• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ಲಸಿಕೆಗಳ ಪೇಟೆಂಟ್‌ ತಾತ್ಕಾಲಿಕ ಮನ್ನಾ, ಅಮೆರಿಕ ಬೆಂಬಲ

|

ವಾಷಿಂಗ್ಟನ್, ಮೇ 06: ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆಯನ್ನು ಹೆಚ್ಚಿಸಲು ಲಸಿಕೆಯ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡಬೇಕು ಎಂಬುದನ್ನು ಅಮೆರಿಕ ಸರ್ಕಾರ ಬೆಂಬಲಿಸಿದೆ.

ಈ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಮತ್ತು ದಕ್ಷಿಣ ಆಫ್ರಿಕಾದ ರಾಜತಾಂತ್ರಿಕರು ಅಮೆರಿಕದ ಸೆನೆಟರ್‌ಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಈಗ ಅಮೆರಿಕ ಸಹ ಬೆಂಬಲ ನೀಡಿದೆ.

ಭಾರತದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಅಮೆರಿಕ ಸಲಹೆಭಾರತದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಅಮೆರಿಕ ಸಲಹೆ

ಪೇಟೆಂಟ್ ಜಾರಿಗೆ ಕಾಲಮಿತಿಯ ತಡೆ ನೀಡುವಂತೆ ಡಬ್ಲ್ಯುಟಿಒಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮನವಿ ಮಾಡಿದ್ದವು. ಹಲವಾರು ದೇಶಗಳು ಭಾರತದ ಈ ನಡೆಗೆ ಬೆಂಬಲ ಸೂಚಿಸಿದ್ದವು.

ಲಸಿಕೆಗಳನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡಲು ಈ ಪ್ರಸ್ತಾಪವನ್ನು ಬೆಂಬಲಿಸುವಂತೆ ಒತ್ತಾಯಿಸಿ ಬಹುಪಾಲು ಡೆಮಾಕ್ರಟಿಕ್ ಕಾಂಗ್ರೆಸ್ಸಿಗರು ಅಧ್ಯಕ್ಷ ಜೋ ಬಿಡನ್ ಅವರಿಗೆ ಪತ್ರ ಬರೆದಿದ್ದರು.

ಕೋವಿಡ್‌ ಸಾಂಕ್ರಮಿಕವು ಜಾಗತಿಕ ಆರೋಗ್ಯ ಬಿಕ್ಕಟ್ಟಾಗಿದೆ. ಜೋ ಬಿಡೆನ್ ಆಡಳಿತವು ಬೌದ್ಧಿಕ ಆಸ್ತಿ ಸಂರಕ್ಷಣೆಯನ್ನು ಬಲವಾಗಿ ನಂಬುತ್ತದೆ. ಆದರೆ, ಕೋವಿಡ್‌ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಉದ್ದೇಶದಿಂದ ಕೋವಿಡ್‌ ಲಸಿಕೆಗಳಿಗೆ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದನ್ನು ಬೆಂಬಲಿಸುತ್ತದೆ ಎಂದು ಯುಎಸ್ ವ್ಯಾಪಾರ ಪ್ರತಿನಿಧಿ ಕ್ಯಾಥರೀನ್‌ ತೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
US President Joe Biden's administration on Wednesday announced support for a global waiver on patent protections for Covid-19 vaccines, offering hope to poor nations that have struggled to access the life-saving doses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X