ನಾರಾಯಣಪುರ ಎಡದಂಡೆ ಕಾಲುವೆಯಿಂದ ನುಗ್ಗಿದ ನೀರು, ರೈತರ ಬೆಳೆ ಹಾಳು
ಯಾದಗಿರಿ, ಡಿಸೆಂಬರ್ 20 : ರೈತರಿಗೆ ಮಾಹಿತಿ ನೀಡದೆ ನಾರಾಯಣಪುರ ಎಡದಂಡೆ ಕಾಲುವೆಯಿಂದ ಅಧಿಕಾರಿಗಳು ನೀರನ್ನು ಬಿಟ್ಟಿದ್ದಾರೆ. ಇದರಿಂದ ಕಾಲುವೆ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿ ಅನಾಹುತನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿರುವ ನಾರಾಯಣ ಜಲಾಶಯಕ್ಕೆ ಕಾಲುವೆಯಿಂದ ನೀರು ಬಿಟ್ಟ ಪರಿಣಾಮ ಅಪಾರ ಪ್ರಮಾಣದ ಭತ್ತದ ಬೆಳೆ ನಾಶವಾಗಿದೆ, ಜತೆಗೆ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದೆ. ಶಹಾಪುರ

ತಾಲೂಕಿನ ಹಳ್ಳಿಸಗರ ಗ್ರಾಮದ 30 ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಜಮೀನುಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಕೆಬಿಜೆಎನ್ ಎಲ್ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications