ಬರಾಕ್ ಒಬಾಮಾರಿಗೆ ಕೊವಿಡ್-19; ಯುಎಸ್ ನೆಲದಲ್ಲಿ ಹೇಗಿದೆ ಮಹಾಮಾರಿ ಎಫೆಕ್ಟ್?
ನ್ಯೂಯಾರ್ಕ್, ಮಾರ್ಚಟ್ 14: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೋದ್ಯಾ ಪಿಶಾಚಿ ಎಂದರೆ ಬಂದೆ ಗವಾಕ್ಷಿ ಅನ್ನೋ ಹಾಗಾಗಿದೆ. ಯುನೈಟೆಡ್ ಸ್ಟೇಟ್ಸ್ ನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಕಳೆದ ಒಂದು ತಿಂಗಳಿಗೆ ಹೋಲಿಸಿದರೆ ಬಹುಪಾಲು ಕಡಿಮೆಯಾಗಿದೆ. ಇದರ ಮಧ್ಯೆ ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.
My best wishes @BarackObama for your quick recovery from COVID-19, and for your family's good health and wellbeing. https://t.co/mCrUvXlsAp
— Narendra Modi (@narendramodi) March 14, 2022
ಭಾನುವಾರ ವೈದ್ಯಕೀಯ ಪರೀಕ್ಷೆಗೆ ಒಳಗಾದ ಬರಾಕ್ ಒಬಾಮಾರಿಗೆ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕುರಿತು ಸ್ವತಃ ಬರಾಕ್ ಒಬಾಮಾ ಟ್ವೀಟ್ ಮಾಡಿಕೊಂಡಿದ್ದಾರೆ. "ಕಳೆದ ಕೆಲವು ದಿನಗಳಿಂದ ಗಂಟಲಿನಲ್ಲಿ ಕಿರಿಕಿರಿಯಾಗುತ್ತಿದ್ದ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಾಗ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಇದನ್ನು ಹೊರತುಪಡಿಸಿದರೆ ಬೇರೆ ಯಾವ ಆರೋಗ್ಯ ಸಮಸ್ಯೆಗಳಿಲ್ಲ. ನಾನು ಮತ್ತು ಮಿಚೆಲ್ ಎರಡೂ ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದು, ಬೂಸ್ಟರ್ ಡೋಸ್ ಅನ್ನು ಕೂಡ ಪಡೆದುಕೊಂಡಿದ್ದೇವೆ. ಮಿಚೆಲ್ ಕೂಡ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದು, ಕೊವಿಡ್-19 ಸೋಂಕಿನ ನೆಗೆಟಿವ್ ವರದಿ ಬಂದಿದೆ," ಎಂದು ಬರಾಕ್ ಒಬಾಮಾ ಟ್ವೀಟ್ ಮಾಡಿದ್ದಾರೆ.
ಕೊವಿಡ್-19 ಲಸಿಕೆ ಪಡೆದುಕೊಳ್ಳುವಂತೆ ಒಬಾಮಾ ಸಲಹೆ:
"ಯುನೈಟೆಡ್ ಸ್ಟೇಟ್ಸ್ ಆಪ್ ಅಮೆರಿಕಾದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹಾಗೆಂದ ಮಾತ್ರಕ್ಕೆ ಲಸಿಕೆ ಕುರಿತು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಭಾವನೆ ತೋರಿಸಬೇಡಿ. ಎಲ್ಲರೂ ಕಡ್ಡಾಯವಾಗಿ ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು," ಎಂದು ಬರಾಕ್ ಒಬಾಮಾ ಟ್ವೀಟ್ ಸಂದೇಶದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಒಬಾಮಾಗೆ ಪ್ರಧಾನಿ ಮೋದಿ ಶುಭ ಹಾರೈಕೆ:
"ಕೊವಿಡ್-19 ಸೋಂಕು ತಗುಲಿರುವ ಬರಾಕ್ ಒಬಾಮಾ ಶೀಘ್ರದಲ್ಲಿಯೇ ಗುಣಮುಖರಾಗಲಿ. ನೀವು ಮತ್ತು ನಿಮ್ಮ ಕುಟುಂಬಕ್ಕೆ ಉತ್ತಮ ಆರೋಗ್ಯ ಸಿಗಲಿ ಎಂದು ಶುಭ ಹಾರೈಸುತ್ತೇನೆ," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಒಂದೇ ದಿನ 3 ಸಾವಿರ ಮಂದಿಗೆ ಕೊವಿಡ್:
ಯುನೈಟೆಡ್ ಸ್ಟೇಟ್ಸ್ ನಲ್ಲೂ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆ ಭೀತಿ ತಗ್ಗಿದೆ. ದೇಶದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 5ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 5,143 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 118 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 155,965 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 81,174,677ಕ್ಕೆ ಏರಿಕೆಯಾಗಿದೆ. ಈ ಪೈಕಿ 56,071,103 ಸೋಂಕಿತರು ಗುಣಮುಖರಾಗಿದ್ದರೆ, 993,811 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 24,109,763 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 458,713,563 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,067,226 ಮಂದಿ ಪ್ರಾಣ ಬಿಟ್ಟಿದ್ದಾರೆ. 392,140,531 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 60,505,806 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.












Click it and Unblock the Notifications