ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1.9 ಟ್ರಿಲಿಯನ್ ಡಾಲರ್ ಪರಿಹಾರ, ಅಮೆರಿಕನ್ನರಿಗೆ ಬೈಡನ್ ಅಭಯ

|
Google Oneindia Kannada News

ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅಮೆರಿಕನ್ನರನ್ನು ಉದ್ದೇಶಿಸಿ ಗುರುವಾರ ಮಾತಾಡಿದ್ದಾರೆ. ಅಮೆರಿಕ ಈಗ ತುಂಬಾ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ನಮ್ಮ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದೆ. ನಮಗೆ ನಿಮ್ಮ ಸಂಕಷ್ಟಗಳು ಗೊತ್ತು, ನಾವು ನಿಮ್ಮನ್ನು ಮರೆಯುವುದಿಲ್ಲ. ಮತ್ತು ನಾವು ಸೋಲನ್ನ ಒಪ್ಪಿಕೊಳ್ಳುವುದಿಲ್ಲ ಎಂದು ಬೈಡನ್ ಅಮೆರಿಕನ್ನರಿಗೆ ಆಶ್ವಾಸನೆ ನೀಡಿದ್ದಾರೆ.

ಒಂದೆಡೆ ಟ್ರಂಪ್ ವಿರುದ್ಧ ರಾಜಕೀಯ ಸಮರ ನಡೆಯುತ್ತಿದೆ, ಆದ್ರೆ ಜೋ ಬೈಡನ್ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಹಳ್ಳಹಿಡಿದ ಅಮೆರಿಕ ಆರ್ಥಿಕತೆಯತ್ತ ಗಮನ ಹರಿಸಿದ್ದಾರೆ. ಆರ್ಥಿಕ ಪುನಶ್ಚೇತನಕ್ಕೆ ಬೇಕಾದ ಕ್ರಮಕೈಗೊಳ್ಳಲು ನೂತನ ಅಧ್ಯಕ್ಷರು ಪ್ರಸ್ತಾಪ ಮಾಡಿದ್ದಾರೆ. ಸುಮಾರು 1.9 ಟ್ರಿಲಿಯನ್ ಡಾಲರ್ ಮೊತ್ತದ ಬೃಹತ್ ಪ್ಯಾಕೇಜ್ ಘೋಷಿಸುವುದಾಗಿ ಸದ್ಯ ಬೈಡನ್ ಆಶ್ವಾಸನೆ ನೀಡಿದ್ದಾರೆ.

ಅಮೆರಿಕ ಕೊರೊನಾ: ಅತ್ತ ಸೋಂಕಿತರ ಸಾವು, ಇತ್ತ ಪ್ರಜಾಪ್ರಭುತ್ವಕ್ಕೆ ಕಂಟಕ..!ಅಮೆರಿಕ ಕೊರೊನಾ: ಅತ್ತ ಸೋಂಕಿತರ ಸಾವು, ಇತ್ತ ಪ್ರಜಾಪ್ರಭುತ್ವಕ್ಕೆ ಕಂಟಕ..!

ಜನವರಿ 20ರಂದು ಬೈಡನ್ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನಂತರ ಟ್ರಂಪ್ ಅನಿವಾರ್ಯವಾಗಿ ಖುರ್ಚಿ ಬಿಟ್ಟು ಹೋಗಬೇಕಿದೆ. ಇಲ್ಲವಾದರೆ ಅಮೆರಿಕ ಪಡೆಗಳು ಈ ಕೆಲಸ ಮಾಡುವ ಸಾಧ್ಯತೆ ದಟ್ಟವಾಗಿದೆ. ಮತ್ತೊಂದ್ಕಡೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೆಯುತ್ತಿದೆ. ಈ ಹೊತ್ತಲ್ಲೇ ಬೈಡನ್ ಭಾಷಣ ಅಮೆರಿಕನ್ನರಲ್ಲಿ ಭರವಸೆ ತುಂಬಿದೆ.

46ನೇ ಅಧ್ಯಕ್ಷ ಜೋ ಬೈಡನ್

46ನೇ ಅಧ್ಯಕ್ಷ ಜೋ ಬೈಡನ್

ಟ್ರಂಪ್ ಕಟ್ಟಿದ ಮಹಾಗೋಡೆ ಛಿದ್ರ ಮಾಡಿ ನೂರಾರು ಅಡೆತಡೆಗಳ ಮಧ್ಯೆ ಜೋ ಬೈಡನ್ ಗೆದ್ದು ಬೀಗಿದ್ದಾರೆ. ಟ್ರಂಪ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವ ಬೈಡನ್ ಪದಗ್ರಹಣಕ್ಕೆ ಸಕಲಸಿದ್ಧತೆ ನಡೆದಿದೆ. ಒಟ್ಟು 306 ಎಲೆಕ್ಟೋರಲ್ ಮತಗಳನ್ನು ಪಡೆದು ಬೈಡನ್ ಅಮೆರಿಕದ ಅಧ್ಯಕ್ಷೀಯ ಖುರ್ಚಿ ಮೇಲೆ ಕೂರುತ್ತಿದ್ದಾರೆ. ಆದ್ರೆ 232 ಎಲೆಕ್ಟೋರಲ್ ಮತ ಪಡೆದಿರುವ ಟ್ರಂಪ್ ಅಧಿಕಾರ ಬಿಟ್ಟುಕೊಡುವುದಿಲ್ಲ ಎಂದು ಹಠ ಮಾಡುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ಸ್ವೀಕರಿಸುವುದು ಪಕ್ಕಾ ಆಗಿದೆ. ಅದಕ್ಕಾಗಿ ಭರದ ಸಿದ್ಧತೆಗಳು ಸಾಗಿವೆ.

ಕೊರೊನಾ ಕೂಪದಲ್ಲಿ ಅಮೆರಿಕ

ಕೊರೊನಾ ಕೂಪದಲ್ಲಿ ಅಮೆರಿಕ

ಜೋ ಬೈಡನ್ ಅಧಿಕಾರ ಸ್ವೀಕರಿಸಿದ ತಕ್ಷಣ ಅಮೆರಿಕನ್ನರ ಸಮಸ್ಯೆಗಳು ಸರಿಯಾಗುವುದಿಲ್ಲ. ಏಕೆಂದರೆ ಸದ್ಯ ಅಮೆರಿಕ ಶತಮಾನದಲ್ಲೇ ಎದುರಿಸದಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇದನ್ನೆಲ್ಲಾ ಬಗೆಹರಿಸಲು ಹಲವು ವರ್ಷಗಳೇ ಬೇಕು. ಅದರಲ್ಲೂ ಟ್ರಂಪ್ ಅಮೆರಿಕದ ಘನತೆಗೆ ಹಾಗೂ ಅಮೆರಿಕದ ಅರ್ಥ ವ್ಯವಸ್ಥೆಗೆ ಮಾಡಿರುವ ಘಾಸಿಗೆ ಮುಲಾಮು ಹಚ್ಚಬೇಕು. ಹೀಗಾಗಿ ಬೈಡನ್‌ಗೆ ಅಮೆರಿಕ ಅಧ್ಯಕ್ಷರ ಖುರ್ಚಿ ಹೂವಿನ ಹಾಸಿಗೆ ಆಗಿರಲಾರದು, ಬದಲಾಗಿ ಮುಳ್ಳಿನ ಹಾದಿಯಾಗಲಿದೆ. ಇದನ್ನೆಲ್ಲಾ ಎದುರಿಸಿ, ಅಮೆರಿಕ ಹಾಗೂ ಅಮೆರಿಕನ್ನರನ್ನು ರಕ್ಷಿಸುವ ಹೊಣೆ ಜೋ ಬೈಡನ್ ಹೆಗಲ ಮೇಲಿದೆ.

2ನೇ ಬಾರಿಗೆ ವಾಗ್ದಂಡನೆ, ಡೊನಾಲ್ಡ್ ಟ್ರಂಪ್ ಭವಿಷ್ಯವೇನು?2ನೇ ಬಾರಿಗೆ ವಾಗ್ದಂಡನೆ, ಡೊನಾಲ್ಡ್ ಟ್ರಂಪ್ ಭವಿಷ್ಯವೇನು?

ಕೋಟಿ 38 ಲಕ್ಷ ಸೋಂಕಿತರು..!

ಕೋಟಿ 38 ಲಕ್ಷ ಸೋಂಕಿತರು..!

ಅಮೆರಿಕದ ಸ್ಥಿತಿ ಭೀಕರವಾಗಿದ್ದು, ಸೋಂಕಿತರ ಸಾವಿನ ಸಂಖ್ಯೆಯ ವಿಚಾರದಲ್ಲಿ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದೆ. ಜಗತ್ತಿನಾದ್ಯಂತ 9 ಕೋಟಿ 36 ಲಕ್ಷ ಸೋಂಕಿತರು ಪತ್ತೆಯಾಗಿದ್ದರೆ, ಕೇವಲ ಅಮೆರಿಕದಲ್ಲೇ ಈ ಸಂಖ್ಯೆ 2 ಕೋಟಿ 38 ಲಕ್ಷದಷ್ಟಿದಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಜೊತೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಭಯ ಹುಟ್ಟಿಸುತ್ತಿದೆ. ಸುಮಾರು 93 ಲಕ್ಷ ಆಕ್ಟಿವ್ ಕೇಸ್‌ಗಳು ಅಮೆರಿಕದ ಆಸ್ಪತ್ರೆಗಳನ್ನ ತುಂಬುವಂತೆ ಮಾಡಿದೆ. ಕೆಲವು ದಿನಗಳಿಂದ ಪ್ರತಿದಿನ ಸರಾಸರಿ 4 ಸಾವಿರ ಜನರು ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವನ್ನಪ್ಪುತ್ತಿದ್ದಾರೆ. ಈವರೆಗೂ 3 ಲಕ್ಷ 98 ಸಾವಿರಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ಸೋಂಕಿಗೆ ಉಸಿರು ಚೆಲ್ಲಿದ್ದಾರೆ. ಇದು ಪರಿಸ್ಥಿತಿಯ ಭಯಾನಕತೆಯನ್ನು ಬಿಡಿಸಿಡುತ್ತಿದೆ.

ನಂ. 2 ಆಗತ್ತಾ ಅಮೆರಿಕ..?

ನಂ. 2 ಆಗತ್ತಾ ಅಮೆರಿಕ..?

ಅಮೆರಿಕದ ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದ್ದರೆ, ಅಮೆರಿಕದ ಆರ್ಥಿಕತೆಗೆ ಬಲವಾದ ಪೆಟ್ಟು ಬಿದ್ದಿರುವುದು ಖಚಿತವಾಗುತ್ತಿದೆ. ಹೀಗಾಗಿ ಅಮೆರಿಕದ ಪರಮ ಶತ್ರು ಚೀನಾ ಅಮೆರಿಕದ ನಂಬರ್ 1 ಸ್ಥಾನವನ್ನ ಆಕ್ರಮಿಸಲು ತುದಿಗಾಗಲಲ್ಲಿ ನಿಂತಿದೆ. ಇದು ಕೂಡ ಅಮೆರಿಕದ ನಾಯಕರನ್ನ ಹಾಗೂ ಉದ್ಯಮಿಗಳನ್ನ ಕಂಗೆಡಿಸಿದೆ. ಹಾಗೇ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಜಗತ್ತು ಆರ್ಥಿಕ ಹಿಂಜರಿತ ಕಾಣುತ್ತಿದ್ದರೆ ಚೀನಾದ ಜಿಡಿಪಿ ಮಾತ್ರ ಏರುತ್ತಿರುವುದು ಈ ಆತಂಕ ಹೆಚ್ಚಾಗುವಂತೆ ಮಾಡಿದೆ. ಇದು ಅಮೆರಿಕದ ನಂಬರ್ 1 ಸ್ಥಾನ ಅಲುಗಾಡಿಸುವ ಜೊತೆಗೆ, ಜಗತ್ತಿನಲ್ಲಿ ಹೊಸ ಆರ್ಥಿಕ ಶಕ್ತಿಯ ಉಗಮಕ್ಕೂ ಕಾರಣವಾಗುತ್ತಿದೆ.

English summary
The 46th president of America, Mr. Biden promised 1.9 trillion-dollar relief package for US economy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X