ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಟ್ ಹೌಸ್ ಮಾಧ್ಯಮ ಕಾರ್ಯದರ್ಶಿಗೆ ಕೊವಿಡ್-19 ಸೋಂಕು

|
Google Oneindia Kannada News

ವಾಶಿಂಗ್ಟನ್, ಅಕ್ಟೋಬರ್.05: ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ವಿಶ್ವದ ದೊಡ್ಡಣ್ಣ ಎನಿಸಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ತತ್ತರಿಸಿ ಹೋಗಿದೆ. ಯುಎಸ್ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ತೋರಿದ ನಿರ್ಲಕ್ಷ್ಯದಿಂದ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದಾರೆ.

ಅಮೆರಿಕಾ ವೈಟ್ ಹೌಸ್ ಮಾಧ್ಯಮ ಕಾರ್ಯದರ್ಶಿ ಕಾಯಲಿಂಗ್ ಮೆಕ್-ಎನ್ಯಾನಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಗುರುವಾರದಿಂದ ಪ್ರತಿನಿತ್ಯ ಕೊವಿಡ್-19 ಸೋಂಕಿನ ಪರೀಕ್ಷೆಗೆ ಒಳಗಾಗುತ್ತಿದ್ದು, ಸೋಮವಾರ ಸೋಂಕು ತಗುಲಿರುವುದು ವರದಿಯಲ್ಲಿ ಗೊತ್ತಾಗಿದೆ.

ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡುವ ಅಗತ್ಯವಿಲ್ಲ: ಡೊನಾಲ್ಡ್‌ ಟ್ರಂಪ್ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡುವ ಅಗತ್ಯವಿಲ್ಲ: ಡೊನಾಲ್ಡ್‌ ಟ್ರಂಪ್

ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದ್ದರೂ, ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ಜೊತೆಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯು ಕೊವಿಡ್-19 ಸೋಂಕು ತಪಾಸಣೆ ಮಾಡಿಸಿಕೊಳ್ಳುವಂತೆ ಕಾಯಲಿಂಗ್ ಮೆಕ್-ಎನ್ಯಾನಿ ಮನವಿ ಮಾಡಿಕೊಂಡಿದ್ದಾರೆ.

USA White House Press Secretary Tests Coronavirus Positive


ಯುಎಸ್ಎನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲೇ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ವಿಶ್ವದಲ್ಲೇ ಅಗ್ರಸ್ಥಾನದಲ್ಲಿರುವ ಅಮೆರಿಕಾದಲ್ಲಿ ಇದುವರೆಗೂ 7646516 ಕೊವಿಡ್-19 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಮಹಾಮಾರಿಗೆ ಅಮೆರಿಕಾದಲ್ಲಿ 214707 ಜನರು ಪ್ರಾಣ ಬಿಟ್ಟಿದ್ದಾರೆ. 4863291 ಸೋಂಕಿತರು ಗುಣಮುಖರಾಗಿದ್ದು, 2568518 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಲ್ಲಿ ಪತ್ತೆಯಾಗಿದೆ.

English summary
USA White House Press Secretary Kayleigh McEnany Tests Coronavirus Positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X