ವಿಡಿಯೋ: We Did It, ಜೋ ಎಂದು ಸಂಭ್ರಮಿಸಿದ ಕಮಲಾ
ಅಮೆರಿಕದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ಅವರು ಫೋನ್ ಕರೆ ಮಾಡಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಭಾರತ ಮೂಲದ ಕಮಲಾ ಹ್ಯಾರಿಸ್ ಅವರಿಗೆ ವಿಷಯ ತಿಳಿಸಿದ್ದಾರೆ. ಈ ವಿಡಿಯೋ ಈಗ ಸಕತ್ ವೈರಲ್ ಆಗಿದೆ.
ಉಪಾಧ್ಯಕ್ಷರಾಗಿ ಅಯ್ಕೆಯಾದ ಬಳಿಕ ಕಮಲಾ ಅವರು ನೀಡಿರುವ ಮೊದಲ ಪ್ರತಿಕ್ರಿಯೆ ಹಾಗೂ ಟ್ವೀಟ್ ಗಳಿಗೆ ಭಾರಿ ಪ್ರತಿಕ್ರಿಯೆಗಳು ಬರುತ್ತಿವೆ. 2020ರ ಅಧ್ಯಕ್ಷೀಯ ಚುನಾವಣೆ ಭಾರಿ ಕುತೂಹಲ ಕೆರಳಿಸಿತ್ತು. ಮತದಾನ ನಡೆದು ನಾಲ್ಕು ದಿನಗಳ ನಂತರ ಪೆನ್ಸಿಲ್ವೇಲಿಯಾದ ಫಲಿತಾಂಶ ಹೊರಬಂದಿದ್ದು, ಅಧ್ಯಕ್ಷರಾಗಲು ಅಗತ್ಯವಿದ್ದ ಎಲೆಕ್ಟೊರಲ್ ಮತಗಳ ಗಡಿ ದಾಟುವಲ್ಲಿ ಬೈಡೆನ್ ಅವರಿಗೆ ನೆರವಾಗಿದೆ. ಪೆನ್ಸಿಲ್ವೇನಿಯಾದ 20 ಮತಗಳೊಂದಿಗೆ ಬೈಡೆನ್ 273 ಎಲೆಕ್ಟೊರಲ್ ಮತಗಳನ್ನು ಪಡೆದಿದ್ದಾರೆ.

ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿ ಮುಗಿಯಲಿದೆ. ಬಳಿಕ ಬೈಡನ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ತಿಂಗಳ ಅಂತ್ಯಕ್ಕೆ 78ನೇ ವರ್ಷಕ್ಕೆ ಕಾಲಿಡಲಿರುವ ಬೈಡನ್, ಅಮೆರಿಕದ ಅತ್ಯಂತ ಹಿರಿಯ ಅಧ್ಯಕ್ಷ ಎನಿಸಿಕೊಳ್ಳಲಿದ್ದಾರೆ.
This election is about so much more than @JoeBiden or me. It’s about the soul of America and our willingness to fight for it. We have a lot of work ahead of us. Let’s get started.pic.twitter.com/Bb9JZpggLN
— Kamala Harris (@KamalaHarris) November 7, 2020
''ಇದು ಜೋ ಅಥವಾ ಕಮಲಾ ಅವರ ಆಯ್ಕೆಯ ಚುನಾವಣೆಯಾಗಿರಲಿಲ್ಲ, ಇದು ಅಮೆರಿಕದ ಆತ್ಮವನ್ನು ಕಾಯ್ದುಕೊಳ್ಳಲು ಮುನ್ನಡೆಯಲು ಗೆಲ್ಲಬೇಕಾದ ಚುನಾವಣೆಯಾಗಿತ್ತು'' ಎಂದು ಕಮಲಾ ಟ್ವೀಟ್ ಮಾಡಿದ್ದಾರೆ.
We did it, @JoeBiden. pic.twitter.com/oCgeylsjB4
— Kamala Harris (@KamalaHarris) November 7, 2020
ಕಮಲಾ ಹ್ಯಾರೀಸ್ ಅವರು ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಈ ಹುದ್ದೆಗೆ ಏರಿದ ಮೊದಲ ಮಹಿಳೆ, ಮೊದಲ ಭಾರತೀಯ ಮೂಲದ ಮಹಿಳೆ, ಮೊದಲ ಕಪ್ಪು ವರ್ಣೀಯ ಮಹಿಳೆ, ಮೊದಲ ದಕ್ಷಿಣ ಏಷ್ಯಾ ಮೂಲದ ಮಹಿಳೆ ಎನಿಸಿಕೊಂಡಿದ್ದಾರೆ. ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗೆಲುವಿನ ಸುದ್ದಿಕೊಟ್ಟ ಬೈಡನ್ ಅವರೊಂದಿಗೆ ಮಾತನಾಡುತ್ತಾ ನಾನು ಸಾಧಿಸಿಬಿಟ್ವಿ, ನೀವು ಅಮೆರಿಕದ ಅಧ್ಯಕ್ಷರಾದಿರಿ ಎಂದಿದ್ದಾರೆ 8 ಸೆಕೆಂಡುಗಳ ಈ ವಿಡಿಯೋ ಈ ಸಮಯಕ್ಕೆ 2.3 ಮಿಲಿಯನ್ ಬಾರಿ ವೀಕ್ಷಿಸಲ್ಪಟ್ಟಿದೆ. 77K ಕಾಮೆಂಟ್ 615.3K ಬಾರಿ ರೀ ಶೇರ್ ಆಗಿದ್ದು, ಸಕತ್ ವೈರಲ್ ಆಗುತ್ತಿದೆ.












Click it and Unblock the Notifications