ಅಮೆರಿಕದ 46ನೇ ಅಧ್ಯಕ್ಷರಾಗಿ ಬೈಡೆನ್ ಆಯ್ಕೆ
ವಾಷಿಂಗ್ಟನ್, ನವೆಂಬರ್ 7: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿನ ಗೊಂದಲ ಅಂತ್ಯಗೊಂಡಿದೆ. ಪೆನ್ಸಿಲ್ವೇನಿಯಾದಲ್ಲಿ ಗೆಲುವು ಸಾಧಿಸುವ ಮೂಲಕ ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಅಂತಿಮವಾಗಿ ಆಯ್ಕೆಯಾಗಿದ್ದು, ಭಾರತ ಮೂಲದ ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ ಸ್ಥಾನಕ್ಕೆ ಏರಲಿದ್ದಾರೆ. ಇದರಿಂದ ರಿಪಬ್ಲಿಕನ್ ಪಕ್ಷದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮುಖಭಂಗವಾದಂತಾಗಿದೆ.
ಮಂಗಳವಾರ ನಡೆದಿದ್ದ ಚುನಾವಣೆಯ ಅಂತಿಮ ಫಲಿತಾಂಶ ವಿವಿಧ ಕಾರಣಗಳಿಂದ ವಿಳಂಬವಾಗಿತ್ತು. ಆದರೆ ಶನಿವಾರ ಪ್ರಮುಖ ರಾಜ್ಯವಾದ ಪೆನ್ಸಿಲ್ವೇಲಿಯಾದ ಫಲಿತಾಂಶ ಹೊರಬಂದಿದ್ದು, ಅಧ್ಯಕ್ಷರಾಗಲು ಅಗತ್ಯವಿದ್ದ ಎಲೆಕ್ಟೊರಲ್ ಮತಗಳ ಗಡಿ ದಾಟುವಲ್ಲಿ ಬೈಡೆನ್ ಅವರಿಗೆ ನೆರವಾಗಿದೆ. ಪೆನ್ಸಿಲ್ವೇನಿಯಾದ 20 ಮತಗಳೊಂದಿಗೆ ಬೈಡೆನ್ 273 ಎಲೆಕ್ಟೊರಲ್ ಮತಗಳನ್ನು ಪಡೆದಿದ್ದಾರೆ. ಇದರಿಂದ ತೀವ್ರ ಹಣಾಹಣಿಯ ರೇಸ್‌ನಲ್ಲಿ ಟ್ರಂಪ್ ಅವರನ್ನು ಬೈಡೆನ್ ಮಣಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.
ಅಮೆರಿಕದ ಐತಿಹಾಸಿಕ ಚುನಾವಣೆಯಲ್ಲಿ ಜೋ ಬೈಡೆನ್ ಜಯಗಳಿಸಿದ್ದಾರೆ ಎಂದು ಸಿಎನ್ಎನ್, ಎಪಿ ಮತ್ತು ಎಬಿಸಿ ಸುದ್ದಿ ವಾಹಿನಿಗಳು ಕೂಡ ಪ್ರಕಟಿಸಿವೆ. ಮತ ಎಣಿಕೆ ಪ್ರಾರಂಭವಾದ ಸಂದರ್ಭದಿಂದಲೂ ಜೋ ಬೈಡೆನ್, ಟ್ರಂಪ್ ಅವರಿಗಿಂತ ಎಲೆಕ್ಟೊರಲ್ ಮತಗಳಲ್ಲಿ ಮುನ್ನಡೆ ಪಡೆದಿದ್ದರು. ಆದರೆ ಎರಡು ದಿನಗಳಿಂದ ಜಾರ್ಜಿಯಾ, ಪೆನ್ಸಿಲ್ವೇನಿಯಾ, ನಾರ್ತ್ ಕೆರೊಲಿನಾ, ನೆವಾಡಗಳಲ್ಲಿನ ಮತಗಳ ಎಣಿಕೆ ಮತ್ತು ಫಲಿತಾಂಶ ಬಾಕಿ ಉಳಿದಿತ್ತು. ನೆವಾಡದಲ್ಲಿನ ಆರು ಎಲೆಕ್ಟೊರಲ್ ಮತಗಳನ್ನು ಕೂಡ ಬೈಡೆನ್ ಗೆದ್ದಿದ್ದಾರೆ. ಮುಂದೆ ಓದಿ.

