ಪ್ರಚೋದನಕಾರಿ ಭಾಷಣ ಮಾಡುವವರು ಅವಿವೇಕಿಗಳು : ಪ್ರಿಯಾಂಕ್ ಖರ್ಗೆ

ಯಾದಗಿರಿ, ಡಿಸೆಂಬರ್ 15: ಯಾದಗಿರಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾವೇಶದಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ವಿವಾದಾತ್ಮ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮಕ್ಕೆ ಅನುಮತಿ ಕೊಡದೇ ಇದ್ದರೇ ವಿವಾದ ಮಾಡ್ತಾರೆ, ಅನುಮತಿ ಕೊಟ್ಟರೆ ಅವಿವೇಕಿಗಳು ಬಂದು ಪ್ರಚೋದನಕಾರಿ ಭಾಷಣ ಮಾಡ್ತಾರೆ ಎಂದು ಕಟು ಶಬ್ದಗಳಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ಅವರನ್ನು ಟೀಕಿಸಿದ್ದಾರೆ.

Minister Priyank Kharge lambasted on Telagana MLA Rajasingh

'ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಈ ರೀತಿ ಮಾತನಾಡಬಾರದು ಎಂದ ಅವರು ಬಿಜೆಪಿ ನಾಯಕರು ಚುನಾವಣೆ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರತಾಪ್ ಸಿಂಹ ಹಿಗೇ ಮಾಡುತ್ತಾರೆ, ಇಂಥಹವರನ್ನು ಚುನಾವಣೆಯಲ್ಲಿ ಆರಿಸಿ ತಂದಿದ್ದು ದುರಂತ ಎಂದು ಅವರು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಶಾಸಕ ರಾಜಾಸಿಂಗ್, ಪ್ರಮೋದ್ ಮುತಾಲಿಕ್, ಶ್ರೀ‌ಸಿದ್ದಲಿಂಗ ಮಹಾಸ್ವಾಮೀಜಿ, ವಿಜಯ ಪಾಟೀಲ್ ವಿರುದ್ದ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+