ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಾದಗಿರಿ : ಕುಮಾರಸ್ವಾಮಿ ಗ್ರಾಮ ವಾಸ್ತವ್ಯ, ಕಾರ್ಯಕ್ರಮ ಪಟ್ಟಿ

|
Google Oneindia Kannada News

ಯಾದಗಿರಿ, ಜೂನ್ 14 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಲಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಜೂನ್ 21ರಂದು ಅವರು ವಾಸ್ತವ್ಯ ಹೂಡಲಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮದ ಪಟ್ಟಿಯನ್ನು ಯಾದಗಿರಿ ಜಿಲ್ಲಾಡಳಿತ ಅಂತಿಮಗೊಳಿಸಿದೆ. ಜೂನ್ 21ರಂದು ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮ ವಾಸ್ತವ್ಯಕ್ಕೆ ರೈಲಿನ ಮೂಲಕ ಕುಮಾರಣ್ಣನ ಪ್ರಯಾಣಗ್ರಾಮ ವಾಸ್ತವ್ಯಕ್ಕೆ ರೈಲಿನ ಮೂಲಕ ಕುಮಾರಣ್ಣನ ಪ್ರಯಾಣ

ಬೆಂಗಳೂರಿನಿಂದ ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಯಾದಗಿರಿಗೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಜೂ.21ರಂದು ಬೆಳಗ್ಗೆ 3.48ಕ್ಕೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೆ ಕುಮಾರಸ್ವಾಮಿ ಆಗಮಿಸುವರು.

ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಸ್ಥಳ, ದಿನಾಂಕ ಅಂತಿಮಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಸ್ಥಳ, ದಿನಾಂಕ ಅಂತಿಮ

ಬೆಳಗ್ಗೆ 7.30ಕ್ಕೆ ಯಾದಗಿರಿಯಿಂದ ರಸ್ತೆಯ ಮೂಲಕ ಗ್ರಾಮ ವಾಸ್ತವ್ಯ ಮಾಡಲಿರುವ ಚಂಡರಕಿ ಗ್ರಾಮ ತಲುಪಲಿದ್ದಾರೆ. ಚಂಡರಕಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಜನತಾದರ್ಶನ ನಡೆಸಿ, ಮನವಿ ಸ್ವೀಕಾರ ಮತ್ತು ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ಸಿಎಂ ಗ್ರಾಮ ವಾಸ್ತವ್ಯ: ಜಿಲ್ಲಾಡಳಿತಕ್ಕೆ ಮಾರ್ಗಸೂಚಿ ರವಾನೆಸಿಎಂ ಗ್ರಾಮ ವಾಸ್ತವ್ಯ: ಜಿಲ್ಲಾಡಳಿತಕ್ಕೆ ಮಾರ್ಗಸೂಚಿ ರವಾನೆ

HD Kumaraswamy Yadgir grama vastavaiya schedule

ಸಂಜೆ 6.30ರಿಂದ ರಾತ್ರಿ 8.30ರ ತನಕ ರೈತರೊಂದಿಗೆ ಸಂವಾದ, ಮಕ್ಕಳ ಸಾಂಸ್ಕೃತಿ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲಿದ್ದಾರೆ. ಬಳಿಕ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಮಾಡಲಿದ್ದಾರೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂನ್ 22ರಂದು ಬೆಳಗ್ಗೆ 7.30 ಗಂಟೆಗೆ ಚಂಡರಕಿ ಗ್ರಾಮದಿಂದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೆರೂರು-ಬಿ ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

English summary
Karnataka Chief Minister H.D.Kumaraswamy will began Grama Vastavaiya from June 21, 2019 from Yadgir district. Here are the schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X