ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಾದಗಿರಿ: ಕಲುಷಿತ ನೀರು ಸೇವಿಸಿ 40 ಕ್ಕು ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

|
Google Oneindia Kannada News

ಯಾದಗಿರಿ, ಅಕ್ಟೋಬರ್ 26: ಶಹಾಪುರ ತಾಲೂಕಿನ ಹೋತಪೇಟ್ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆಯಿಂದ ವೃದ್ಧೆಯೊಬ್ಬರು ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಮಂದಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

80 ವರ್ಷದ ಈರಮ್ಮ ಹಿರೇಮಠ ಎಂಬುವವರು ಮೃತಪಟ್ಟಿದ್ದು, ಗ್ರಾಮದಲ್ಲಿ ರೋಗದ ಭೀತಿ ಆವರಿಸಿದೆ. ಊರ ಹೊರಗಿನ ಬಾವಿಯೊಂದರಿಂದ ನೀರನ್ನು ಟ್ಯಾಂಕ್‌ನಲ್ಲಿ ಸಂಗ್ರಹಿಸಿದ ಬಳಿಕ ಮನೆಗಳಿಗೆ ಪೈಪ್ ಲೈನ್​ ಮೂಲಕ ಮನೆಗಳಿಗೆ ಪೂರೈಸಲಾಗುತ್ತಿತ್ತು. ಆದರೆ ಆ ಪೈಪ್‌ಗಳು ಅಲ್ಲಲ್ಲಿ ಒಡೆದು ಹೋಗಿದ್ದು ಚರಂಡಿ ನೀರು ಅದರೊಳಗೆ ಸೇರುತ್ತಿದೆ. ಅದೆ ನೀರನ್ನು ಗ್ರಾಮಸ್ಥರಿಗೆ ಕುಡಿಯಲಯ ಪೂರೈಸಲಾಗುತ್ತಿದೆ. ಅಲ್ಲದೆ ಬಾವಿಯ ಸುತ್ತ ಭತ್ತದ ಗದ್ದೆಗಳಿವೆ. ಗದ್ದೆಯ ಕ್ರಿಮಿನಾಶಕ ಔಷಧಿಯ ನೀರಿನಲ್ಲಿ ಕೂಡ ಸೇರಿರಬಹುದು , ಇದರಿಂದ ವಾಂತಿಭೇದಿ ಕಾಣಿಸಿಕೊಂಡಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ದೀಪಾವಳಿ ಹಬ್ಬದಂದೇ ದುರಂತ: ಹಳ್ಳಕ್ಕೆ ಉರುಳಿದ ಸಾರಿಗೆ ಬಸ್‌ದೀಪಾವಳಿ ಹಬ್ಬದಂದೇ ದುರಂತ: ಹಳ್ಳಕ್ಕೆ ಉರುಳಿದ ಸಾರಿಗೆ ಬಸ್‌

ಈ ಗ್ರಾಮದಲ್ಲಿ ಹಲವು ವರ್ಷಗಳಿಂದ ಕಲುಷಿತ ನೀರು ಸೇವಿಸಿ ಜನರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಹ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಅಲ್ಲದೆ ಕುಡಿಯುವ ನೀರನ್ನು ಪೂರೈಕೆ ಮಾಡುವ ಬಾವಿಯ ಮೇಲೂ ಏನನ್ನು ಮುಚ್ಚಿಲ್ಲ. ಸದ್ಯ ಗ್ರಾಮದಲ್ಲಿ ವೃದ್ಧೆ ಕಲುಷಿತ ನೀರು ಕುಡಿದು ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ಚಿಕಿತ್ಸೆ ನೀಡಲು ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ.

More than 40 people were admitted to hospital after Consumption of contaminated water

ಈ ವಾರ್ಡ್ ನಲ್ಲಿ 200ಕ್ಕೂ ಹೆಚ್ಚು ಮನೆಗಳಿದ್ದು, ವಾಂತಿಭೇದಿಗೆ ಉಪ ಆರೋಗ್ಯ ಕೇಂದ್ರದಲ್ಲಿ ಸಕಲ ವ್ಯವಸ್ಥೆ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. 6 ಜನ ಸಮುದಾಯ ಆರೋಗ್ಯ ಅಧಿಕಾರಿಗಳನ್ನು, 4 ಜನ ಕಿವಿ ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ಗ್ರಾಮಕ್ಕೆ ನಿಯೋಜಿಸಲಾಗಿದ್ದು, ಅವರೆಲ್ಲ ಗ್ರಾಮದಲ್ಲೇ ಉಳಿದುಕೊಂಡಿದ್ದಾರೆ. 108 ಆಂಬುಲೆನ್ಸ್ ಸಹ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ರಮೇಶ್​ ಗುತ್ತೆದಾರ ಮಾಹಿರಿ ನೀಡಿದ್ದಾರೆ.

ಬೆಳಗಾವಿಯಲ್ಲೂ 50 ಕ್ಕೂ ಹಚ್ಚು ಮಂದಿ ಆಸ್ಪತ್ರೆಗೆ ದಾಖಲು
ಜಿಲ್ಲೆಯ ರಾಮದುರ್ಗಾ ತಾಲೂಕಿನ ಮುದೇನೂರು ಗ್ರಾಮದಲ್ಲೂ ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ 50ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.

ದೇಶದೆಲ್ಲೆಡೆ ದೀಪಾವಳಿ ಆಚರಿಸುತ್ತಿದ್ದರೆ, ಈ ಊರಿನ ಗ್ರಾಮಸ್ಥರು ಆಸ್ಪತ್ರೆ ಸೇರುತ್ತಿದ್ದಾರೆ. ಕುಡಿಯುವ ನೀರು ಪೂರೈಸುವ ಪೈಪ್‌ಲೈನ್ ಒಡೆದಿದ್ದು, ಅದು ಚರಂಡಿ ನೀರಿನೊಂದಿಗೆ ಸೇರಿ ಪೂರೈಕೆಯಾಗಿದ್ದರಿಂದ ಜನರ ಆರೋಗ್ಯದಲ್ಲಿ ಏರು ಪೇರಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
Dipavali turned tragic for Hothpet village in Shahapura taluk of Yadgir, a women died and over 40 are being treated at a hospital after allegedly drinking contaminated water.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X