ಕಮಲಾ ಹ್ಯಾರಿಸ್ ದಾಖಲೆ
ತಮಿಳುನಾಡಿನ ಮೂಲದ ಕಮಲಾ ಹ್ಯಾರಿಸ್ ಅವರು ಅಮೆರಿಕದ ಮುಂದಿನ ಉಪಾಧ್ಯಕ್ಷರಾಗಲಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಈ ಮೂಲಕ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಏರಲಿರುವ ಮೊದಲ ಮಹಿಳೆ ಎನಿಸಲಿದ್ದಾರೆ. ಅಷ್ಟೇ ಅಲ್ಲ, ಅವರು ದೇಶದ ಮೊದಲ ಕಪ್ಪು ವರ್ಣೀಯ ಹಾಗೂ ದಕ್ಷಿಣ ಏಷ್ಯಾ ಮೂಲದ ಉಪಾಧ್ಯಕ್ಷೆ ಎಂಬ ಕೀರ್ತಿಗೂ ಪಾತ್ರರಾಗಲಿದ್ದಾರೆ.

ನಾನೇ ಗೆದ್ದೆ ಎಂದ ಟ್ರಂಪ್
ಸಿಎನ್ಎನ್ ಮತ್ತು ಇತರೆ ಮಾಧ್ಯಮ ಸಂಸ್ಥೆಗಳು ಜೋ ಬೈಡೆನ್ ಅವರ ಗೆಲುವನ್ನು ಅಧಿಕೃತವಾಗಿ ಪ್ರಕಟಿಸುವ ಮುನ್ನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಚಿತ್ರ ಟ್ವೀಟ್ ಮಾಡಿದ್ದಾರೆ. 'ನಾನು ಈ ಚುನಾವಣೆಯಲ್ಲಿ ಬಹಳಷ್ಟು ಅಂತರದಿಂದ ಗೆದ್ದಿದ್ದೇನೆ' ಎಂದು ಅವರು ಹೇಳಿಕೊಂಡಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಜಯ
ಪೆನ್ಸಿಲ್ವೇನಿಯಾದಲ್ಲಿ ಜೋ ಬೈಡೆನ್ ಅವರು 3,345,906 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ 3,311,448 ಮತಗಳನ್ನು ಗಳಿಸಿದ್ದಾರೆ. ಶೇ 49.68ರಷ್ಟು ಮತಗಳನ್ನು ಪಡೆದಿರುವ ಬೈಡೆನ್, ಶೇ 49.17ರಷ್ಟು ಮತಗಳನ್ನು ಗಳಿಸಿದ ಟ್ರಂಪ್ ಅವರಿಗಿಂತ ಅಲ್ಪ ಮತಗಳಿಂದ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ.

ಅಮೆರಿಕದ ಅತಿ ಹಿರಿಯ ಅಧ್ಯಕ್ಷ
ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿ ಮುಗಿಯಲಿದೆ. ಬಳಿಕ ಬೈಡನ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ತಿಂಗಳ ಅಂತ್ಯಕ್ಕೆ 78ನೇ ವರ್ಷಕ್ಕೆ ಕಾಲಿಡಲಿರುವ ಬೈಡನ್, ಅಮೆರಿಕದ ಅತ್ಯಂತ ಹಿರಿಯ ಅಧ್ಯಕ್ಷ ಎನಿಸಿಕೊಳ್ಳಲಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications