ಯಾದಗಿರಿ; ಮಹಿಳೆ ನಗ್ನಗೊಳಿಸಿ ಹಲ್ಲೆ, ಇಬ್ಬರಿಂದ ಅತ್ಯಾಚಾರ

ಯಾದಗಿರಿ, ಸೆಪ್ಟೆಂಬರ್ 16; ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ನಾಲ್ವರ ಗುಂಪಿನಲ್ಲಿ ಇಬ್ಬರು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾಳೆ.

ಸೆಪ್ಟೆಂಬರ್ 13ರ ಸೋಮವಾರ ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸುವ ವಿಡಿಯೋ ವೈರಲ್ ಆಗಿತ್ತು. ಘಟನೆ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಣ ಮಾಡಿದ್ದ ನಾಲ್ವರ ಗುಂಪು ಹೊಲಕ್ಕೆ ಎಳೆದುಕೊಂಡು ಹೋಗಿ ನಗ್ನಗೊಳಿಸಿ ಹಲ್ಲೆ ಮಾಡಿದ್ದರು. ಅದನ್ನು ವಿಡಿಯೋ ಸಹ ಮಾಡಿದ್ದರು. ಹೊಡೆಯುವ ನೆಪದಲ್ಲಿ ಆಕೆಯ ಅಂಗಾಂಗಳನ್ನು ಮುಟ್ಟಿ ಚಿತ್ರಹಿಂಸೆ ನೀಡಿರುವುದು ವಿಡಿಯೋದಲ್ಲಿ ದಾಖಲಾಗಿತ್ತು.

Yadgir news

ಈ ಕುರಿತ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಪ್ರತಿಕ್ರಿಯೆ ನೀಡಿದ್ದರು. "ಇದು 8 ರಿಂದ 9 ತಿಂಗಳ ಹಿಂದೆ ನಡೆದ ಪ್ರಕರಣವಾಗಿದ್ದು, ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಬಂಧ ತನಿಖೆ ನಡೆಯುತ್ತಿದೆ" ಎಂದು ಹೇಳಿದ್ದರು.

ಸಂತ್ರಸ್ತೆಯ ಭೇಟಿ; ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಆರ್. ಪ್ರಮೀಳಾ ನಾಯ್ಡು ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿದ್ದರು. "ಶಹಾಹುರ ಬಸ್ ನಿಲ್ದಾಣದಿಂದ ತನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ನಗ್ನಗೊಳಿಸಿ ನಾಲ್ವರು ಹಲ್ಲೆ ಮಾಡಿದರು. ಅವರಲ್ಲಿ ಇಬ್ಬರು ನನ್ನ ಮೇಲೆ ಅತ್ಯಾಚಾರ ನಡೆಸಿದರು ಎಂದು ಮಹಿಳೆ ಹೇಳಿದ್ದಾಳೆ" ಎಂದು ಆರ್. ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

"ಒಂದೂವರೆ ವರ್ಷದ ಹಿಂದೆ ನಡೆದ ಘಟನೆ ಇದಾಗಿದೆ. ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ 3 ಲಕ್ಷ ರೂ. ಸಾಲ ಕೊಡಿಸಿ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಲಾಗುತ್ತದೆ. ಜಿಲ್ಲಾಧಿಕಾರಿ ಮಹಿಳೆಗೆ ಸಹಾಯಧನ ನೀಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುತ್ತದೆ" ಎಂದು ಆರ್. ಪ್ರಮೀಳಾ ನಾಯ್ಡು ಹೇಳಿದ್ದಾರೆ.

ನಗ್ನಗೊಳಿಸಿ ಹಲ್ಲೆ ಮಾಡಿ ಅತ್ಯಾಚಾರ ಮಾಡಿರುವ ಪ್ರಕರಣದಲ್ಲಿ ಒಬ್ಬ ಆರೋಪಿ ಪಿಎಸ್‌ಐ ವಾಹನದ ಚಾಲಕನಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದಾನೆ. ಆತನನ್ನು ಮೊದಲು ಹಿಡಿದು ವಿಚಾರಣೆ ನಡೆಸಿದಾಗ ಉಳಿದ ಮೂವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ನೇತೃತ್ವದಲ್ಲಿ ಕೃತ್ಯ ನಡೆದ ಸ್ಥಳದಲ್ಲಿ ಸ್ಥಳ ಮಹಜರು ಮಾಡಲಾಗಿದೆ. ಪೊಲೀಸರು ಸಂತ್ರಸ್ತ ಮಹಿಳೆಯನ್ನು ಪತ್ತೆ ಹಚ್ಚಿ ಆಕೆಯ ವಿಚಾರಣೆ ಸಹ ನಡೆಸಿದ್ದಾರೆ.

ಮಹಿಳೆ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದಾಗ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಮಹಿಳೆ ಕೈ ಮುಗಿದು ಬಿಟ್ಟುಬಿಡಿ ಎಂದು ಬೇಡಿಕೊಳ್ಳುತ್ತಿರುವ ದೃಶ್ಯಗಳು, ಘಟನೆ ಬಗ್ಗೆ ದೂರು ನೀಡಿದರೆ ಸುಟ್ಟು ಹಾಕುತ್ತೇವೆ ಎಂದು ಬೆದರಿಕೆ ಹಾಕುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಆರೋಪಿಗಳನ್ನು ಬಂಧಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರನ್ನು ಒತ್ತಾಯಿಸಲಾಗಿತ್ತು. ಆಗ ಯಾದಗಿರಿ ಎಸ್ಪಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ವಿಚಾರಣೆಗೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದ್ದರು.

ಮಹಿಳೆ ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ್ದ ನಾಲ್ವರ ತಂಡ ವಾಹನದ ಹೆಡ್ ಲೈಟ್, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡುವ ವಿಡಿಯೋವನ್ನು ಚಿತ್ರೀಕರಿಸಿತ್ತು. ಈ ವಿಡಿಯೋ ಒಂದೂವರೆ ವರ್ಷಗಳ ಬಳಿಕ ವೈರಲ್‌ ಆಗಿತ್ತು. ಈಗಾಗಲೇ ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+