• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾವು ಇನ್ನೂ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದೇವೆ: ಜೋ ಬೈಡನ್

|

ವಾಷಿಂಗ್ಟನ್ ಏಪ್ರಿಲ್ 7: ಅಮೆರಿಕದಲ್ಲಿ ಕೂಡ ಮಾರಕ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ನಾವಿನ್ನೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 75 ದಿನಗಳಲ್ಲಿ 150 ಮಿಲಿಯನ್ ಡೋಸ್ ವ್ಯಾಕ್ಸಿನೇಷನ್ ಪೂರ್ಣಗೊಳಿಸಿದೆ ಎಂದು ವರ್ಜೀನಿಯಾದ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಜೋ ಬೈಡೆನ್ ಅವರು ತಿಳಿಸಿದ್ದಾರೆ.

ಬಾಯಿಗೆ ಬಿತ್ತು ಲಡ್ಡು! ಅಮೆರಿಕ ಕನಸು ಕಂಡವರಿಗೆ 'ಲಾಟರಿ ಭಾಗ್ಯ'!

ಕೊರೊನಾ ಸಾಂಕ್ರಾಮಿಕ ವಿಷಯದಲ್ಲಿ ಅಮೆರಿಕ ಈಗಲೂ ಸಾವು ಬದುಕಿನ ಹೋರಾಟ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಹೇಳಿದ್ದಾರೆ.

ಏಪ್ರಿಲ್ 19ರಿಂದ ದೇಶಾದ್ಯಂತ ಎಲ್ಲಾ ವಯಸ್ಕರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ಹೊಸ ಪ್ರಕರಣಗಳ ಹೆಚ್ಚಳದಿಂದ ಆಸ್ಪತ್ರೆಗೆ ಬರುವ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಬೈಡನ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಜನರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಬೈಡನ್ ಸರ್ಕಾರ ಈ ಮೊದಲು 100 ದಿನಗಳಲ್ಲಿ 100 ಮಿಲಿಯನ್ ಡೋಸ್ ಲಸಿಕೆ ನೀಡುವ ಗುರಿ ಹೊಂದಿತ್ತು. ಈಗ ಆ ಗುರಿಯನ್ನು 200 ಮಿಲಿಯನ್ ಡೋಸ್ ಗೆ ನಿಗದಿಪಡಿಸಿಕೊಂಡಿದೆ. ಪ್ರತಿಯೊಬ್ಬರಿಗೂ ಲಸಿಕೆ ನೀಡುವವರೆಗೆ ಎಲ್ಲರೂ ಸಾಮಾಜಿಕ ಅಂತರ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.

English summary
The United States is still in a "life-and-death race" against coronavirus, President Joe Biden said as his administration raced through a record 150 million vaccine shots in just 75 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X