ಅಮೆರಿಕದ ಮೇಲೆ ಡೆಡ್ಲಿ ಸೈಬರ್ ಅಟ್ಯಾಕ್, ಪೆಟ್ರೋಲ್-ಡೀಸೆಲ್ ಬೆಲೆ ಭಾರಿ ಏರಿಕೆ
ಕೊರೊನಾ ಬಿರುಗಾಳಿಗೆ ತತ್ತರಿಸಿರುವ ಅಮೆರಿಕದಲ್ಲಿ ಸೈಬರ್ ಕಳ್ಳರ ಅಟ್ಟಹಾಸ ಜೋರಾಗಿದ್ದು, ಇತ್ತೀಚೆಗಷ್ಟೇ ಅಮೆರಿಕದ ತೈಲ ಸರಬರಾಜು ವ್ಯವಸ್ಥೆ ಮೇಲೆ ನಡೆದಿದ್ದ ಸೈಬರ್ ಅಟ್ಯಾಕ್ ಅಮೆರಿಕದ ತೈಲ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ.
ಕೆಲ ದಿನಗಳ ಹಿಂದಷ್ಟೇ ಅಮೆರಿಕದ ಇಂಧನ ಪೂರೈಕೆಯ ಬಹುದೊಡ್ಡ ಜಾಲ ಕಲೋನಿಯಲ್ ಪೈಪ್‌ಲೈನ್ ಸಂಸ್ಥೆಯ ಕಂಪ್ಯೂಟರ್ ವ್ಯವಸ್ಥೆ ಮೇಲೆ ಸೈಬರ್ ಅಟ್ಯಾಕ್ ನಡೆದಿತ್ತು. ದಾಳಿಯ ಬಳಿಕ ತಕ್ಷಣ ತೈಲ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಸುಮಾರು 8900 ಕಿ.ಮೀ. ಉದ್ದದ ತೈಲ ಸಂಪರ್ಕ ಜಾಲ ಅಮೆರಿಕದ ಪಶ್ಚಿಮ ರಾಜ್ಯಗಳ ಜೀವನಾಡಿ.
ಪ್ರತಿದಿನ ಈ ಪೈಪ್‌ಲೈನ್ ಮೂಲಕ ಸುಮಾರು 2.5 ಮಿಲಿಯನ್ ಬ್ಯಾರಲ್ ತೈಲ ಸರಬರಾಜು ಮಾಡಲಾಗುತ್ತಿತ್ತು. ಆದ್ರೆ ದಿಢೀರ್ ಸೈಬರ್ ಅಟ್ಯಾಕ್ ನಡೆದ ಬಳಿಕ ಪೈಪ್‌ಲೈನ್ ಮೇಲೆ ಅಮೆರಿಕ ಇಂಧನ ಇಲಾಖೆ ಸಂಪರ್ಕ ಕಳೆದುಕೊಂಡು ಪೈಪ್‌ಲೈನ್ ಬಂದ್ ಮಾಡಿತ್ತು.
ತೈಲ ಪೂರೈಕೆ ಪುನಾರಂಭವಾದರೂ ಪರಿಸ್ಥಿತಿ ಸದ್ಯಕ್ಕೆ ಸರಿಹೋಗುವ ಸಾಧ್ಯತೆ ಇಲ್ಲ. ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು ನ್ಯೂಯಾರ್ಕ್, ಟೆಕ್ಸಾಸ್ ಸೇರಿದಂತೆ ಅಮೆರಿಕದ ಪಶ್ಚಿಮ ಕರಾವಳಿ ರಾಜ್ಯಗಳ ಜನ ನಲುಗಿ ಹೋಗಿದ್ದಾರೆ.

ಕೊರೊನಾ ನಡುವೆ ಬೆಲೆ ಶಾಕ್..!
ಇಡೀ ಜಗತ್ತಿನಲ್ಲಿ ಅತಿಹೆಚ್ಚು ತೈಲ ಬಳಸುವ ರಾಷ್ಟ್ರ ಅಮೆರಿಕ. ಆದರೆ ಅಮೆರಿಕ ತೈಲ ಪೂರೈಕೆಯ ಬಹುದೊಡ್ಡ ಜಾಲಕ್ಕೆ ಪೆಟ್ಟು ಬಿದ್ದಿರುವುದು ನುಂಗಲಾರದ ತುತ್ತಾಗಿದೆ. ಕೊರೊನಾ ಬೇಗೆಯಲ್ಲಿ ಬೇಯುತ್ತಿರುವ ಅಮೆರಿಕದ ಜನಕ್ಕೆ ಇದು ಶಾಕ್ ಮೇಲೆ ಶಾಕ್ ಕೊಟ್ಟಿದೆ.
