ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಬೈಡನ್ ಕರೆ ಮಾಡುತ್ತಾರಾ?
ವಾಷಿಂಗ್ಟನ್, ಸೆಪ್ಟೆಂಬರ್, 28: ಅಮೆರಿಕ ಅಧ್ಯಕ್ಷ ಜೋ ಬೈಡನ್, ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌ಗೆ ಕರೆ ಮಾಡಲಿದ್ದಾರೆಯೇ ಎಂಬ ವಿಚಾರದಲ್ಲಿ ಈಗ ಸುದ್ದಿಗಳು ಆಗುತ್ತಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವೈಟ್‌ಹೌಸ್ ವಕ್ತಾರೆ, "ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌ಗೆ ಕರೆ ಮಾಡಲಿದ್ದಾರೆಯೇ ಎಂದು ನಾನು ಊಹೆ ಮಾಡಲಾಗದು," ಎಂದು ತಿಳಿಸಿದ್ದಾರೆ.
"ಅಫ್ಘಾನಿಸ್ತಾನದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದ ಬೆಂಬಲವನ್ನು ವಾಷಿಂಗ್ಟನ್ ಬಯಸುತ್ತಿದ್ದರೂ, ಬಿಡುವಿಲ್ಲದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಈ ವಿಚಾರದಲ್ಲಿ ಪಾಕಿಸ್ತಾನ ಪ್ರಧಾನ ಮಂತ್ರಿ ಜೊತೆ ಮಾತನಾಡುವ ಗೋಜಿಗೆ ಹೋಗಿಲ್ಲ,"ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಇತ್ತೀಚೆಗೆ ಅಮೆರಿಕದ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಟೀಕೆ ಮಾಡಿದ್ದರು.
ಈ ಹಿನ್ನೆಲೆ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌ಗೆ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಕರೆ ಮಾಡಲಿದ್ದಾರೆಯೇ ಎಂಬ ಬಗ್ಗೆ ಸೋಮವಾರ ಮಾಧ್ಯಮಗಳು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ, "ಈ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಹಾಗೂ ಪಾಕಿಸ್ತಾನ ಪ್ರಧಾನ ಮಂತ್ರಿಯ ಮಾತುಕತೆ ವಿಚಾರದಲ್ಲಿ ನಾನು ಯಾವುದೇ ಊಹೆಯನ್ನು ಮಾಡಲ್ಲ. ಒಂದು ವೇಳೆ ಉಭಯ ನಾಯಕರ ನಡುವೆ ಫೋನ್ ಮೂಲಕ ಮಾತುಕತೆ ನಡೆದರೆ ನಾವು ಖಂಡಿತವಾಗಿಯೂ ಮಾಧ್ಯಮಕ್ಕೆ ಮಾಹಿತಿ ನೀಡುತತೇವೆ," ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸೆಪ್ಟೆಂಬರ್ 24 ರಂದು ಭೇಟಿಯಾದ ಸಂದರ್ಭದಲ್ಲಿ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಭೆಯಲ್ಲಿ ಮಾತನಾಡಿ, "ಅಫ್ಘಾನಿಸ್ತಾನದಲ್ಲಿ ಯುಎಸ್ ಕ್ರಮದ ಬಗ್ಗೆ" ಕಟು ಟೀಕೆಯನ್ನು ಮಾಡಿದರು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ತನ್ನ ನಡುವೆ ಯಾವುದೇ ನೇರ ಸ೦ಪರ್ಕ ಇಲ್ಲದಿರುವುದನ್ನು ವಿಷಾದಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ, "ಪಾಕಿಸ್ತಾನದ ವಿದೇಶಾಂಗ ಇಲಾಖೆ, ರಕ್ಷಣಾ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ಯುಎಸ್ ಅಧಿಕಾರಿಗಳು ಉನ್ನತ ಮಟ್ಟದ ಸಂಪರ್ಕವನ್ನು ಹೊಂದಿದ್ದಾರೆ," ಎಂದು ತಿಳಿಸಿದರು.
"ಈ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಎಲ್ಲಾ ವಿದೇಶ ನಾಯಕರುಗಳ ನಡುವೆ ಮಾತುಕತೆ ನಡೆಸಿಲ್ಲ. ಅದು ಖಂಡಿತವಾಗಿಯೂ ಸತ್ಯ. ಆದರೆ ಖಂಡಿತವಾಗಿ ಅಮೆರಿಕ ಅಧ್ಯಕ್ಷರ ಬಳಿ ಇದಕ್ಕಾಗಿಯೇ ಒಂದು ತಂಡವಿದೆ. ಇದಕ್ಕಾಗಿ ತಜ್ಞರ ತಂಡವನ್ನೇ ಮಾಡಲಾಗಿದೆ," ಎಂದು ಜೆನ್ ಪ್ಸಾಕಿ ವಿವರಿಸಿದ್ದಾರೆ.
"ಯುಎಸ್ ಹಾಗೂ ಪಾಕಿಸ್ತಾನ ಜೊತೆಯಾಗಿ ಕಾರ್ಯನಿರ್ವಹಣೆ ಮಾಡುವುದನ್ನು ಮುಂದುವರಿಸಲಿದೆ. ಎಲ್ಲಿ ಸಾಧ್ಯವೋ ಅಲ್ಲಿ ನಾವು ಮುತುವರ್ಜಿ ವಹಿಸಿಕೊಂಡು ಕಾರ್ಯ ನಿರ್ವಹಣೆ ಮಾಡುತ್ತೇವೆ. ಹಾಗೆಯೇ ಇದು ನಮಗೆ ಹೆಚ್ಚು ಕಾಳಜಿಯುತವಾಗಿದ್ದರೆ ಮಾತ್ರ ಎಂಬುವುದು ಮುಖ್ಯ. ಆದರೆ ಉಭಯ ನಾಯಕರ ನಡುವೆ ಈ ಸಂದರ್ಭದಲ್ಲಿ ಮಾತುಕತೆ ನಡೆಯಲಿದೆಯೇ ಇಲ್ಲವೇ ಎಂದು ನಾನು ಹೇಳಲಾಗದು," ಎಂದಿದ್ದಾರೆ. "ನಮ್ಮ ರಾಷ್ಟ್ರದ ಎಲ್ಲಾ ಇಲಾಖೆಗಳು ಎಲ್ಲಾ ದೇಶದ ಉನ್ನತ ಇಲಾಖೆಗೊಂದಿಗೆ ಸಂಪರ್ಕವನ್ನು ಹೊಂದಿದೆ," ಎಂಬುವುದನ್ನು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಾಕಿ ಪುನರುಚ್ಚರಿಸಿದ್ದಾರೆ.
ಸೋಮವಾರ "ವಿದೇಶಾಂಗ ಇಲಾಖೆಯು ರಾಜ್ಯ ಕಾರ್ಯದರ್ಶಿ ವೆಂಡಿ ಆರ್ ಶೆರ್ಮನ್ ಭಾರತ ಪ್ರವಾಸದ ಬಳಿಕ ಮುಂದಿನ ತಿಂಗಳು ಪಾಕಿಸ್ತಾನಕ್ಕೆ ತೆರಳಲಿದ್ದಾರೆ," ಎಂದು ವಿದೇಶಾಂಗ ಇಲಾಖೆ ಘೋಷಣೆ ಮಾಡಿದ್ದಾರೆ.
(ಒನ್‌ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications