• search
  • Live TV
ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾದಗಿರಿ; ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಜಿ.ಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

By ಯಾದಗಿರಿ ಪ್ರತಿನಿಧಿ
|
Google Oneindia Kannada News

ಯಾದಗಿರಿ, ಜೂನ್ 24: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲೇ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಗರದ ಚಿತ್ತಾಪುರ ರಸ್ತೆಯ ಎಸ್ಪಿ ಕಚೇರಿ ಸಮೀಪ ಇಂದು ನಡೆದಿದೆ.

ಮೈಸೂರಿನಲ್ಲಿ ಕುಡಿತ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ; ಮೂವರ ಬಂಧನಮೈಸೂರಿನಲ್ಲಿ ಕುಡಿತ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ; ಮೂವರ ಬಂಧನ

ಶಾಸಕ ರಾಜುಗೌಡರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಲಿಂಗಪ್ಪ ಕರ್ನಾಳ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಬಂದ ಮೂವರು ಕರ್ನಾಳ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಜಿಪಂ ಬಿಜೆಪಿ ಸದಸ್ಯ ಮರಿಲಿಂಗಪ್ಪ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

English summary
Assualt infront of zilla panchayat member in front of DC office near the SP office on Chittapur road in yadgiri,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X