ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ WHO ಅನುಮತಿ

|
Google Oneindia Kannada News

ವಾಷಿಂಗ್ಟನ್,ಫೆಬ್ರವರಿ 16: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ಸೂಚಿಸಿದೆ.

ಖ್ಯಾತ ಅಂತಾರಾಷ್ಟ್ರೀಯ ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಜಂಟಿಯಾಗಿ ಈ ಲಸಿಕೆಯನ್ನು ತಯಾರಿಸಿದ್ದು, ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ನಿರಾಳರಾಗಬೇಡಿ:WHO ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ನಿರಾಳರಾಗಬೇಡಿ:WHO

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎನ್ನಲಾಗಿದೆ.

ಈ ಕುರಿತಂತೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಗೆಬ್ರೆಯೆಸುಸ್‌ ಅವರು, 'ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನು ವೇಗವಾಗಿ ವಿತರಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

 ಕೋವ್ಯಾಕ್ಸ್ ಕಾರ್ಯಕ್ರಮದಲ್ಲಿ ಲಸಿಕೆ ವಿತರಣೆ

ಕೋವ್ಯಾಕ್ಸ್ ಕಾರ್ಯಕ್ರಮದಲ್ಲಿ ಲಸಿಕೆ ವಿತರಣೆ

ಇನ್ನು ವಿಶ್ವಸಂಸ್ಥೆ ಜಾರಿಗೆ ತಂದಿರುವ ಕೋವ್ಯಾಕ್ಸ್ ಕಾರ್ಯಕ್ರಮದ ಅಡಿಯಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದೆ.

 ಹೆಚ್ಚಾಗಿ ಅಸ್ಟ್ರಾಜೆನೆಕಾ ಲಸಿಕ ವಿತರಣೆ

ಹೆಚ್ಚಾಗಿ ಅಸ್ಟ್ರಾಜೆನೆಕಾ ಲಸಿಕ ವಿತರಣೆ

ಪ್ರಮುಖವಾಗಿ ವಿಶ್ವಸಂಸ್ಥೆ ಅಸ್ಟ್ರಾಜೆನೆಕಾ ಲಸಿಕೆಯನ್ನು ಹೆಚ್ಚಾಗಿ ವಿತರಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿದ್ದು, ಇತರೆ ಲಸಿಕೆಗಳಿಗೆ ಹೋಲಿಸಿದರೆ ಅಸ್ಟ್ರಾಜೆನೆಕಾ ಲಸಿಕೆ ಕಡಿಮೆ ಬೆಲೆಯಲ್ಲಿ ಲಭ್ಯವಿದೆ ಮತ್ತು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್‌ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

 ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಮೈಮರೆಯಬೇಡಿ

ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಮೈಮರೆಯಬೇಡಿ

ಕೊರೊನಾ ನಿರ್ಬಂಧ ಸಡಿಲಿಕೆ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ. ಕೊರೊನಾ ವೈರಸ್ ವಿಶ್ವವ್ಯಾಪಿಯಾಗುವುದರ ಜತೆಗೆ ಬೇರೆ ಬೇರೆ ರೂಪವನ್ನು ತಾಳಿದೆ, ಇಂತಹ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಸಡಿಲಿಕೆ ಮಾಡುವುದು ಸಮಂಜಸವಲ್ಲ ಎಂದು ಹೇಳಿದೆ. ಸತತ ನಾಲ್ಕನೇ ವಾರವೂ ಸೋಂಕು ಪ್ರಕರಣಗಳು ಕಡಿಮೆಯಾಗಿವೆ. ಜತೆಗೆ ಸತತ ಎರಡನೇ ವಾರವೂ ಸಾವಿನ ಪ್ರಕರಣಗಳು ಸಹ ಕಡಿಮೆಯಾಗಿವೆ. ಎಲ್ಲಾ ರಾಷ್ಟ್ರಗಳಲ್ಲಿ ಆರೋಗ್ಯ ರಕ್ಷಣೆಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರಿಂದ ಸೋಂಕು ಪ್ರಕರಣಗಳು ಕಡಿಮೆಯಾಗಿರಬಹುದು. ಆದರೆ, ಈ ಪರಿಸ್ಥಿತಿ ಅನಿಶ್ಚಿತತೆಯಿಂದ ಮತ್ತು ಅಪಾಯದಿಂದ ಕೂಡಿದೆ.

 ವೈರಸ್ ಮೂಲದ ಬಗ್ಗೆ ಇನ್ನೂ ತಿಳಿದಿಲ್ಲ

ವೈರಸ್ ಮೂಲದ ಬಗ್ಗೆ ಇನ್ನೂ ತಿಳಿದಿಲ್ಲ

ವೈರಸ್‌ನ ಮೂಲದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಇನ್ನೂ ವಿಜ್ಞಾನಿಗಳಿಂದ ಸಾಧ್ಯವಾಗಿಲ್ಲ, ಡಿಸೆಂಬರ್‌ನಲ್ಲಿ ಮನುಷ್ಯರಿಗೆ ಯಾವ ಮಾರ್ಗದಲ್ಲಿ ವೈರಸ್ ಪ್ರವೇಶಿಸಿತು ಎನ್ನುವ ಕುರಿತು ಅಧ್ಯಯನಗಳು ನಡೆಯಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

English summary
The World Health Organization(WHO) gave emergency use approval to AstraZeneca's Covid-19 vaccines on Monday, allowing distribution to some of the world's poorest countries to begin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X