ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ ಸೋಲಿನ ಬಳಿಕ ಜೆಡಿಎಸ್ ಹುದ್ದೆ ತೊರೆದ ಶಾಸಕನ ಪುತ್ರ

|
Google Oneindia Kannada News

ಯಾದಗಿರಿ, ಡಿಸೆಂಬರ್ 12: ಉಪ ಚುನಾವಣೆಯಲ್ಲಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವ ಪರ್ವ ಜೆಡಿಎಸ್‌ನಲ್ಲೂ ಆರಂಭವಾಗಿದೆ.

ಜೆಡಿಎಸ್ ರಾಜ್ಯ ಯು ಘಟಕದ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರು ರಾಜೀನಾಮೆ ನೀಡಿದ್ದಾರೆ.ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಆಪ್ತರಾಗಿರುವುದರಿಂದ ಶರಣಗೌಡ ಕಂದಕೂರ ಅವರಿಗೆ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿತ್ತು.

ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶರಣಗೌಡ ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

JDS Youth Wing General Secretary Resigned

ಶರಣಗೌಡ ಕಂದಕೂರ ಅವರು ವಿಧಾನಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಒಂದು ಸ್ಥಾನ ಗೆಲ್ಲದ ಹಿನ್ನೆಲೆಯಲ್ಲಿ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಹಿಂದಿರುವ ರಾಜಕೀಯ ಲೆಕ್ಕಾಚಾರಗಳೇನು?ಸಿದ್ದರಾಮಯ್ಯ ರಾಜೀನಾಮೆ ಹಿಂದಿರುವ ರಾಜಕೀಯ ಲೆಕ್ಕಾಚಾರಗಳೇನು?

ಶರಣಗೌಡ ಕಂದಕೂರು ಮತ್ಯಾರೂ ಅಲ್ಲ ಗುರುಮಿಠಕಲ್ ಶಾಸಕ ನಾಗನಗೌಡ ಅವರ ಪುತ್ರ. ನಾಗನಗೌಡರನ್ನು ಬಿಜೆಪಿಗೆ ಸೆಳೆಯಲು ಯಡಿಯೂರಪ್ಪನವರು ಶರಣಗೌಡ ಸಂಪರ್ಕಿಸಿದ್ದರು ಎನ್ನಲಾದ ಆಡಿಯೋವನ್ನು ಎಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದರು.

JDS Youth Wing General Secretary Resigned

ಆಡಿಯೋದಲ್ಲಿ 50 ಕೋಟಿ ರೂ. ಆಫರ್ ಮತ್ತು ಚುನಾವಣೆಯಲ್ಲಿ ಬೆಂಬಲದದ ಜೊತೆ ಮಂತ್ರಿ ಸ್ಥಾನ ನೀಡಲಾಗುವುದು ಎಂಬ ಧ್ವನಿ ಕೇಳಿ ಬಂದಿತ್ತು. ಅಷ್ಟೇ ಅಲ್ಲದೇ ತಂದೆಯವರು ಅನರ್ಹರಾದರೆ ಏನು ಎಂದು ಕೇಳಿದ್ದಕ್ಕೆ ಅದಕ್ಕೆ ಏನು ತಲೆ ಕೆಡಿಸಿಕೊಳ್ಳಬೇಡ.

ಸ್ಪೀಕರ್ ರಮೇಶ್ ಕುಮಾರ್ ಅವರನ್ನು 50 ಕೋಟಿ ರೂ. ನೀಡಿ ಬುಕ್ ಮಾಡಲಾಗಿದೆ ಎಂದು ತಿಳಿಸಿದರು. ಈ ವೇಳೆ ಕೋರ್ಟ್ ನಲ್ಲಿ ಏನಾದರೆ ಆದರೆ ಎಂದು ಕೇಳಿದ್ದಕ್ಕೆ ಅದಕ್ಕೆಲ್ಲ ಹೆದರುವ ಅಗತ್ಯವಿಲ್ಲ.

ಅಮಿತ್ ಶಾ, ಮೋದಿ ಇದ್ದಾರೆ. ಸುಪ್ರೀಂ ಕೋರ್ಟ್ ಜಡ್ಜ್ ಗಳನ್ನು ಬುಕ್ ಮಾಡಿದ್ದಾರೆ ಎಂದು ಆಡಿಯೋದಲ್ಲಿ ತಿಳಿಸಲಾಗಿತ್ತು.

English summary
JDS Youth Wing General Secretary Sharana Gowda Kundkur Resigned after By election Defeated.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X