ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಎಸ್ಎ: 16 ವರ್ಷ ಮತ್ತು ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ವಾಶಿಂಗ್ಟನ್, ಏಪ್ರಿಲ್ 20: ಯುನೈಟೆಡ್ ಸ್ಟೇಟ್ಸ್‌ನಲ್ಲಿ 16 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೊನಾವೈರಸ್ ಲಸಿಕೆ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತಾರೆ ಎಂದು ವಿಪತ್ತು ನಿರ್ವಹಣೆ ಮತ್ತು ನಿಯಂತ್ರಣ ಸಮಿತಿ ಸೋಮವಾರ ಘೋಷಿಸಿದೆ.

ದೇಶದಲ್ಲಿ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾವೈರಸ್ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಸಾಂಕ್ರಾಮಿಕ ಪಿಡುಗಿನಿಂದ ಅಪಾಯ ಎದುರಿಸುತ್ತಿರುವ 16 ವರ್ಷದ ಮೇಲಿನ ಎಲ್ಲರಿಗೂ ಕೊವಿಡ್-19 ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಅನುಮತಿ ನೀಡಲಾಗಿದೆ.

ಕೊರೊನಾ ಮೊದಲ ಹಾಗೂ 2ನೇ ಅಲೆ ಲಕ್ಷಣಗಳ ನಡುವಿನ ವ್ಯತ್ಯಾಸ ಹೀಗಿದೆ!ಕೊರೊನಾ ಮೊದಲ ಹಾಗೂ 2ನೇ ಅಲೆ ಲಕ್ಷಣಗಳ ನಡುವಿನ ವ್ಯತ್ಯಾಸ ಹೀಗಿದೆ!

ಯುನೈಟೆಡ್ ಸ್ಟೇಟ್ಸ್ ಆಫ್ ಆಮೆರಿಕಾದಲ್ಲಿ ಈಗಾಗಲೇ 16 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ. ಅಲಸ್ಕಾ, ಜಾರ್ಜಿಯಾ, ಟೆಕ್ಸಾಸ್ ಮತ್ತು ಕ್ಯಾಲಿಪೋರ್ನಿಯಾದಲ್ಲಿ ಲಸಿಕೆ ವಿತರಣೆ ಕಾರ್ಯವನ್ನು ಆರಂಭಿಸಲಾಗಿದೆ.

US: Everyone Aged 16 And Above Is Eligible For Takes Corona Vaccine

ಏಪ್ರಿಲ್ ತಿಂಗಳಿನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ:

ಕಳೆದ ಏಪ್ರಿಲ್ ತಿಂಗಳಿನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾವೈರಸ್ ಲಸಿಕೆ ನೀಡುವುದಕ್ಕೆ ಅಧ್ಯಕ್ಷ ಜೋ ಬಿಡೆನ್ ನಿರ್ದೇಶನ ನೀಡಿದ್ದರು. ಪ್ರಸ್ತುತ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಡಿಮೆ ವಯಸ್ಸಿನವರಿಗೆ ನೀಡುವುದಕ್ಕಾಗಿ ಯಾವುದೇ ಲಸಿಕೆಗೆ ಅನುಮೋದನೆ ಸಿಕ್ಕಿಲ್ಲ. ಈ ಸಂಬಂಧ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದರ ನಡುವೆ ಸರ್ಕಾರ ಲಸಿಕೆ ವಿತರಣೆಗೆ ಅನುಮತಿ ನೀಡಿದೆ.

ಅಮೆರಿಕಾದಲ್ಲಿ ಕೊರೊನಾವೈರಸ್ ಸೋಂಕು:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಒಂದೇ ದಿನ 488 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5,81,542ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 51,650 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,24,75,043ಕ್ಕೆ ಏರಿಕೆಯಾಗಿದೆ.

English summary
US: Everyone Aged 16 And Above Is Eligible For Takes Corona Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X