ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮ್ಮನ್ನು ಬೇಟೆಯಾಡಿ ಕೊಲ್ಲುತ್ತೇವೆ; ಪ್ರತಿಜ್ಞೆ ಮಾಡಿದ ಬೈಡನ್

|
Google Oneindia Kannada News

ವಾಷಿಂಗ್ಟನ್, ಆಗಸ್ಟ್ 27: ಕಾಬೂಲ್‌ನ ಹಮೀದ್ ಕರ್ಜೈ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಆತ್ಮಾಹುತಿ ಬಾಂಬ್‌ ದಾಳಿಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, "ಈ ಸಾವುಗಳಿಗೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ' ಎಂದು ಸವಾಲು ಹಾಕಿದ್ದಾರೆ.

'ದಾಳಿ ನಡೆಸಿರುವ ಉಗ್ರರಿಗೆ ತಕ್ಕ ಉತ್ತರ ನೀಡೇ ನೀಡುತ್ತೇವೆ' ಎಂದು ಶ್ವೇತಭವನದಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

We Will Not Forget Will Hunt You Down Warns Joe Biden Over Kabul Attack

ದಾಳಿ ಸಂಬಂಧ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜೋ ಬೈಡನ್, ಐಎಸ್‌ಐಎಲ್‌ ಸಂಘಟನೆ ಈ ಬಾಂಬ್‌ ದಾಳಿ ಹಿಂದಿದೆ ಎಂದು ದೃಢಪಡಿಸಿದ್ದಾರೆ. 'ಈ ದಾಳಿ ನಡೆಸಿದವರೊಂದಿಗೆ, ಅಮೆರಿಕಕ್ಕೆ ಹಾನಿ ಮಾಡಲು ಆಶಿಸಿದವರಿಗೆ ಈ ವಿಷಯ ತಿಳಿದಿರಲಿ; ನಾವು ಇದನ್ನು ಮರೆಯುವುದಿಲ್ಲ, ನಿಮ್ಮನ್ನು ಬೇಟೆಯಾಡಿ ಕೊಲ್ಲುತ್ತೇವೆ. ಇದಕ್ಕೆ ತಕ್ಕ ಬೆಲೆ ತೆರುವಂತೆ ಮಾಡುತ್ತೇವೆ' ಎಂದು ಭಾವನಾತ್ಮಕವಾಗಿದ್ದಾರೆ.

'ದಾಳಿ ನಡೆಸಿದವರು ಯಾರೆಂದು ನಮಗೆ ತಿಳಿದಿದೆ. ಅದು ಖಚಿತವಾದ ಬಳಿಕ ನಾವು ಅವರನ್ನು ಬೇಟೆಯಾಡದೇ ಬಿಡುವುದಿಲ್ಲ' ಎಂದು ಹೇಳಿದ್ದಾರೆ.

"ಕಾಬೂಲ್ ವಿಮಾನ ನಿಲ್ದಾಣದ ಗೇಟ್ ಬಳಿ ಹೋಗದಿರಿ": ಪ್ರಜೆಗಳಿಗೆ ಅಮೆರಿಕಾ ಸಂದೇಶ

'ನಮ್ಮ ಜನರ ಹಿತಾಸ್ತಿಯನ್ನು ಕಾಯ್ದುಕೊಳ್ಳುತ್ತೇವೆ. ಈ ದಾಳಿ ಹೊರತಾಗಿ ಅಫ್ಘಾನಿಸ್ತಾನದಿಂದ ಅಮೆರಿಕದ ನಾಗರಿಕರು ಮತ್ತು ಇತರರ ಸ್ಥಳಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ.

ಗುರುವಾರ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ 13 ಅಮೆರಿಕ ಯೋಧರು ಹಾಗೂ 60ಕ್ಕೂ ಹೆಚ್ಚು ಅಫ್ಘಾನ್ ನಾಗರಿಕರನ್ನು ಕೊಲ್ಲಲಾಗಿದೆ.