ಪೂರೈಕೆ ಕಡಿಮೆಯಾದ ಸಂದರ್ಭದಲ್ಲಿ ಬೆಲೆ ಏರಿಕೆ ಆಗುವುದು ಮಾಮೂಲು. ಈಗಲೂ ಅದೇ ಆಗಿದ್ದು, ಬೇಡಿಕೆಯಷ್ಟು ತೈಲ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದೆಲ್ಲಾ ಸರಿಹೋಗಲು ಇನ್ನೂ ಕೆಲವು ವಾರಗಳೇ ಬೇಕು ಎನ್ನುತ್ತಿದ್ದಾರೆ ತಜ್ಞರು. ತೈಲ ಸರಬರಾಜು ವ್ಯವಸ್ಥೆಯ ಮೇಲೆ ಸೈಬರ್ ದಾಳಿ ನಡೆದ ಬಳಿಕ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ನಿರಂತರ ಸೈಬರ್ ಅಟ್ಯಾಕ್..!
ಅಮೆರಿಕದ ಮೇಲೆ ಕೆಲ ತಿಂಗಳಿಂದ ನಿರಂತರವಾಗಿ ಸೈಬರ್ ದಾಳಿ ನಡೆಯುತ್ತಿದೆ. ಹಿಂದೆ ಅಮೆರಿಕ ಹಣಕಾಸು ಇಲಾಖೆ, ಅಣುಸ್ಥಾವರ ಸೇರಿದಂತೆ ಇಂಧನ ಇಲಾಖೆಯ ಮೇಲೂ ದಾಳಿಗಳು ನಡೆದಿದ್ದವು. ಈ ಕಾರಣಕ್ಕಾಗಿ ಅಮೆರಿಕ-ರಷ್ಯಾ ಮಧ್ಯೆ ತಿಕ್ಕಾಟ ಮುಂದುವರಿದಿರುವ ಸಂದರ್ಭದಲ್ಲೇ ಮತ್ತೆ ಅಮೆರಿಕದ ಇಂಧನ ಇಲಾಖೆ ಮೇಲೆ ಸೈಬರ್ ಕಳ್ಳರು ದಾಳಿ ಮಾಡಿದ್ದಾರೆ. ಸಹಜವಾಗಿ ಈ ಘಟನೆ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದು, ಅಮೆರಿಕ ಅಧ್ಯಕ್ಷ ಬೈಡನ್ ಕೆಂಡವಾಗಿದ್ದಾರೆ. ಮತ್ತೊಮ್ಮೆ ರಷ್ಯಾ ಕಡೆ ಅಮೆರಿಕದ ಅನುಮಾನದ ದೃಷ್ಟಿ ನೆಟ್ಟಿದೆ.

ರಷ್ಯನ್ ಹ್ಯಾಕರ್ಸ್ ಬಗ್ಗೆ ಭಯವೇಕೆ..?
ಜಗತ್ತಿನಲ್ಲಿ ರಷ್ಯನ್ ಹ್ಯಾಕರ್ಸ್ ಹೆಸರು ಕೇಳಿದರೆ ಭಯ ಆವರಿಸಿಬಿಡುತ್ತದೆ. ಏಕೆಂದರೆ ರಷ್ಯಾದ ಹ್ಯಾಕರ್‌ಗಳು ಅಷ್ಟು ಖತರ್ನಾಕ್. ಚಿಟಿಕೆ ಹೊಡೆಯುವುದರ ಒಳಗಾಗಿ ಎಂತಹ ಪ್ರಬಲ ಕಂಪ್ಯೂಟರ್‌ಗಳನ್ನು ಬೇಕಾದರೂ ಮುಳುಗಿಸಿಬಿಡುತ್ತಾರೆ. ಅದೆಷ್ಟೇ ಸೈಬರ್ ಸೆಕ್ಯೂರಿಟಿ ಕೊಟ್ಟಿದ್ದರೂ ರಷ್ಯನ್ ಹ್ಯಾಕರ್ಸ್ ಕೈಯಿಂದ ಬಚಾವ್ ಆಗುವುದು ತುಂಬಾನೇ ಕಷ್ಟ. ಅದರಲ್ಲೂ ಅಮೆರಿಕದ ಕಂಪ್ಯೂಟರ್‌ಗಳು ಎಂದರೆ ರಷ್ಯಾ ಹ್ಯಾಕರ್ಸ್‌ಗೆ ಬಲು ಪ್ರೀತಿ. ಹೀಗಾಗಿ ಪದೇ ಪದೆ ಅಮೆರಿಕದ ಮೇಲೆ ಸೈಬರ್ ದಾಳಿಗಳು ನಡೆಯುತ್ತಿವೆ ಎಂಬ ಆರೋಪವಿದೆ.

