ಸುರಪುರ ಉಪ ಚುನಾವಣೆ: ಮೇ 7ರಂದು ಮತದಾನ, ಚುನಾವಣಾ ಚಿತ್ರಣ
ಯಾದಗಿರಿ, ಮೇ 03: ಕರ್ನಾಟಕದಲ್ಲಿ ಮೇ 7ರಂದು 14 ಲೋಕಸಭಾ ಕ್ಷೇತ್ರದ ಮತದಾನದ ಜೊತೆ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ನಡೆಯುತ್ತಿದೆ. 2023ರ ವಿಧಾನಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ಉಪ ಚುನಾವಣೆ ಇದಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎದುರಾಳಿಗಳು.
2023ರಲ್ಲಿ ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಫೆಬ್ರವರಿ 25ರಂದು ಅವರು ನಿಧನ ಹೊಂದಿದ್ದು, ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಮತ್ತು ಬಿಜೆಪಿಯಿಂದ ಮಾಜಿ ಶಾಸಕ, ಸಚಿವ ರಾಜಾ ನರಸಿಂಹ ನಾಯಕ (ರಾಜೂಗೌಡ) ಉಪ ಚುನಾವಣೆ ಅಭ್ಯರ್ಥಿಗಳು.

ರಾಜಾ ವೇಣುಗೋಪಾಲ ನಾಯಕ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಮೂರು ಬಾರಿಯ ಶಾಸಕ, ಮಾಜಿ ಸಚಿವ ರಾಜೂ ಗೌಡ ಬಿಜೆಪಿಯಿಂದ ಕಣದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕಾಂಗ್ರೆಸ್ ಶಾಸಕನ ನಿಧನದಿಂದಾಗಿಯೇ ಉಪ ಚುನಾವಣೆ ಎದುರಾಗಿದೆ. ಆದ್ದರಿಂದ ಕಾಂಗ್ರೆಸ್‌ಗೆ ಕ್ಷೇತ್ರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ.
ಚುನಾವಣಾ ಚಿತ್ರಣ ಹೇಗಿದೆ?; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪ್ತರಾಗಿದ್ದ ರಾಜಾ ವೆಂಕಟಪ್ಪ ನಾಯಕ ಕ್ಷೇತ್ರದಲ್ಲಿಯೂ ಪ್ರಭಾವ ಹೊಂದಿದ್ದರು. ನಾಲ್ಕು ಬಾರಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಉಪ ಚುನಾವಣೆಯಲ್ಲಿ ಅವರ ಹಿರಿಯ ಪುತ್ರ ರಾಜಾ ವೇಣುಗೋಪಾಲ ನಾಯಕ ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಅನುಕಂಪದ ಅಲೆಯಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ.
ತಂದೆಯು ಮಾಡಿರುವ ಕಾರ್ಯಗಳ ಆಧಾರದ ಮೇಲೆ ರಾಜಾ ವೇಣುಗೋಪಾಲ ನಾಯಕ ಮತವನ್ನು ಕೇಳುತ್ತಿದ್ದಾರೆ. ಅಲ್ಲದೇ ತಂದೆಯ ಹಾದಿಯಲ್ಲೇ ಸಾಗುತ್ತೇನೆ ಮತ್ತು ಕಾಂಗ್ರೆಸ್‌ನ 5 ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಬೆಂಬಲ ನೀಡಿ ಎಂದು ಪ್ರಚಾರವನ್ನು ನಡೆಸುತ್ತಿದ್ದಾರೆ.
ರಾಜೂ ಗೌಡ 2004ರಲ್ಲಿ ಕನ್ನಡ ನಾಡು ಪಕ್ಷದಿಂದ ಕ್ಷೇತ್ರದಲ್ಲಿ ಗೆದ್ದಿದ್ದರು. ಬಳಿಕ 2008, 2018ರಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದರು. ಶಾಸಕನಾಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತ ನೀಡಿ ಎಂದು ಬಿಜೆಪಿ ಮತವನ್ನು ಕೇಳುತ್ತಿದೆ.
2018ರ ಚುನಾವಣೆಯಲ್ಲಿ ಬಿಜೆಪಿಯ ರಾಜೂ ಗೌಡ ಸುರಪುರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 1,13,559 ಮತಗಳನ್ನು ಪಡೆದು ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಬಿಜೆಪಿಯ ರಾಜೂ ಗೌಡ (88,336 ಮತ) ಸೋಲಿಸಿದ್ದರು.
ಸುರಪುರ ಕ್ಷೇತ್ರ 2008ರ ತನಕ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಬಳಿಕ ಕ್ಷೇತ್ರ ಮರು ವಿಂಗಡನೆಗೊಂಡ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 16 ಬಾರಿ ಇದುವರೆಗೂ ಕ್ಷೇತ್ರ ಚುನಾವಣೆ ಕಂಡಿದೆ. 8 ಬಾರಿ ಕಾಂಗ್ರೆಸ್, ಬಿಜೆಪಿ 2 ಬಾರಿ, ಕೆಸಿಪಿ, ಕನ್ನಡ ನಾಡು ಪಕ್ಷ, ಸ್ವತಂತ್ರ ಅಭ್ಯರ್ಥಿಗಳು ಒಮ್ಮೆ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ.
ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ ಅವರಿಗೆ ಮೊದಲ ಚುನಾವಣೆ. ಆದರೆ ತಂದೆಯ ಜೊತೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರವೇ ಸೀಟು ಉಳಿಸಿಕೊಳ್ಳಬೇಕು ಎಂದು ಸುರುಪುರದ ಮೇಲೆ ಕಣ್ಣಿಟ್ಟಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಯಾವುದೇ ಪ್ರಭಾವ ಬೀರುವುದಿಲ್ಲ. ಅನುಕಂಪದ ಅಲೆ ಕೈ ಹಿಡಿಯಲಿದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications