ವಾಗ್ದಂಡನೆಯ ವಿಚಾರಣೆಯಲ್ಲಿ ಗೆಲುವು ಸಾಧಿಸಿದ ಟ್ರಂಪ್

ವಾಷಿಂಗ್ಟನ್, ಫೆಬ್ರವರಿ 06: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ವಾಗ್ದಂಡನೆಯ ವಿಚಾರಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅಮೆರಿಕದ 45ನೇ ಅಧ್ಯಕ್ಷ ಸ್ಥಾನವನ್ನು ಟ್ರಂಪ್ ಉಳಿಸಿಕೊಂಡಿದ್ದಾರೆ. ಟ್ರಂಪ್ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷಾತೀತವಾಗಿ ನಿರ್ಧರಿಸಲಾಗಿದೆ ಎಂದು ಸೆನೆಟ್ ಘೋಷಿಸಿದೆ.

ಅಮೆರಿಕದ ಇತಿಹಾಸದಲ್ಲಿ ಮೂರನೇ ಬಾರಿಗೆ ಈ ಪ್ರಕ್ರಿಯೆಗಾಗಿ ಸೆನೆಟ್ ಸದನ ವಾಗ್ದಂಡನೆಯ ನ್ಯಾಯಾಲಯವಾಗಿ ಬದಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ವಹಿಸಿಕೊಂಡಿದ್ದರು.

ಸೆನೆಟ್ ವಿಚಾರಣೆ ಏಕೆ?: ಅಧಿಕಾರ ದುರುಪಯೋಗದ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ಸಭೆಯಲ್ಲಿ ವಾಗ್ದಂಡನೆಗೆ ಗುರಿಪಡಿಸಲಾಗಿತ್ತು. ಜನಪ್ರತಿನಿಧಿಗಳ ಸಭೆಯಲ್ಲಿ ತೀವ್ರ ಚರ್ಚೆ, ವಾಗ್ವಾದದ ಬಳಿಕ ವಾಗ್ದಂಡನೆಗೆ ಮತ ಚಲಾವಣೆ ಮಾಡಲಾಗಿದ್ದು, ಇದರಲ್ಲಿ ಟ್ರಂಪ್ ಸೋಲು ಅನುಭವಿಸಿದ್ದರು.

US President Donald Trump survived impeachment

ಅಧಿಕಾರ ದುರುಪಯೋಗ ಮತ್ತು ಕಾಂಗ್ರೆಸ್‌ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ್ದರ ಎರಡು ಅಂಶಗಳ ವಿರುದ್ಧ ಡೊನಾಲ್ಡ್ ಟ್ರಂಪ್ ವಿರುದ್ಧ ಡೆಮಾಕ್ರಟಿಕ್ ಪಕ್ಷದ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದರು. ಅಂದು ಟ್ರಂಪ್ ವಿರುದ್ಧ 230 ಮತಗಳು ಬಿದ್ದರೆ, ಅವರ ಪರ 197 ಮತಗಳು ಚಲಾವಣೆಗೊಂಡಿತ್ತು. ಹೀಗಾಗಿ ಸೆನೆಟ್ ಮುಂದೆ ವಿಚಾರಣೆ ನಡೆಸಿ, ಅಧ್ಯಕ್ಷ ಸ್ಥಾನದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಅಗತ್ಯ ತಲೆದೋರಿತ್ತು.

ಸೆನೆಟ್ ಶಿಕ್ಷೆ ವಿಧಿಸಿದರೆ ಮಾತ್ರ ಅಧ್ಯಕ್ಷರನ್ನು ಅವರ ಸ್ಥಾನದಿಂದ ವಜಾಗೊಳಿಸಬಹುದು. ಅದಕ್ಕೆ ಮೂರನೇ ಎರಡರಷ್ಟು ಮತಗಳು ಅವರ ವಿರುದ್ಧ ಬೀಳಬೇಕಾಗುತ್ತದೆ. ಆದರೆ ಸೆನೆಟ್‌ನಲ್ಲಿ ರಿಪಬ್ಲಿಕನ್ ಪಕ್ಷವು 53-47 ಮತಗಳ ಬಹುಮತ ಹೊಂದಿದೆ. ಹೀಗಾಗಿ ಟ್ರಂಪ್ ವಿರುದ್ಧದ ವಾಗ್ದಂಡನೆ ಜಾರಿಯಾಗುವುದು ಅನುಮಾನವಾಗಿತ್ತು. ಟ್ರಂಪ್ ಗೂ ಮೊದಲು 1868ರಲ್ಲಿ ಆಂಡ್ರೂ ಜಾನ್ಸನ್ ಮತ್ತು 1998ರಲ್ಲಿ ಬಿಲ್ ಕ್ಲಿಂಟನ್ ವಾಗ್ದಂಡನೆ ವಿಚಾರಣೆ ಎದುರಿಸಿದ್ದ ಇವರಿಬ್ಬರು ಅಧ್ಯಕ್ಷಗಿರಿ ಕಳೆದುಕೊಂಡಿದ್ದರು.

ಟ್ರಂಪ್ ತಮ್ಮ ರಾಜಕೀಯ ಎದುರಾಳಿ, 2020ರ ಅಧ್ಯಕ್ಷೀಯ ಚುನಾವಣೆಯ ಪ್ರಮುಖ ಅಭ್ಯರ್ಥಿ ಹಾಗೂ ಮಾಜಿ ಉಪಾಧ್ಯಕ್ಷ ಜೋ ಬಿಡೆನ್ ವಿರುದ್ಧ ತನಿಖೆ ನಡೆಸುವಂತೆ ಉಕ್ರೇನ್ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ ಎಂದು ಡೆಮಾಕ್ರಟಿಕ್ ಪಕ್ಷದ ಸದಸ್ಯರು ಆರೋಪಿಸಿದ್ದರು. ಜತೆಗೆ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲು ನಿರಾಕರಿಸುವ ಮೂಲಕ ಅಡ್ಡಿಪಡಿಸಿದ್ದಾರೆ ಎಂದು ಸಹ ಆರೋಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+