ಯಾದಗಿರಿ; ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಜಿ.ಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ
ಯಾದಗಿರಿ, ಜೂನ್ 24: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲೇ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಗರದ ಚಿತ್ತಾಪುರ ರಸ್ತೆಯ ಎಸ್ಪಿ ಕಚೇರಿ ಸಮೀಪ ಇಂದು ನಡೆದಿದೆ.
ಶಾಸಕ ರಾಜುಗೌಡರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಲಿಂಗಪ್ಪ ಕರ್ನಾಳ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಬಂದ ಮೂವರು ಕರ್ನಾಳ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಜಿಪಂ ಬಿಜೆಪಿ ಸದಸ್ಯ ಮರಿಲಿಂಗಪ್ಪ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.












Click it and Unblock the Notifications