ಉಗ್ರರ ಕೌರ್ಯ ಮತ್ತು ಅಟ್ಟಹಾಸಕ್ಕೆ ಕಾಬೂಲ್‌ನ ಹಮೀದ್ ಕರ್ಜಾಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಗುರುವಾರ ಸಾಕ್ಷಿಯಾಗಿತ್ತು. ಗುರುವಾರ ಸಂಜೆ ವೇಳೆಗೆ ನಡೆದ ಎರಡು ಸ್ಫೋಟದಲ್ಲಿ ಸುಮಾರು 60 ಮಂದಿ ಪ್ರಾಣ ಕಳೆದುಕೊಂಡಿದ್ದರೆ 120ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

"ವಿಮಾನ ನಿಲ್ದಾಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಸ್ಫೋಟ ಹಾಗೂ ಗುಂಡಿನ ದಾಳಿ ನಡೆಸುವ ಅಪಾಯವಿದೆ. ಈ ವೇಳೆ ಅಮೆರಿಕ ಪ್ರಜೆಗಳು ವಿಮಾನ ನಿಲ್ದಾಣ ಹಾಗೂ ನಿಲ್ದಾಣದ ಗೇಟ್‌ಗಳ ಬಳಿ ತೆರಳಬೇಡಿ ," ಎಂದು ಯುಎಸ್ ರಾಯಭಾರಿ ಕಚೇರಿ ಸಂದೇಶ ರವಾನಿಸಿತ್ತು.

We Will Not Forget Will Hunt You Down Warns Joe Biden Over Kabul Attack

ತಾಲಿಬಾನ್ ಸ್ಪಷ್ಟನೆ: ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸ್ಫೋಟದ ಕುರಿತು ಅಮೆರಿಕಕ್ಕೆ ಮಾಹಿತಿ ನೀಡಿದ್ದು, ದಾಳಿ ಹಿಂದೆ ಐಸಿಸ್ (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆಂಡ್ ಸಿರಿಯಾ) ಉಗ್ರರು ಕೈವಾಡವಿರುವ ಬಗ್ಗೆ ಅನುಮಾನವಿದೆ ಎಂದಿದ್ದಾರೆ. "ತಾಲಿಬಾನ್ ಜಾಗತಿಕ ಸಮುದಾಯದೊಂದಿಗೆ ಕಾರ್ಯ ನಿರ್ವಹಿಸಲು ಬದ್ಧವಾಗಿದೆ. ಅಫ್ಘಾನಿಸ್ತಾನದ ನೆಲದಲ್ಲಿ ಭಯೋತ್ಪಾದಕರಿಗೆ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ," ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸ್ಪಷ್ಟನೆ ನೀಡಿದ್ದಾರೆ.

Breaking: ಕಾಬೂಲ್ ಏರ್‌ಪೋರ್ಟ್ ಬಳಿ ಸರಣಿ ಬಾಂಬ್ ಸ್ಫೋಟ: 13 ಮಂದಿ ಸಾವುBreaking: ಕಾಬೂಲ್ ಏರ್‌ಪೋರ್ಟ್ ಬಳಿ ಸರಣಿ ಬಾಂಬ್ ಸ್ಫೋಟ: 13 ಮಂದಿ ಸಾವು

ಮೆರಿಕ ಸೇನೆ ಹಿಂತೆಗೆಯುತ್ತಿದ್ದಂತೆ ಅಫ್ಘಾನಿಸ್ತಾನ ವಶಪಡಿಸಿಕೊಂಡ ತಾಲಿಬಾನ್

ಎರಡು ದಶಕಗಳ ನಂತರ ಅಫ್ಘಾನ್‌ನಿಂದ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದಂತೆ ತಾಲಿಬಾನಿಗಳು ಆಕ್ರಮಣ ಮಾಡಿ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡಿದ್ದಾರೆ. ತಾಲಿಬಾನಿಗಳ ಆಕ್ರಮಣ ಆರಂಭವಾಗುತ್ತಿದ್ದಂತೆ ಎಲ್ಲೆಲ್ಲೂ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಹಲವು ದೇಶಗಳು ಅಫ್ಘಾನಿಸ್ತಾನದಲ್ಲಿರುವ ತಮ್ಮ ಜನರು ಹಾಗೂ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುತ್ತಿವೆ. ತಾಲಿಬಾನ್ ಕ್ರೌರ್ಯಕ್ಕೆ ನಲುಗಿದ ಸಾವಿರಾರು ಪ್ರಜೆಗಳು ದೇಶ ತೊರೆದು ಹೋಗುವುದಕ್ಕಾಗಿ ಹಾತೊರೆಯುತ್ತಿದ್ದಾರೆ. ಸಾವಿರಾರು ಮಂದಿ ವಿಮಾನ ನಿಲ್ದಾಣದಲ್ಲಿ ನೆರೆದಿರುವುದನ್ನು ಗುರಿಯಾಗಿಸಿಕೊಂಡ ಉಗ್ರರು ಈ ಬಾಂಬ್ ಸ್ಫೋಟ ನಡೆಸಿದ್ದಾರೆ. ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

English summary
United States President Joe Biden vowed to retaliate against Thursday’s attack in Kabul, saying that he will hunt down those responsible and make them pay
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X