1.9 ಟ್ರಿಲಿಯನ್ ಡಾಲರ್ ಪರಿಹಾರ, ಅಮೆರಿಕನ್ನರಿಗೆ ಬೈಡನ್ ಅಭಯ
ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅಮೆರಿಕನ್ನರನ್ನು ಉದ್ದೇಶಿಸಿ ಗುರುವಾರ ಮಾತಾಡಿದ್ದಾರೆ. ಅಮೆರಿಕ ಈಗ ತುಂಬಾ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ನಮ್ಮ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದೆ. ನಮಗೆ ನಿಮ್ಮ ಸಂಕಷ್ಟಗಳು ಗೊತ್ತು, ನಾವು ನಿಮ್ಮನ್ನು ಮರೆಯುವುದಿಲ್ಲ. ಮತ್ತು ನಾವು ಸೋಲನ್ನ ಒಪ್ಪಿಕೊಳ್ಳುವುದಿಲ್ಲ ಎಂದು ಬೈಡನ್ ಅಮೆರಿಕನ್ನರಿಗೆ ಆಶ್ವಾಸನೆ ನೀಡಿದ್ದಾರೆ.
ಒಂದೆಡೆ ಟ್ರಂಪ್ ವಿರುದ್ಧ ರಾಜಕೀಯ ಸಮರ ನಡೆಯುತ್ತಿದೆ, ಆದ್ರೆ ಜೋ ಬೈಡನ್ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಹಳ್ಳಹಿಡಿದ ಅಮೆರಿಕ ಆರ್ಥಿಕತೆಯತ್ತ ಗಮನ ಹರಿಸಿದ್ದಾರೆ. ಆರ್ಥಿಕ ಪುನಶ್ಚೇತನಕ್ಕೆ ಬೇಕಾದ ಕ್ರಮಕೈಗೊಳ್ಳಲು ನೂತನ ಅಧ್ಯಕ್ಷರು ಪ್ರಸ್ತಾಪ ಮಾಡಿದ್ದಾರೆ. ಸುಮಾರು 1.9 ಟ್ರಿಲಿಯನ್ ಡಾಲರ್ ಮೊತ್ತದ ಬೃಹತ್ ಪ್ಯಾಕೇಜ್ ಘೋಷಿಸುವುದಾಗಿ ಸದ್ಯ ಬೈಡನ್ ಆಶ್ವಾಸನೆ ನೀಡಿದ್ದಾರೆ.
ಜನವರಿ 20ರಂದು ಬೈಡನ್ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನಂತರ ಟ್ರಂಪ್ ಅನಿವಾರ್ಯವಾಗಿ ಖುರ್ಚಿ ಬಿಟ್ಟು ಹೋಗಬೇಕಿದೆ. ಇಲ್ಲವಾದರೆ ಅಮೆರಿಕ ಪಡೆಗಳು ಈ ಕೆಲಸ ಮಾಡುವ ಸಾಧ್ಯತೆ ದಟ್ಟವಾಗಿದೆ. ಮತ್ತೊಂದ್ಕಡೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೆಯುತ್ತಿದೆ. ಈ ಹೊತ್ತಲ್ಲೇ ಬೈಡನ್ ಭಾಷಣ ಅಮೆರಿಕನ್ನರಲ್ಲಿ ಭರವಸೆ ತುಂಬಿದೆ.

46ನೇ ಅಧ್ಯಕ್ಷ ಜೋ ಬೈಡನ್
ಟ್ರಂಪ್ ಕಟ್ಟಿದ ಮಹಾಗೋಡೆ ಛಿದ್ರ ಮಾಡಿ ನೂರಾರು ಅಡೆತಡೆಗಳ ಮಧ್ಯೆ ಜೋ ಬೈಡನ್ ಗೆದ್ದು ಬೀಗಿದ್ದಾರೆ. ಟ್ರಂಪ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವ ಬೈಡನ್ ಪದಗ್ರಹಣಕ್ಕೆ ಸಕಲಸಿದ್ಧತೆ ನಡೆದಿದೆ. ಒಟ್ಟು 306 ಎಲೆಕ್ಟೋರಲ್ ಮತಗಳನ್ನು ಪಡೆದು ಬೈಡನ್ ಅಮೆರಿಕದ ಅಧ್ಯಕ್ಷೀಯ ಖುರ್ಚಿ ಮೇಲೆ ಕೂರುತ್ತಿದ್ದಾರೆ. ಆದ್ರೆ 232 ಎಲೆಕ್ಟೋರಲ್ ಮತ ಪಡೆದಿರುವ ಟ್ರಂಪ್ ಅಧಿಕಾರ ಬಿಟ್ಟುಕೊಡುವುದಿಲ್ಲ ಎಂದು ಹಠ ಮಾಡುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ಸ್ವೀಕರಿಸುವುದು ಪಕ್ಕಾ ಆಗಿದೆ. ಅದಕ್ಕಾಗಿ ಭರದ ಸಿದ್ಧತೆಗಳು ಸಾಗಿವೆ.

