ಬಿಕೆ ಹರಿಪ್ರಸಾದ್ ಅವರನ್ನೇ ಮುಂದಿನ ಸಿಎಂ ಮಾಡಿ- ಪ್ರಣವಾನಂದಶ್ರೀ ಒತ್ತಾಯ
ಯಾದಗಿರಿ ಜೂನ್ 30: ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಬೇಕು ಎನ್ನುವ ವಿಚಾರ ಮತ್ತೆ ಚಿಗುರೊಡೆದಿದೆ. ಸಿಎಂ ಅಥವಾ ಡಿಸಿಎಂ ಬದಲಾವಣೆಯಾದರೆ ತಮ್ಮ ಸಮುದಾಯದವರಿಗೇ ಸ್ಥಾನ ನೀಡಬೇಕು ಎಂದು ಪ್ರಣವಾನಂದಶ್ರೀ ಒತ್ತಾಯಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆನ್ನುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಅವರ ಒತ್ತಾಯವಾದರೆ, ಮತ್ತೊಂದೆಡೆ ಬಿಕೆ ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಎಂದು ಘೋಷಿಸುವಂತೆ ಪ್ರಣವಾನಂದಶ್ರೀ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ ಅವರು, ಇಡೀ ಹಿಂದುಳಿದ ಸಮಾಜ ಬಿಕೆ ಹರಿಪ್ರಸಾದ ಅವರ ಹಿಂದೆ ಇದೆ. ನಾವು ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರು ನಿಷ್ಠಾವಂತರು. ಮೂಲತ: ಕಾಂಗ್ರೆಸ್‌ನವರು ಯಾವುದೇ ಪಕ್ಷದಿಂದ ವಲಸೆ ಬಂದ ನಾಯಕರಲ್ಲ. ಇಂತಹ ನಿಷ್ಠಾವಂತರಿಗೆ ಸ್ಥಾನಮಾನ ನೀಡಬೇಕು ಎಂದು ಪ್ರಣವಾನಂದಶ್ರೀ ಹೇಳಿದರು.
ಪ್ರಣವಾನಂದ ಸ್ವಾಮೀಜಿ, 'ಚಂದ್ರಶೇಖರ ಶ್ರೀಗಳು ಹೇಳಿದಾಗ ಎಲ್ಲರೂ ಸ್ವಾಗತಿಸಿದರು. ಡಿ.ಕೆ.ಸುರೇಶ್, ಬಾಲಕೃಷ್ಣ, ಚಲುವರಾಯಸ್ವಾಮಿ ಸ್ವಾಗತಿಸಿದ್ರು. ಒಂದು ಕಡೆ ಶ್ರೀಗಳ ಹೇಳಿಕೆಯನ್ನ ಸ್ವಾಗತ ಮಾಡೋದು. ಮತ್ತೊಂದು ಕಡೆ ರಾಜಕೀಯಕ್ಕೆ ಬರಬೇಡ ಎಂದು ಹೇಳುವುದು. ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್. ನಮಗೆ ನೋವಾಗಿದಕ್ಕೆ ನಾವು ಹೇಳ್ತಿದ್ದೇವೆ. ನಮಗೆ ಯಾರು ಡಿಸಿಎಂ ಸ್ಥಾನ ಕೊಟ್ಟಿಲ್ಲ.ಈಗಾಗಲೇ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಇದ್ದಾರೆ. ಜೊತೆಗೆ ಒಕ್ಕಲಿಗ ಸಮುದಾಯದ ಸಚಿವರು ಇದ್ದಾರೆ. ಚಂದ್ರಶೇಖರಶ್ರೀ ಅವರ ಸಮುದಾಯದ ಬಗ್ಗೆ ಮಾತಾಡಿದ್ದಾರೆ. ಆದ್ರೆ ಡಿ.ಕೆ.ಶಿವಕುಮಾರ್ರದ್ದು ರಾಜಕೀಯ ಗಿಮಿಕ್ನ ಭಾಗ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮಗೆ ನೋವಾಗಿದ್ದಕ್ಕೆ ನಾವು ಹೇಳ್ತಿದ್ದೇವೆ. ನಮ್ಮ ಸಮುದಾಯಕ್ಕೆ ಯಾರೂ ಡಿಸಿಎಂ ಸ್ಥಾನ ಕೊಟ್ಟಿಲ್ಲ, ಅದೇ ಒಕ್ಕಲಿಗ ಸಮುದಾಯದಲ್ಲಿ ಈಗಾಗಲೇ ಡಿಸಿಎಂ ಆಗಿ ಡಿಕೆ ಶಿವಕುಮಾರ ಇದ್ದಾರೆ, ಸಚಿವರೂ ಇದ್ದಾರೆ. ಇಷ್ಟಾಗಿಯೂ ಚಂದ್ರಶೇಖರ್ ಸ್ವಾಮೀಜಿಯವರು ಅವರ ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಆಗಲೆಂದು ಆಗ್ರಹಿಸಿದ್ದಾರೆ. ಆದರೆ ನಾವು ನಮ್ಮ ಸಮುದಾಯದವರು ಡಿಸಿಎಂ ಆಗಬೇಕೆಂದು ಆಗ್ರಹಿಸಿದರೆ ತಪ್ಪೇನು? ಎಂದು ಖಾರವಾಗಿ ಮಾತನಾಡಿದರು.
ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭಾ ಚುನಾವಣೆ ಬಳಿಕ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರಿಗೆ ಹಾಗೂ ಡಿಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ. ಈಗ ಸಿಎಂ ಬದಲಾವಣೆ ಮಾಡಬೇಕೋ ಬೇಡವೋ ಹೈಕಮಾಂಡ್ ಚರ್ಚೆ ಮಾಡಲಿದೆ. ಒಂದು ವೇಳೆ ಸಿಎಂ ಬದಲಾವಣೆ ಮಾಡಿದ್ರೆ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಎದುರಾಗಿದೆ. ಆದರೆ ಈ ಬಗ್ಗೆ ಹೈಕಮಾಂಡ್ ಪ್ರಸ್ತಾಪ ಮಾಡಿಲ್ಲ.
ಅದಾಗ್ಯೂ ಒಂದೆಡೆ ಲಿಂಗಾಯತರೇ ಸಿಎಂ ಆಗಬೇಕು ಎಂಬ ಕೂಗು ಎದ್ದಿದೆ. ಇತ್ತ ದಲಿತರಿಗೆ ಪ್ರಾತಿನಿಧ್ಯ ನೀಡಬೇಕು. ಮತ್ತೊಂದೆಡೆ ದಲಿತರಿಗೆ ಸಿಎಂ ಅವಕಾಶ ನೀಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ. ಹೀಗಾಗಿ ಮುಂದಿನ ಸಿಎಂ ಬಗ್ಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications