ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಆಸ್ಪತ್ರೆಗೆ ಬೀಗ; ಆಟೋದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ

By ಯಾದಗಿರಿ ಪ್ರತಿನಿಧಿ
|
Google Oneindia Kannada News

ಯಾದಗಿರಿ, ಸೆಪ್ಟೆಂಬರ್ 22: ಸಕಾಲಕ್ಕೆ ವೈದ್ಯರು, ಸಿಬ್ಬಂದಿ ಇಲ್ಲ. ಜತೆಗೆ ಆಸ್ಪತ್ರೆಗೆ ಬೀಗ ಹಾಕಲಾಗಿತ್ತು. ಹೀಗಾಗಿ ಗರ್ಭಿಣಿಯೊಬ್ಬರು ಆಟೋದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಗ್ರಾಮೀಣ ಭಾಗದ ಜನರು ಹೇಗೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂಬುದಕ್ಕೆ ಇದು ಒಂದು ನಿದರ್ಶನ ಅಷ್ಟೇ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಲಶೆಟ್ಟಿಹಾಳ ಗ್ರಾಮದ ನಿಂಗಮ್ಮ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ತಕ್ಷಣ ಸಂಬಂಧಿಗಳು ಆಟೋದಲ್ಲೇ ಸಮೀಪದ ಶ್ರೀನಿವಾಸಪುರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಕಾರಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ: ವಿಡಿಯೋಕಾರಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ: ವಿಡಿಯೋ

ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲ, ಸಿಬ್ಬಂದಿಯೂ ಇಲ್ಲ. ಅಲ್ಲದೇ ಸರ್ಕಾರಿ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಇದರಿಂದ ಕಂಗಾಲಾದ ಪೋಷಕರು ಗರ್ಭಿಣಿಯನ್ನು ಮತ್ತೆ ಆಟೋದಲ್ಲೇ ರಾಜಕೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಪ್ರಯತ್ನ ಪಟ್ಟಿದ್ದಾರೆ.

Baby Birth

ಸಮಯಕ್ಕೆ ಸರಿಯಾಗಿ ವೈದ್ಯರು ಸಿಗದೆ, ಹೆರಿಗೆ ನೋವಿನಿಂದ ನರಳಾಡಿದ ಗರ್ಭಿಣಿ ಮಾರ್ಗ ಮಧ್ಯೆ ಆಟೋದಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ರಾಜನಕೋಳೂರು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು, ಸಿಬ್ಬಂದಿ ಯಾರೂ ಇಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿಕೊಂಡು ಹೋಗಿರುವುದಕ್ಕೆ ಗರ್ಭಿಣಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Primary health centre closed and medical staff on holiday. Pregnant woman gave birth in auto rickshaw in Yadagiri district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X