ಡಿಕೆ ಶಿವಕುಮಾರ್‌ಗೆ ಸಿಎಂ ಪಟ್ಟ: ನೊಣವಿನಕೆರೆ ಸ್ವಾಮೀಜಿ ಸ್ಪೋಟಕ ಭವಿಷ್ಯ!
ಯಾದಗಿರಿ, ಮಾರ್ಚ್ 05: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ ತಿಂಗಳಿಗೆ ಎರಡು ವರ್ಷ ಪೂರೈಸಲಿದೆ. ಈ ನಡುವೆ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ಪಾಳಯದಲ್ಲಿಯೇ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಯಾಗುತ್ತಿದೆ. ಡಿ ಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂದು ಹಲವು ಕಾಂಗ್ರೆಸ್‌ನ ಹಿರಿಯ ನಾಯಕರು ಭವಿಷ್ಯ ನುಡಿಯುತ್ತಿದ್ದಾರೆ. ಇದರ ಮಧ್ಯ ನೊಣವಿನಕೆರೆಯ ಶಿವಯೋಗೇಶ್ವರ ಶಿವಾಚಾರ್ಯರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುರಿತು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಯಾದಗಿರಿಯ ಅಬ್ಬೆತುಮಕೂರಲ್ಲಿ ನೊಣವಿನಕೆರೆಯ ಶಿವಯೋಗೇಶ್ವರ ಶಿವಾಚಾರ್ಯರು ಅವರು ಮಾತನಾಡಿ, ಡಿಕೆ ಶಿವಕುಮಾರ್ ಸಿಎಂ ಆಗುವುದು ಎಲ್ಲರ ಸಂಕಲ್ಪವಾಗಿದೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ಎಲ್ಲರ ಆಸೆಯಾಗಿದೆ. ರೈತರು ಸದ್ಭಕ್ತರು ವರ್ತಕರು ಸೇರಿದಂತೆ ಎಲ್ಲರ ಆಶಯ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ಇದೆ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗಲು ಯೋಗ್ಯವಾದ ವ್ಯಕ್ತಿ. ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಸಂಕಲ್ಪವಿದೆ. ಡಿಕೆ ಸಿಎಂ ಆಗಬೇಕೆಂಬುದು ನಮ್ಮ ಮಠದ ಆಶೀರ್ವಾದವೂ ಇದೆ. ಒಂದು ದಿನ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂದು ನಾವು ಹರಸುತ್ತಾ ಇದ್ದೇವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ದಿನಗಳಲ್ಲಿ ಹೇಳೋಕೆ ಆಗುವುದಿಲ್ಲ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಎಲ್ಲರ ಸಂಕಲ್ಪವಾಗಿದೆ ಎಂದು ನೊಣವಿನಕೆರೆಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಕುರಿತು ಡಿಕೆಶಿ ಪ್ರತಿಕ್ರಿಯೆ
ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಕೆಲವು ಮಂತ್ರಿಗಳು ಹಾಗೂ ಶಾಸಕರ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ರಾಜಣ್ಣ ಅವರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ್ದು, ಸಭೆಗೆ ಗೈರು ಹಾಜರಾಗಿದ್ದರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಕೆ.ಎನ್.ರಾಜಣ್ಣ ಅವರಿಗೆ ಅನಾರೋಗ್ಯದ ಕಾರಣಕ್ಕೆ ಸಭೆಗೆ ಬರಲು ಆಗಲಿಲ್ಲ. ವಿಧಾನಸಭೆಯಲ್ಲಿ ಅವರು ಇದ್ದರು ಎಂದು ಕೇಳಲ್ಪಟ್ಟೆ. ನಮಗೆಲ್ಲಾ ವಯಸ್ಸಾಗಿದೆ, ನನಗೂ ಕತ್ತು ನೋವು ಬಂದಿದೆ. ಇದೆಲ್ಲಾ ಈ ವಯಸ್ಸಿನಲ್ಲಿ ಸರ್ವೇ ಸಾಮಾನ್ಯ ಎಂದರು.
ಮುಖ್ಯಮಂತ್ರಿಗಳು, ನಾನು ಹಾಗೂ ಕೆಲವು ಸಚಿವರು ಸೇರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications