ಅಶ್ಲೀಲ ವೀಡಿಯೋ ತೋರಿಸಿ ಪಾಠ ಮಾಡುವರೆಂದು ಶಿಕ್ಷಕನ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು

ಯಾದಗಿರಿ, ಜನವರಿ 22: ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಾ ಪಾಠ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿಕ್ಷಕರೊಬ್ಬರ ವಿರುದ್ಧ ಪೋಷಕರು ತಿರುಗಿ ಬಿದ್ದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

Recommended Video

      ಕಾಶ್ಮೀರ ವಿಚಾರದಲ್ಲಿ ಟ್ರಂಪ್ ಮಧ್ಯಸ್ತಿಕೆ | Donald Trump | Kashmir | India | Oneindia kannada

      ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಡೇಪಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಚಂದ್ರಪಾಲ್ ಎನ್ನುವವರು ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪಾಠ ಮಾಡುತ್ತಾರೆ ಎಂದು ಮಕ್ಕಳು ಮತ್ತು ಪಾಲಕರು ಆರೋಪಿಸಿದ್ದಾರೆ.

      ಈ ಶಿಕ್ಷಕ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಾಠದ ನೆಪದಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿದ್ದು, ಯಾರಿಗೂ ಹೇಳದಂತೆ ಮಕ್ಕಳನ್ನು ಬೆದರಿಸುತ್ತಿದ್ದ ಎನ್ನಲಾಗಿದೆ. ಈ ವಿಷಯವನ್ನು ಮಕ್ಕಳು ಪೋಷಕರ ಗಮನಕ್ಕೆ ತಂದಿದ್ದಾರೆ. ಇದರಿಂದ ಆ ಪೋಷಕರು ಶಾಲೆಯ ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ. ಮೇಲಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ, ಏಳನೇ ತರಗತಿ ಮಕ್ಕಳಿಗೆ ಪುಸ್ತಕ ಸರಬರಾಜು ಆಗದಿರುವುದರಿಂದ ಮೊಬೈಲ್ ನಲ್ಲಿ ಆದಿವಾಸಿಗಳ ಜೀವನ, ಸಂತಾನೋತ್ಪತ್ತಿ ಬಗ್ಗೆ ಪಾಠ ಮಾಡುತ್ತಿದ್ದೆ ಎಂದಿದ್ದಾರೆ ಚಂದ್ರಪಾಲ್.

      Children Alleges Yadagiri Teacher Teaching Lesson With Obscene Video

      ಗುರುಮಠಕಲ್ ವಲಯ ಶಿಕ್ಷಣ ಸಂಯೋಜಕರು ಶಾಲೆಗೆ ಭೇಟಿ ನೀಡಿ ಮಕ್ಕಳು ಮತ್ತು ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಶಿಕ್ಷಕ ಮೊಬೈಲ್ ನಲ್ಲಿ ಪಾಠ ಮಾಡುವುದು ತಪ್ಪು, ಈ ಬಗ್ಗೆ ಮೇಲಾಧಿಕಾರಿಗಳಿಗೆ ಶಿಸ್ತುಕ್ರಮಕ್ಕೆ ವರದಿ ಕಳುಹಿಸಲಾಗುವುದು ಎಂದಿದ್ದಾರೆ. ಈ ಶಿಕ್ಷಕನನ್ನು ಶಾಲೆಯಲ್ಲಿ ಇರಿಸಿಕೊಳ್ಳಬಾರದು ಎಂದು ಮಕ್ಕಳು ಮತ್ತು ಪೋಷಕರು ಒತ್ತಾಯಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+