2 ವಾರಗಳಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ: ಟ್ರಂಪ್

ವಾಷಿಂಗ್ಟನ್, ಮಾರ್ಚ್ 30: ಮುಂದಿನ ಎರಡು ವಾರಗಳಲ್ಲಿ ಕೊರೊನಾ ವೈರಸ್‌ನಿಂದ ಸಾಯುವವರ ಸಂಖ್ಯೆ ಅಮೆರಿಕದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

Recommended Video

      ದೇಶದ ಜನರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ | Modi | Oneindia Kannada

      ಒಂದೇ ದಿನದಲ್ಲಿ 518 ಮಂದಿ ಅಮೆರಿಕದಲ್ಲಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದು, ಹೀಗೆ ಮುಂದುವರೆದರೆ ಮುಂದಿನ 2 ವಾರಗಳಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಕಳವಳ ವ್ಯಕ್ತಪಡಿಸಿದ್ದಾರೆ.

      ಹೀಗಾಗಿ ಸಾಮಾಜಿಕ ಅಂತರವನ್ನು ಏಪ್ರಿಲ್ 30ರವರೆಗೆ ವಿಸ್ತರಣೆ ಮಾಡಿದ್ದಾರೆ. ಈಗಾಗಲೇ ವಿಶ್ವದಾದ್ಯಂತ 30 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜೂನ್ 1 ರ ಹೊತ್ತಿಗೆ ಪರಿಸ್ಥಿತಿ ಸುಧಾರಿಸುವ ನಂಬಿಕೆ ಇದೆ.ಹಾಗೂ ಆಸ್ಪತ್ರೆ ಸಿಬ್ಬಂದಿ, ಟಾಸ್ಕ್‌ಫೋರ್ಸ್‌ಗಳಿಗೆ ಕೆಲವು ನಿರ್ದೇಶನಗಳನ್ನು ಕೂಡ ಅವರು ನೀಡಿದ್ದಾರೆ.

      Coronavirus Claims 518 Lives In US Within 24 Hours

      ಅಮೆರಿಕದಲ್ಲಿ ಕಳೆದ ಗಂಟೆಗಳಲ್ಲಿ 518 ಮಂದಿ ಮೃತಪಟ್ಟಿದ್ದಾರೆ. ಶನಿವಾರ 453 ಮಂದಿ ಸಾವನ್ನಪ್ಪಿದ್ದರು. ಕೊರೊನಾ ವೈರಸ್‌ಗೆ ಅಮೆರಿಕದಲ್ಲಿ ಬಲಿಯಾದವರ ಸಂಖ್ಯೆ 2409ಕ್ಕೇರಿದೆ.

      ಏನಾಗಲ್ಲ ಏನಾಗಲ್ಲ ಎಂದು ಹೇಳುತ್ತಲೇ ಬಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಕೊರೊನಾ ವೈರಸ್ ಪರೀಕ್ಷೆ ಮಾಡಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ ಅಲ್ಲಿನ ಪರಿಸ್ಥಿತಿ ಏನು ಎಂದು ಅಂದಾಜಿಸಬಹುದು.

      ಇನ್ನು ಕೊರೊನಾ ವೈರಸ್ ಅಮೆರಿಕದ ಆರ್ಥಿಕ ಕ್ಷೇತ್ರದ ಮೇಲೂ ಭಾರೀ ಹೊಡೆತ ನೀಡಿದ್ದು, ಭೀಕರ ಆರ್ಥಿಕ ಕುಸಿತದ ಪರಿಣಾಮ ಎದುರಿಸಬೇಕಾದ ಸಾಧ್ಯತೆ ದಟ್ಟವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+