ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವದಾದ್ಯಂತ ದಾಖಲೆ ಪ್ರಮಾಣದ ಕೊರೊನಾ ಸೋಂಕಿತರು ಪತ್ತೆ: WHO

|
Google Oneindia Kannada News

ವಾಷಿಂಗ್ಟನ್, ಸೆಪ್ಟೆಂಬರ್ 22: ಒಂದು ವಾರದ ಹಿಂದೆ ವಿಶ್ವದಾದ್ಯಂತ ದಾಖಲೆ ಪ್ರಮಾಣದ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಈ ಅವಧಿಯಲ್ಲಿ ಸುಮಾರು 2 ಮಿಲಿಯನ್ ಸೋಂಕಿತರು ಪತ್ತೆಯಾಗಿದ್ದಾರೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆಫ್ರಿಕಾವನ್ನು ಹೊರತುಪಡಿಸಿ ವಿಶ್ವದ ಇತರೆ ಪ್ರದೇಶಗಳಲ್ಲಿ ಕಳೆದ ಏಳು ದಿನಗಳಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗಿದೆ.

ನೂತನ ಆವಿಷ್ಕಾರ: ಕೊವಿಡ್ 19 ರೋಗವನ್ನು ತಡೆಯಲು ಅಯೋಡಿನ್ ದ್ರಾವಣ ನೂತನ ಆವಿಷ್ಕಾರ: ಕೊವಿಡ್ 19 ರೋಗವನ್ನು ತಡೆಯಲು ಅಯೋಡಿನ್ ದ್ರಾವಣ

ಅಮೆರಿಕದಲ್ಲಿ ಕೊವಿಡ್-19 ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ ಮತ್ತು ಕಳೆದ ವಾರದಲ್ಲಿ ವರದಿಯಾದ ಎಲ್ಲಾ ಹೊಸ ಪ್ರಕರಣಗಳಲ್ಲಿ ಶೇ 38ಕ್ಕಿಂತ ಹೆಚ್ಚಿನ ಪ್ರಕರಣಗಳು ಇಲ್ಲಿಯೇ ವರದಿಯಾಗಿವೆ.

WHO Reports Highest Weekly Increment Of Nearly 2 Million In COVID-19 Cases Worldwide

ಯುರೋಪ್‌ನಲ್ಲಿ ಕಳೆದ ವಾರದಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಶೇ 27ರಷ್ಟು ಸಾವುಗಳು ಹೆಚ್ಚಳವಾಗಿದೆ.

ಸೆಪ್ಟೆಂಬರ್ 14 ರಿಂದ 20ರ ಅವಧಿಯಲ್ಲಿ ಸುಮಾರು ಎರಡು ಮಿಲಿಯನ್ ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ 6ರಷ್ಟು ಹೆಚ್ಚಳವಾಗಿದೆ ಮತ್ತು ಕೊವಿಡ್-19 ಪ್ರಾರಂಭವಾದಾಗಿನಿಂದಲೂ ವಾರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ಇದೇ ಅವಧಿಯಲ್ಲಿ, ಸಾವಿನ ಸಂಖ್ಯೆಯಲ್ಲಿ ಶೇ 10 ರಷ್ಟು ಇಳಿಕೆ ಕಂಡುಬಂದಿದ್ದು, ಕಳೆದ ಏಳು ದಿನಗಳಲ್ಲಿ 36,764 ಸಾವುಗಳು ಸಂಭವಿಸಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

English summary
The World Health Organisation (WHO) has reported a record number of confirmed cases of the coronavirus registered across the world over the past week almost 2 million infections which marks the highest number in a single week so far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X