ವುಹಾನ್ ಲ್ಯಾಬ್‌ನಿಂದ ಕೊರೊನಾ ಸೋರಿಕೆಯಾಗಿರಬಹುದು: ಯುಎಸ್ ಅಧ್ಯಯನದ ಅಂತಿಮ ತೀರ್ಮಾನ
ವಾಷಿಂಗ್ಟನ್, ಜೂ.08: ಕೋವಿಡ್‌ನ ಮೂಲದ ಬಗ್ಗೆ ಅಮೆರಿಕದ ರಾಷ್ಟ್ರೀಯ ಪ್ರಯೋಗಾಲಯವೊಂದು ನಡೆಸಿದ ಅಧ್ಯಯನವು ವುಹಾನ್‌ನ ಚೀನೀ ಪ್ರಯೋಗಾಲಯದಿಂದ ಕೊರೊನಾ ವೈರಸ್ ಸೋರಿಕೆಯಾಗಿರಬಹುದು ಎಂಬ ತೀರ್ಮಾನಕ್ಕೆ ಬಂದಿದೆ ಎಂದು ವರದಿಯಾಗಿದೆ. ಹಾಗೆಯೇ ಇದು ಸಮರ್ಥನೀಯ ಮತ್ತು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಕೂಡಾ ಈ ಅಧ್ಯಯನ ಹೇಳಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಸೋಮವಾರ ವರದಿ ಮಾಡಿದೆ.
ಈ ಕೊರೊನಾ ಸಾಂಕ್ರಾಮಿಕ ಮೂಲದ ಬಗ್ಗೆ ತನಿಖೆ ನಡೆಸುವ ಈ ಅಧ್ಯಯನವನ್ನು ಮೇ 2020 ರಲ್ಲಿ ಕ್ಯಾಲಿಫೋರ್ನಿಯಾದ ಲಾರೆನ್ಸ್ ಲಿವರ್‌ಮೋರ್ ರಾಷ್ಟ್ರೀಯ ಪ್ರಯೋಗಾಲಯವು ರಾಜ್ಯ ಇಲಾಖೆ ಶಿಫಾರಸ್ಸಿನ ಮೇರೆಗೆ, ಟ್ರಂಪ್ ಆಡಳಿತದ ಅಂತಿಮ ತಿಂಗಳುಗಳಲ್ಲಿ ಆರಂಭಿಸಿದೆ ಎಂದು ವರದಿ ತಿಳಿಸಿದೆ.
ಲಾರೆನ್ಸ್ ಲಿವರ್ಮೋರ್ ಅವರ ಮೌಲ್ಯಮಾಪನವು ಕೊರೊನಾ ಸೋಂಕಿನ ಜೀನೋಮಿಕ್ ವಿಶ್ಲೇಷಣೆಯನ್ನು ಮಾಡಿದೆ ಎಂದು ಕೂಡಾ ವರದಿ ತಿಳಿಸಿದೆ. ಆದರೆ ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಬಗ್ಗೆ ಪ್ರತಿಕ್ರಿಯಿಸಲು ಲಾರೆನ್ಸ್ ಲಿವರ್ಮೋರ್ ನಿರಾಕರಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕಳೆದ ತಿಂಗಳು ಕೊರೊನಾ ವೈರಸ್‌ನ ಉಗಮದ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಗುಪ್ತಚರ ಇಲಾಖೆಗೆ ಆದೇಶಿಸಿದ್ದರು. ''ಚೀನಾದಲ್ಲಿ ಪ್ರಾಣಿ ಮೂಲದಿಂದ ಕೊರೊನಾ ಸೋಂಕು ಹರಡಿತೇ ಅಥವಾ ಪ್ರಯೋಗಾಲಯದಲ್ಲಿನ ಅವಘಡದಿಂದ ಸೋಂಕು ಸೃಷ್ಟಿಯಾಯಿಯೇ ಎಂಬ ಎರಡು ಸಂಭವನೀಯ ಸನ್ನಿವೇಶಗಳ ಬಗ್ಗೆ ಗುಪ್ತಚರ ಇಲಾಖೆಯು ತನಿಖೆ ನಡೆಸುತ್ತಿದೆ. ಆದರೆ ಅವರು ಇನ್ನೂ ಒಂದು ಅಂತಿಮ ತೀರ್ಮಾನಕ್ಕೆ ಬಂದಿಲ್ಲ'' ಎಂದು ಬಿಡೆನ್ ತಿಳಿಸಿದ್ದರು.
ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಾವಧಿಯಲ್ಲಿನ ವರದಿಯೊಂದು ಚೀನಾದ ವುಹಾನ್ ಲ್ಯಾಬ್‌ನ ಮೂವರು ಸಂಶೋಧಕರು ನವೆಂಬರ್ 2019 ರಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ಆರೋಪಿಸಿತ್ತು. ಹಾಗೆಯೇ ಆ ಮೂವರು ಸಂಶೋಧಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಯು.ಎಸ್. ಸರ್ಕಾರದ ಮೂಲಗಳು ತಿಳಿಸಿವೆ.

ಆ ವರದಿಯ ಇಮೇಲ್ ಇತ್ತೀಚೆಗೆ ಸೋರಿಕೆಯಾಗಿದ್ದು ಕೊರೊನಾ ಮೂಲದ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗಿದೆ. ಈ ನಡುವೆ ಚೀನಾದ ಪ್ರಯೋಗಾಲಯದಿಂದಲೇ ಕೊರೊನಾ ವೈರಸ್ ಸೋರಿಕೆಯಾಗಿದೆ ಎಂದು ಬ್ರಿಟನ್ ಹೇಳಿತ್ತು. ವುಹಾನ್ ಲ್ಯಾಬ್‌ನಿಂದಲೇ ಕೊರೊನಾ ಸೋಂಕು ಹರಡಿದೆ ಎಂದು ತನ್ನ ಅಧಿಕಾರವಧಿಯಲ್ಲಿ ಆರೋಪಿಸುತ್ತಿದ್ದ ಟ್ರಂಪ್, ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಮತ್ತೆ ಚೀನಾ ವಿರುದ್ದ ವಾಗ್ದಾಳಿ ಆರಂಭಿಸಿದ್ದರು.
''ಚೀನಾ ವೈರಸ್ ವುಹಾನ್ ಲ್ಯಾಬ್‌ನಿಂದ ಬರುತ್ತಿದೆ ಎಂದು ನಾನು ಹೇಳಿದ್ದು ಸರಿ. ಈಗ ಎಲ್ಲರೂ, ಶತ್ರು ಎಂದು ಕರೆಯಲ್ಪಡುವವರೂ ಸಹ, ಅಧ್ಯಕ್ಷ ಟ್ರಂಪ್ ವುಹಾನ್ ಲ್ಯಾಬ್‌ನಿಂದ ಚೀನಾದ ವೈರಸ್ ಬಂದಿದೆ ಎಂದು ಹೇಳಿದ್ದು ಸರಿಯಾಗಿದೆ. ಅಧ್ಯಕ್ಷರು ಸರಿಯಾಗಿಯೇ ಹೇಳಿದ್ದರು ಎಂದು ಹೇಳಲು ಆರಂಭಿಸಿದ್ದಾರೆ'' ಎಂದು ಟ್ರಂಪ್ ಹೇಳಿದ್ದರು.
ಈ ಬಳಿಕ ಕೊರೊನಾ ವೈರಸ್ ಚೀನಾದ ವುಹಾನ್ ಲ್ಯಾಬ್‌ನಿಂದಲೇ ಸೋರಿಕೆಯಾಗಿದೆಯೇ ಎಂಬ ಬಗ್ಗೆ ಪ್ರಮುಖ ಮಾಹಿತಿಗಳನ್ನು ನೀಡುವ ದಾಖಲೆ ಬಿಡುಗಡೆ ಮಾಡಲು ಯುಎಸ್ ಉನ್ನತ ಕೊರೊನಾವೈರಸ್ ಸಲಹೆಗಾರರಾದ ಡಾ. ಆಂಥೋನಿ ಫೌಸಿ ಆಗ್ರಹಿಸಿದ್ದಾರೆ. ಲ್ಯಾಬ್ ಸೋರಿಕೆಯ ಪರಿಣಾಮವಾಗಿ ಕೋವಿಡ್-19 ಹೊರಹೊಮ್ಮಿದೆಯೇ ಎಂಬ ಬಗ್ಗೆ ಪ್ರಮುಖ ಸುಳಿವುಗಳನ್ನು ನೀಡುವ ಒಂಬತ್ತು ಜನರ ವೈದ್ಯಕೀಯ ದಾಖಲೆಗಳನ್ನು ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದರು.
(ಒನ್‌ಇಂಡಿಯಾ ಸುದ್ದಿ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications