• search
  • Live TV
ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರುನಾಡ ಮುಖ್ಯಮಂತ್ರಿಗಳ ಕಣ್ಣೀರು ಕಹಾನಿ ಹೇಳಿದ ನಳಿನ್ ಕುಮಾರ್ ಕಟೀಲ್

|

ಯಾದಗಿರಿ, ಫೆಬ್ರವರಿ.20: ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದಾಗ ಕಣ್ಣೀರು ಬಲು ಸಲೀಸಾಗಿ ಬರುತ್ತದೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಯಾದಗಿರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ನಳಿನ್ ಕುಮಾರ್ ಕಟೀಲ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಮೊದಲಿಗೆ ಹೆಚ್ ಡಿಕೆ ವಿರುದ್ಧ ಹರಿ ಹಾಯ್ದರು.

ಕೊರೊನಾ ವೈರಸ್ ಅಂಟಿಕೊಂಡಿತಾ ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ?

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿ ಇದ್ದಾಗ ಮನೆ ಮನೆಗೆ ತೆರಳಿ ಕಣ್ಣೀರು ಹಾಕುತ್ತಿದ್ದರು. ಕುಮಾರಸ್ವಾಮಿ ಒಬ್ಬ ಕಣ್ಣೀರು ಹಾಕುವ ಮುಖ್ಯಮಂತ್ರಿ ಎಂದು ನಳಿನ್ ಕುಮಾರ್ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ಕಣ್ಣೀರು ಬರಿಸುವ ಮುಖ್ಯಮಂತ್ರಿ:

ಕುಮಾರಸ್ವಾಮಿ ಕಣ್ಣೀರು ಹಾಕುವ ಮುಖ್ಯಮಂತ್ರಿಯಾದರೆ, ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣೀರು ಹಾಕಿಸುವ ಮುಖ್ಯಮಂತ್ರಿ ಆಗಿದ್ದರು. ಒಬ್ಬರು ಕಣ್ಣೀರು ಹಾಕಿಸುತ್ತಾರೆ, ಇನ್ನೊಬ್ಬರು ಕಣ್ಣೀರು ಹಾಕುತ್ತಾರೆ. ಆದರೆ, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅನರ್ಹ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ ಎಂಬ ಆರೋಪವನ್ನು ನಳಿನ್ ಕುಮಾರ್ ತಳ್ಳಿ ಹಾಕಿದ್ದಾರೆ. ಬಿಜೆಪಿ ಇದೀಗ ಆಪರೇಷನ್ ಕಮಲವನ್ನು ನಿಲ್ಲಿಸಿದೆ. ಆದರೆ, ಪಕ್ಷಕ್ಕೆ ಬರಲು ಇಚ್ಛೆ ಉಳ್ಳವರು ಯಾವಾಗ ಬೇಕಾದರೂ ಬಿಜೆಪಿಗೆ ಬರಬಹುದು ಎಂದು ಹೇಳಿದರು.

English summary
"Tears Is Political Stratagy For Ex CM H D Kumaraswamy". BJP State President Nalina Kumar Katil Attacked Against Ex-CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X