ಚುನಾವಣೆಗೆ ಮೊದಲು ಹೀಗೆ ಆಗಿತ್ತು..!
ಅಂದಹಾಗೆ 8 ತಿಂಗಳ ಅಂತರದಲ್ಲಿ ಅಮೆರಿಕದ ಸರ್ಕಾರಿ ಇಲಾಖೆಗಳ ಮೇಲೆ ನಡೆಯುತ್ತಿರುವ 4ನೇ ಸೈಬರ್ ದಾಳಿ ಇದಾಗಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ 1 ವಾರ ಬಾಕಿ ಇರುವಾಗಲೇ ದಾಳಿ ನಡೆದಿತ್ತು. ಕಳೆದ ಅಕ್ಟೋಬರ್ ಅಂತ್ಯದಲ್ಲಿ ನಡೆದಿದ್ದ ಈ ಘಟನೆಯಲ್ಲಿ ಅಮೆರಿಕದ ಮತದಾರರ ಮಾಹಿತಿ ಕದ್ದಿರುವ ಆರೋಪ ಕೇಳಿಬಂದಿತ್ತು. ಅಲ್ಲದೆ ಅಮೆರಿಕದ ನೀರು ಸರಬರಾಜು ಕೇಂದ್ರ, ಪವರ್ ಗ್ರೀಡ್ ಸೇರಿದಂತೆ ನ್ಯೂಕ್ಲಿಯರ್ ಪ್ಲಾಂಟ್‌ಗಳನ್ನ ರಷ್ಯಾ ಹ್ಯಾಕರ್ಸ್ ಟಾರ್ಗೆಟ್ ಮಾಡಿದ್ದಾರೆ ಎಂದು ಅಮೆರಿಕ ಗಂಭೀರ ಆರೋಪ ಮಾಡಿತ್ತು.
Recommended Video

ಅಮೆರಿಕದ ಖಜಾನೆಗೂ ಗುನ್ನಾ..!
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮೊದಲು ಮಾತ್ರವಲ್ಲ, ಚುನಾವಣೆ ಮುಗಿದ ಮೇಲೂ ಹಲವು ಬಾರಿ ಅಮೆರಿಕದಲ್ಲಿ ಸೈಬರ್ ಅಟ್ಯಾಕ್ ಆಗಿದೆ. ಕಳೆದ ಡಿಸೆಂಬರ್‌ನಲ್ಲಿ ಅಮೆರಿಕ ಹಣಕಾಸು ಇಲಾಖೆ ಕಂಪ್ಯೂಟರ್ ಲಪಟಾಯಿಸಿರುವ ಆರೋಪ ಕೇಳಿಬಂದಿತ್ತು. ದೊಡ್ಡಣ್ಣ ಅಮೆರಿಕದ ಹಣಕಾಸು ಇಲಾಖೆಗೆ ಸಂಬಂಧಿಸಿದ ಬಹುಮುಖ್ಯ ದಾಖಲೆಗಳನ್ನು ಹ್ಯಾಕರ್‌ಗಳು ಕದ್ದಿದ್ದಾರೆ ಎನ್ನಲಾಗಿತ್ತು. ಹೀಗೆ ತಮ್ಮ ವಿರುದ್ಧ ಸೈಬರ್ ದಾಳಿ ನಡೆದಾಗಲೆಲ್ಲಾ ಅಮೆರಿಕ ರಷ್ಯಾ ಕಡೆಗೆ ಬೆರಳು ತೋರಿಸುತ್ತಾ ಬಂದಿದೆ. ಸೈಬರ್ ಅಟ್ಯಾಕ್ ರಷ್ಯಾ ಮೂಲದ ಹ್ಯಾಕರ್ಸ್ ಕೃತ್ಯ ಎಂದು ಅಮೆರಿಕ ಆರೋಪಿಸುತ್ತಾ ಬಂದಿದೆ. ಆದರೆ ಈವರೆಗೂ ರಷ್ಯಾ ಸೈಬರ್ ಅಟ್ಯಾಕ್ ಮಾಡಿದೆ ಎಂಬುದಕ್ಕೆ ಬಲವಾದ ಸಾಕ್ಷಿ ಸಿಕ್ಕಿಲ್ಲ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications