ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳವ ಕೆಲಸ ಸಿದ್ದರಾಮಯ್ಯ ಮಾಡಿಲ್ಲ: ವರ್ತೂರು
ಯಾದಗಿರಿ, ಡಿಸೆಂಬರ್ 7: ಒಂದು ಕಾಲದಲ್ಲಿ ಗುರು ಶಿಷ್ಯರಂತೆ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೋಲಾರ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಮಾತಿನಲ್ಲಿ ಬದ್ಧ ವೈರಿಗಳಂತೆ ಕಾದಾಡುತ್ತಿದ್ದಾರೆ.
ಗುರುವಾರ ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವರ್ತೂರ ಪ್ರಕಾಶ್ ವಾಗ್ದಾಳಿ ನಡೆಸಿದರು. "ಕೋಲಾರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾನು ಶ್ರಮವಹಿಸಿದ್ದೇನೆ. ಆದರೆ, ಸಿದ್ದರಾಮಯ್ಯ ನನ್ನ ಏಳಿಗೆ ಸಹಿಸದೆ ಕಾಂಗ್ರೆಸ್ ಪಕ್ಷದಲ್ಲಿ ಸೇರಿಸಿಕೊಳ್ಳವ ಕೆಲಸ ಮಾಡಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ, ಮತದಾರರು ಇದಕ್ಕೆ ಪಾಠ ಕಲಿಸಲಿದ್ದಾರೆ. 'ನಮ್ಮ ಕಾಂಗ್ರೆಸ್' ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.
ಈಗಾಗಲೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ ಡಿಸೆಂಬರ್ 7ರಂದು ಕೂಡಲಸಂಗಮದಲ್ಲಿ 'ನಮ್ಮ ಕಾಂಗ್ರೆಸ್' ಪಕ್ಷ ಉದ್ಘಾಟನೆಯಾಗಲಿದೆ ಎಂದರು.












Click it and Unblock the Notifications