ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ-ಚೀನಾ ಗಡಿ ಸಂಘರ್ಷವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಅಮೆರಿಕ

|
Google Oneindia Kannada News

ವಾಷಿಂಗ್ಟನ್, ಜೂನ್ 17: ಪೂರ್ವ ಲಡಾಖ್‌ನಲ್ಲಿ ನಡೆಯುತ್ತಿರುವ ಭಾರತ-ಚೀನಾ ನಡುವಿನ ಸಂಘರ್ಷವನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಎಂದು ಅಮೆರಿಕ ಹೇಳಿದೆ.

ಭಾರತ ಮತ್ತು ಚೀನಾ ಸೇನೆಗಳಿಂದ ಪೂರ್ವ ಲಡಾಖ್ ನ ಗಡಿ ವಾಸ್ತವ ರೇಖೆ ಬಳಿ ಏನಾಗುತ್ತಿದೆ ಎಂದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತ ಹೇಳಿದೆ.

ಚೀನಾ-ಭಾರತ ಘರ್ಷಣೆ: ಈವರೆಗೂ ಬೆಳವಣಿಗೆಯ ಪ್ರಮುಖ ಅಂಶಗಳುಚೀನಾ-ಭಾರತ ಘರ್ಷಣೆ: ಈವರೆಗೂ ಬೆಳವಣಿಗೆಯ ಪ್ರಮುಖ ಅಂಶಗಳು

ಹುತಾತ್ಮ ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ. ಸದ್ಯದ ಪರಿಸ್ಥಿತಿಯನ್ನು ಶಾಂತಿಯುತವಾಗಿ ಮಾತುಕತೆ ಮೂಲಕ ಎರಡೂ ದೇಶಗಳುಬಗೆಹರಿಸಿಕೊಳ್ಳಬೇಕೆಂದು ಬಯಸುತ್ತೇವೆ ಎಂದು ಅಮೆರಿಕ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

US Closely Monitoring India China Border Issue

ಕಳೆದ ಜೂನ್ 2ರಂದು ದೂರವಾಣಿ ಸಂಭಾಷಣೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ-ಚೀನಾ ಗಡಿಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು.

ಭಾರತ-ಚೀನಾ ಮುಖಾಮುಖಿ: ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮಭಾರತ-ಚೀನಾ ಮುಖಾಮುಖಿ: ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮ

ಭಾರತ ಮತ್ತು ಚೀನಾ ಸೇನಾಪಡೆಗಳಿಂದ ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಘರ್ಷಣೆ ನಡೆದು ಎರಡೂ ದೇಶಗಳ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪ್ರತಿಕ್ರಿಯಿಸಿದ ಅಮೆರಿಕ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ ಎಂದಿದೆ.

ಲಡಾಖ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ: ಆತಂಕ ವ್ಯಕ್ತಪಡಿಸಿದ ಡಿಎಸ್ ಹೂಡಾಲಡಾಖ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ: ಆತಂಕ ವ್ಯಕ್ತಪಡಿಸಿದ ಡಿಎಸ್ ಹೂಡಾ

ಈ ಮಧ್ಯೆ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, ಭಾರತ-ಚೀನಾ ಗಡಿಭಾಗದಲ್ಲಿ ಆಗುತ್ತಿರುವ ಸಾವು-ನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಸಾಧ್ಯವಾದಷ್ಟು ಹಿಂಸಾಚಾರವನ್ನು ನಿಲ್ಲಿಸಿ ಶಾಂತಿಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ಅವರ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

English summary
The United states Tuesday said it is closely monitoring the situation between India and China after a violent face-off between troops of the two countries at the Line Of Actual Control and has extended support to a peaceful resolution of the current situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X