Shahapur Constituency: ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ, ಶರಣಬಸಪ್ಪಗೌಡ ದರ್ಶನಾಪುರ?
ಇಬ್ಬರ ನಡುವೆ ಮೂರನೇಯವನಿಗೆ ಲಾಭ ಎನ್ನುವ ವಾಡಿಕೆಯಂತೆ ಯಾದಗಿರಿ ಜಿಲ್ಲೆಯ ಶಹಾಪುರ ವಿಧಾನಸಭಾ ಕ್ಷೇತ್ರದ ಪರಿಸ್ಥಿತಿಯು ಇದೇ ರೀತಿ ಉದ್ಭವವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವಾಗಲ್ಲೆ ಶಹಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವ ವಾತಾವರಣ ಸೃಷ್ಟಿಯಾಗಿದೆ.
ಶಹಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುರುಪಾಟೀಲ್ ಶೀರವಾಳ ಬಿಜೆಪಿಗೆ ಗುಡ್ ಬೈ ಹೇಳಿ ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇತ್ತ ಕಡೆ ಬಿಜೆಪಿ ಪಕ್ಷದಿಂದ ಅಮೀನರೆಡ್ಡಿಗೆ ಟಿಕೆಟ್ ನೀಡಿದ ಹಿನ್ನಲೆ ಮಾಜಿ ಶಾಸಕ ಗುರುಪಾಟೀಲ್ ಶೀರವಾಳ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ.

ಶಹಾಪುರ ವಿಧಾನಸಭಾ ಮತಕ್ಷೇತ್ರದ ಇನ್ನೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ. ಚಂದ್ರಶೇಖರ ಸುಬೇದಾರಗೆ ಬಿಜೆಪಿ ಪಕ್ಷ ಟಿಕೆಟ್ ನೀಡದ ಹಿನ್ನೆಲೆ ಭಿನ್ನಮತ ಸ್ಪೋಟಗೊಂಡಿದೆ. ಈಗಾಗಿ ಶಹಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ಇತ್ತ ಕಡೆ ಕಾಂಗ್ರೆಸ್ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ರಣರಂಗದಲ್ಲಿ ಅಖಾಡಕ್ಕಿಳಿಯಲ್ಲು ಸಜ್ಜಾಗಿದ್ದಾರೆ.
ಒಟ್ಟಿನಲ್ಲಿ ಶಹಾಪುರ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದ್ದು ಮತದಾರರ ಕುತೂಹಲಕ್ಕೆ ಕಾರಣವಾಗಿದೆ. ಶಹಾಪುರ ಬಿಜೆಪಿ ಪಕ್ಷದಲ್ಲಿ ಮೂರು ಆಕಾಂಕ್ಷಿಗಳಲ್ಲಿ ಅಮೀನರೆಡ್ಡಿಗೆ ಟಿಕೆಟ್ ದೊರೆತಿದ್ದು ಇದು ಇನ್ನುಳಿದ ನಾಯಕರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಬಿಜೆಪಿ ಪಕ್ಷದಲ್ಲಿ ಮತ ಒಡೆಯುವ ಸಾಧ್ಯತೆ ಹೆಚ್ಚಿದೆ.
ಶರಣಬಸಪ್ಪಗೌಡ ದರ್ಶನಾಪುರ
ಆದ್ರೆ ಕ್ಷೇತ್ರದ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುಪಾಟೀಲ್ ಶೀರವಾಳ,
ಜೆಡ ಎಸ್ ಪಕ್ಷದ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿ ವಿರುದ್ಧ ಸ್ಪರ್ಧಿಸಿ 78 ,642 ಮತಗಳನ್ನ ಪಡೆಯುವ ಮಖಾಂತರ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು.

ಶಹಾಪುರ ಮತಕ್ಷೇತ್ರದಲ್ಲಿ ತಮ್ಮದೆಯಾದ ಹಿಡಿತ
ಇವರು 1994, 2004, 2008 ಶಹಾಪುರ ಮತಕ್ಷೇತ್ರದಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆ ಎಚ್ ಪಟೇಲರ ಕಾಲದಲ್ಲಿ ಇಂಧನ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಶಹಾಪುರ ಮತಕ್ಷೇತ್ರದಲ್ಲಿ ತಮ್ಮದೆಯಾದ ಹಿಡಿತವನ್ನು ಸಾಧಿಸಿದ್ದಾರೆ.
ಮತ್ತೊಮ್ಮೆ ಶಾಸಕರಾಗಿ ಜಯಬೇರಿ
ಇವರು ಐದು ವರ್ಷದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದು ಮತದಾರರು ಬಿಜೆಪಿ , ಜಿಡಿಎಸ್ ತೊರೆದು ಕ್ಷೇತ್ರದ ಅಭಿವೃದ್ಧಿಗೆ ಜೈ ಎನ್ನುವ ಸಾಧ್ಯತೆಯಿದೆ. ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮತ್ತೊಮ್ಮೆ ಶಾಸಕರಾಗಿ ಜಯಬೇರಿ ಬಾರಿಸುವ ಲಕ್ಷಣಗಳು ಕಾಣುತ್ತಿದ್ದು ಕಾದು ನೋಡಬೇಕಾಗಿದೆ.












Click it and Unblock the Notifications