಷ್ಟೇ ಅಲ್ಲದೆ ಪ್ರಪಂಚದಾದ್ಯಂತ ಬೃಹತ್ ಪ್ರತಿಭಟನೆಗಳು ಸ್ಫೋಟಗೊಂಡಿವೆ. ಪ್ರತಿಭಟನಾಕಾರರು ಪ್ಯಾರಿಸ್, ಸಿಡ್ನಿ, ಅರ್ಜೆಂಟೀನಾ, ಬ್ರೆಜಿಲ್, ಕೆನಡಾ ಮತ್ತು ನ್ಯೂಜಿಲೆಂಡ್‍ಗಳಲ್ಲಿ ಬೀದಿಗಿಳಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+