ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು-ಯಾದಗಿರಿ ಮಹಿಳೆಯರ ಜತೆ ಪ್ರಧಾನಿ ಮೋದಿ ಸಂವಾದ!

By Nayana
|
Google Oneindia Kannada News

ಯಾದಗಿರಿ, ಸೆಪ್ಟೆಂಬರ್ 8: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಪೋಷಣ್ ಮಾ ಅಭಿಯಾನದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲಾನುಭವಿಗಳು ಮತ್ತು ಅಧಿಕಾರಿಗಳ ಜತೆ ಸೆಪ್ಟೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ.

ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ರಾರಾಜಿಸುತ್ತಿರುವ ಕನ್ನಡ ಶಿಕ್ಷಕರಿವರು!ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ರಾರಾಜಿಸುತ್ತಿರುವ ಕನ್ನಡ ಶಿಕ್ಷಕರಿವರು!

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಅವರು ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿ ಪ್ರದೀಪ್‌ಕುಮಾರ್ ಸಿನ್ಹಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಪೂರ್ವಸಿದ್ಧತಾ ಸಭೆಯಲ್ಲಿ ರಾಜ್ಯದಲ್ಲಿ ಯೋಜನೆ ಜಾರಿ ಕುರಿತಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಭವಿಷ್ಯದ ಸಂಚಾರ ವ್ಯವಸ್ಥೆಗೆ ಏಳು 'C' ಸೂತ್ರ ಮುಂದಿಟ್ಟ ಮೋದಿಭವಿಷ್ಯದ ಸಂಚಾರ ವ್ಯವಸ್ಥೆಗೆ ಏಳು 'C' ಸೂತ್ರ ಮುಂದಿಟ್ಟ ಮೋದಿ

ರಾಜ್ಯದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಈ ಯೋಜನೆಗೆ ಆಯ್ಕೆಯಾಗಿದ್ದು, ಪ್ರಧಾನಿಗಳ ಜತೆ ಫಲಾನುಭವಿಗಳು ನೇರ ಸಂವಾದ ನಡೆಸಲಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಮಾತೃಪೂರ್ಣ ಯೋಜನೆ ಅನುಷ್ಠಾನಗೊಳಿಸಿದ್ದು, ಅದೇ ಮಾದರಿಯಲ್ಲಿ ರಾಷ್ಟ್ರೀಯ ಪೋಷಣ್ ಮಾ ಅಭಿಯಾನ ಅನುಷ್ಠಾನಗೊಳ್ಳಲಿದೆ ಎಂದೂ ವಿವರಿಸಿದರು.

PM Modi will interact with women from Raichur and Yadgir

ಪ್ರಧಾನಮಂತ್ರಿ ಜನ್ ಆರೋಗ್ಯ ಅಭಿಯಾನದಡಿ ಆಯುಷ್ ಮಾನ್ ಭಾರತ್ ಯೋಜನೆಗೆ ಸೆಪ್ಟೆಂಬರ್ 23ರಂದು ಪ್ರಧಾನಿ ಮೋದಿ ಜಾರ್ಖಂಡ್ ನಲ್ಲಿ ಚಾಲನೆ ನೀಡಲಿದ್ದು, ಈ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಸಿದ್ಧತೆ ಮಾಡಿಕೊಂಡಿದೆ.

ಮೋದಿ ಜತೆ ವಿದೇಶಕ್ಕೆ ಪ್ರಯಾಣಿಸಿದವರ ಹೆಸರು ಬಹಿರಂಗಕ್ಕೆ ಸೂಚನೆಮೋದಿ ಜತೆ ವಿದೇಶಕ್ಕೆ ಪ್ರಯಾಣಿಸಿದವರ ಹೆಸರು ಬಹಿರಂಗಕ್ಕೆ ಸೂಚನೆ

ಅಲ್ಲದೇ ಸೆ.17ರಂದು ಸೇವಾ ದಿವಸ್, ಸೆ.22ರಂದು ರೈಲ್ವೆ ಸ್ವಚ್ಛತಾ ದಿವಸ್, ಸೆ.25ರಂದು ಅಂತ್ಯೋದಯ ದಿವಸ್, ಸೆ.29ರಿಂದ ಅಕ್ಟೋಬರ್ 2ರವರೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿರುವ ಮಹಾತ್ಮ ಗಾಂಧಿ ಅಂತಾರಾಷ್ಟ್ರೀಯ ನೈರ್ಮಲ್ಯ ಸಮ್ಮೇಳನ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

English summary
Prime minister Narendra Modi will interact with women beneficiaries of Rashtriya Poshan Maah Abhiyan through video conference in September 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X