ಕೊರೊನಾ ಕೂಪದಲ್ಲಿ ಅಮೆರಿಕ
ಜೋ ಬೈಡನ್ ಅಧಿಕಾರ ಸ್ವೀಕರಿಸಿದ ತಕ್ಷಣ ಅಮೆರಿಕನ್ನರ ಸಮಸ್ಯೆಗಳು ಸರಿಯಾಗುವುದಿಲ್ಲ. ಏಕೆಂದರೆ ಸದ್ಯ ಅಮೆರಿಕ ಶತಮಾನದಲ್ಲೇ ಎದುರಿಸದಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇದನ್ನೆಲ್ಲಾ ಬಗೆಹರಿಸಲು ಹಲವು ವರ್ಷಗಳೇ ಬೇಕು. ಅದರಲ್ಲೂ ಟ್ರಂಪ್ ಅಮೆರಿಕದ ಘನತೆಗೆ ಹಾಗೂ ಅಮೆರಿಕದ ಅರ್ಥ ವ್ಯವಸ್ಥೆಗೆ ಮಾಡಿರುವ ಘಾಸಿಗೆ ಮುಲಾಮು ಹಚ್ಚಬೇಕು. ಹೀಗಾಗಿ ಬೈಡನ್‌ಗೆ ಅಮೆರಿಕ ಅಧ್ಯಕ್ಷರ ಖುರ್ಚಿ ಹೂವಿನ ಹಾಸಿಗೆ ಆಗಿರಲಾರದು, ಬದಲಾಗಿ ಮುಳ್ಳಿನ ಹಾದಿಯಾಗಲಿದೆ. ಇದನ್ನೆಲ್ಲಾ ಎದುರಿಸಿ, ಅಮೆರಿಕ ಹಾಗೂ ಅಮೆರಿಕನ್ನರನ್ನು ರಕ್ಷಿಸುವ ಹೊಣೆ ಜೋ ಬೈಡನ್ ಹೆಗಲ ಮೇಲಿದೆ.

ಕೋಟಿ 38 ಲಕ್ಷ ಸೋಂಕಿತರು..!
ಅಮೆರಿಕದ ಸ್ಥಿತಿ ಭೀಕರವಾಗಿದ್ದು, ಸೋಂಕಿತರ ಸಾವಿನ ಸಂಖ್ಯೆಯ ವಿಚಾರದಲ್ಲಿ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದೆ. ಜಗತ್ತಿನಾದ್ಯಂತ 9 ಕೋಟಿ 36 ಲಕ್ಷ ಸೋಂಕಿತರು ಪತ್ತೆಯಾಗಿದ್ದರೆ, ಕೇವಲ ಅಮೆರಿಕದಲ್ಲೇ ಈ ಸಂಖ್ಯೆ 2 ಕೋಟಿ 38 ಲಕ್ಷದಷ್ಟಿದಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಜೊತೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಭಯ ಹುಟ್ಟಿಸುತ್ತಿದೆ. ಸುಮಾರು 93 ಲಕ್ಷ ಆಕ್ಟಿವ್ ಕೇಸ್‌ಗಳು ಅಮೆರಿಕದ ಆಸ್ಪತ್ರೆಗಳನ್ನ ತುಂಬುವಂತೆ ಮಾಡಿದೆ. ಕೆಲವು ದಿನಗಳಿಂದ ಪ್ರತಿದಿನ ಸರಾಸರಿ 4 ಸಾವಿರ ಜನರು ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪುತ್ತಿದ್ದಾರೆ. ಈವರೆಗೂ 3 ಲಕ್ಷ 98 ಸಾವಿರಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ಸೋಂಕಿಗೆ ಉಸಿರು ಚೆಲ್ಲಿದ್ದಾರೆ. ಇದು ಪರಿಸ್ಥಿತಿಯ ಭಯಾನಕತೆಯನ್ನು ಬಿಡಿಸಿಡುತ್ತಿದೆ.

ನಂ. 2 ಆಗತ್ತಾ ಅಮೆರಿಕ..?
ಅಮೆರಿಕದ ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದ್ದರೆ, ಅಮೆರಿಕದ ಆರ್ಥಿಕತೆಗೆ ಬಲವಾದ ಪೆಟ್ಟು ಬಿದ್ದಿರುವುದು ಖಚಿತವಾಗುತ್ತಿದೆ. ಹೀಗಾಗಿ ಅಮೆರಿಕದ ಪರಮ ಶತ್ರು ಚೀನಾ ಅಮೆರಿಕದ ನಂಬರ್ 1 ಸ್ಥಾನವನ್ನ ಆಕ್ರಮಿಸಲು ತುದಿಗಾಗಲಲ್ಲಿ ನಿಂತಿದೆ. ಇದು ಕೂಡ ಅಮೆರಿಕದ ನಾಯಕರನ್ನ ಹಾಗೂ ಉದ್ಯಮಿಗಳನ್ನ ಕಂಗೆಡಿಸಿದೆ. ಹಾಗೇ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಜಗತ್ತು ಆರ್ಥಿಕ ಹಿಂಜರಿತ ಕಾಣುತ್ತಿದ್ದರೆ ಚೀನಾದ ಜಿಡಿಪಿ ಮಾತ್ರ ಏರುತ್ತಿರುವುದು ಈ ಆತಂಕ ಹೆಚ್ಚಾಗುವಂತೆ ಮಾಡಿದೆ. ಇದು ಅಮೆರಿಕದ ನಂಬರ್ 1 ಸ್ಥಾನ ಅಲುಗಾಡಿಸುವ ಜೊತೆಗೆ, ಜಗತ್ತಿನಲ್ಲಿ ಹೊಸ ಆರ್ಥಿಕ ಶಕ್ತಿಯ ಉಗಮಕ್ಕೂ ಕಾರಣವಾಗುತ್ತಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications