ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕಾ: 24 ಗಂಟೆಗಳಲ್ಲೇ 90,000ಕ್ಕೂ ಹೆಚ್ಚು ಕೊವಿಡ್-19 ಕೇಸ್!

|
Google Oneindia Kannada News

ವಾಶಿಂಗ್ಟನ್, ಅಕ್ಟೋಬರ್.30: ಕೊರೊನಾವೈರಸ್ ನಿಂದ ತತ್ತರಿಸಿ ಹೋಗಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಯಲ್ಲಿ ಕಳೆದ 24 ಗಂಟೆಗಳಲ್ಲೇ 90,000ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಬಗ್ಗೆ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯವು ಸ್ಪಷ್ಟಪಡಿಸಿದೆ.

ಅಕ್ಟೋಬರ್ ಮಧ್ಯಭಾಗದಿಂದ ಈವರೆಗಿನ ಕೊವಿಡ್-19 ಅಂಕಿ-ಅಂಶಗಳಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಒಂದೇ ದಿನ 91295 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 80.94 ಲಕ್ಷದ ಗಡಿ ದಾಟಿದೆ.

ಚಳಿಗಾಲದಲ್ಲಿ ಕೊವಿಡ್-19 ಸೋಂಕು ತಗುಲಿದರೆ ಸಾವು ಪಕ್ಕಾ? ಚಳಿಗಾಲದಲ್ಲಿ ಕೊವಿಡ್-19 ಸೋಂಕು ತಗುಲಿದರೆ ಸಾವು ಪಕ್ಕಾ?

ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿನಿಂದ 1021 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 2,28,625ಕ್ಕೆ ಏರಿಕೆಯಾಗಿದೆ. ಆ ಮೂಲಕ ವಿಶ್ವದಲ್ಲೇ ಅತಿಹೆಚ್ಚು ಸಾವಿನ ಪ್ರಕರಣಗಳು ಯುಎಸ್ಎನಲ್ಲೇ ದಾಖಲಾಗಿವೆ.

USA: More Than 90,000 Coronavirus Cases Found In 24 Hours For First Time


ಅಮೆರಿಕಾದ 47 ರಾಜ್ಯಗಳಲ್ಲಿ ಏರಿಕೆ:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿರುವ 47 ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. 34 ರಾಜ್ಯಗಳಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣ ಮತ್ತು ಸಾವಿನ ಪ್ರಮಾಣ ಗಮನಿಸಿದಾಗ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಅಪಾಯವಿದೆ. ಸಾವಿನ ಪ್ರಮಾಣ ಮಂದಗತಿ ಸೂಚಕವಾಗಿದೆ. ಆದರೆ, ಜನಸಾಮಾನ್ಯರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದಿದ್ದಾರೆ.

ಚಳಿಗಾಲದಲ್ಲಿ ಸಾವಿನ ಪ್ರಮಾಣ ಹೆಚ್ಚಳ ಸಾಧ್ಯತೆ:

ಅಮೆರಿಕಾದಲ್ಲಿ ಏಪ್ರಿಲ್ ವೇಳೆಗೆ ಪ್ರತಿನಿತ್ಯ 2200 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುವ ಅಪಾಯವಿದೆ. ಮುಂಬರುವ ಫೆಬ್ರವರಿ ವೇಳೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ 386000ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ಕೊವಿಡ್-19 ಸೋಂಕಿಗೆ ಮೊದಲ ಲಸಿಕೆಯು 2021ರ ಮಧ್ಯಭಾಗದಲ್ಲಿ ಲಭ್ಯವಾಗಲಿದೆ. ಆದರೆ ಅದಕ್ಕೂ ಮೊದಲು ಅಮೆರಿಕಾದಲ್ಲಿ ಎದುರಾಗುವ ಚಳಿಗಾಲದ ವೇಳೆ ಸಾವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ.

Recommended Video

Ground ಅಲ್ಲು ವಿರಾಟ್ ಕೊಹ್ಲಿ- ಅನುಷ್ಕಾ LOVE | Oneinida Kannada

English summary
USA: More Than 90,000 Coronavirus Cases Found In 24 Hours For First Time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X