ಅಮೆರಿಕದಲ್ಲಿ ಒಂದೇ ದಿನ 52 ಸಾವಿರ ಕೊರೊನಾ ಸೋಂಕಿತರು ಪತ್ತೆ
ವಾಷಿಂಗ್ಟನ್, ಜುಲೈ 2: ಅಮೆರಿಕದಲ್ಲಿ ಒಂದೇ ದಿನ 52 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತೆ ಎಚ್ಚರಿಕೆ ಸಂದೇಶ ರವಾನಿಸಿದೆ. ಕ್ಯಾಲಿಫೋರ್ನಿಯಾದಿಂದ ಫ್ಲೋರಿಡಾದ ವರೆಗೆ ರೆಸ್ಟೋರೆಂಟ್ , ಬಾರ್‌ಗಳು ಹಾಗೂ ಬೀಚ್‌ಗಳನ್ನು ಬಂದ್ ಮಾಡಲಾಗಿದೆ.
ವಿಶ್ವದಾದ್ಯಂತ ಪ್ರತಿ ನಿತ್ಯ 1,60,000 ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಅಮೆರಿಕವು ತಮ್ಮ ದೇಶಕ್ಕೆ ಬರುವವರಿಗೆ 14 ದಿನಗಳ ಕ್ವಾರಂಟೈನ್ ವಿಧಿಸುತ್ತಿದೆ.
ಕ್ಯಾಲಿಫೋರ್ನಿಯಾದಲ್ಲಿ ಡೈನಿಂಗ್ ರೆಸ್ಟೋರೆಂಟ್‌ಗಳನ್ನು ಬಂದ್ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಯ ನೀಡಿದ್ದು, ಆದಷ್ಟು ಬೇಗ ಕೊರೊನಾ ವೈರಸ್ ಕಣ್ಮರೆಯಾಗಲಿದೆ ಎಂದು ಹೇಳಿದ್ದು, ಮಾಸ್ಕ್ ಧರಿಸಲು ಯಾವುದೇ ತೊಂದರೆಯಿಲ್ಲ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದು ಹೇಳಿದ್ದಾರೆ.

ಯುರೋಪಿಯನ್ ಯೂನಿಯನ್ 15 ದೇಶಗಳಿಂದ ಬರುವವರಿಗೆ ಅನುಮತಿ ನೀಡಿದೆ.ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿಗೆ ತುತ್ತಾಗಿರುವ ಅಮೆರಿಕದಲ್ಲಿ ಪರಿಸ್ಥಿತಿ ಇನ್ನಷ್ಟು ವಿಷಮಗೊಳ್ಳುವ ಆತಂಕ ಎದುರಾಗಿದೆ.
ಅಮರಿಕದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ನಿಮಯಗಳನ್ನು ಪಾಲಿಸದಿದ್ದರೆ ಶೀಘ್ರದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದುಪ್ಪಟ್ಟಾಗಬಹುದು. ದೇಶದಲ್ಲಿ ಪ್ರತಿದಿನ 2ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದರಿಂದ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆ ಇದೆ ಎಂದು ಅಮೆರಿಕದ ಆರೋಗ್ಯ ತಜ್ಞ ಆಂಥೋನಿ ಫಾಸಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.ಈಗಾಗಲೇ ಅಮೆರಿಕದಲ್ಲಿ 1 ಲಕ್ಷದ 26 ಸಾವಿರ ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.












Click it and Unblock the Notifications