ಪ್ರಿಯತಮ ಕೈಕೊಟ್ಟ ಕಾರಣ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ
ಯಾದಗಿರಿ, ಡಿಸೆಂಬರ್ 19 : ಪ್ರೀತಿಸಿದ ಯುವಕ ಕೈಕೊಟ್ಟ ಕಾರಣ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿಯಲ್ಲಿ ಮಂಗಳವಾರ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ನಾಗರಾಜ ಎಂಬ ಯುವಕನಿಂದ ಅಪ್ರಾಪ್ತೆಗೆ ಮೋಸ ಆಗಿದೆ. ಪ್ರೀತಿಸಿದ ಯುವಕ ಮೋಸ ಮಾಡಿದ ಕಾರಣಕ್ಕೆ ಮನನೊಂದು15 ವರ್ಷದ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರಿಂದ ನಾಗರಾಜನ ವಿರುದ್ಧ ದೂರು ದಾಖಲಿಸಿದ್ದಾರೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.












Click it and Unblock the Notifications