ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಾದಗಿರಿಯಲ್ಲಿ ವಿಷ ನೀರು ಸೇವಿಸಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು

|
Google Oneindia Kannada News

ಯಾದಗಿರಿ, ಜನವರಿ 10: ಯಾದಗಿರಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದು, ಆ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಯಾದಗಿರಿಯಲ್ಲಿ ಕುಡಿಯುವ ನೀರಿಗೇ ವಿಷ ಬೆರೆಸಿದ ಕಿಡಿಗೇಡಿಗಳು ಯಾದಗಿರಿಯಲ್ಲಿ ಕುಡಿಯುವ ನೀರಿಗೇ ವಿಷ ಬೆರೆಸಿದ ಕಿಡಿಗೇಡಿಗಳು

ವಿಷ ನೀರು ಕುಡಿದು ಅಸ್ವಸ್ಥರಾಗಿದ್ದ ಹೊನ್ನಮ್ಮ ಮಲ್ಲಪ್ಪ ಎನ್ನುವವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ

ಚಾಮರಾಜನಗರದ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ 16ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿತ್ತು, ಆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕವನ್ನು ಬೆಚ್ಚಿಬೀಳಿಸುವ ಇನ್ನೊಂದು ಘಟನೆ ನಡೆದಿದೆ.

women dies after consuming poison mixed drinking water in Yadgir

ಸುರುಪುರ ತಾಲೂಕಿನ ಮುದನೂರು ಗ್ರಾಮದಿಂದ ತೆಗ್ಗಿಹಳ್ಳಿ ಮತ್ತು ಶಾಖಾಪುರಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ತೆರೆದ ಬಾವಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದಾರೆ.‌ ವಿಷಮಿಶ್ರಿತ ನೀರು ಕುಡಿದ ಐವರು ಅಸ್ವಸ್ಥರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ನೀರಿನ ಟ್ಯಾಂಕ್‌ನಲ್ಲಿ ಕ್ರಿಮಿನಾಶಕ ಬೆರೆಸಿದ ಸುದ್ದಿ ಕಾಡ್ಗಿಚ್ಚಿನಂತೆ ಹರಡಿದ್ದು, ಶಖಾಪುರ, ತೆಗ್ಗಳ್ಳಿ ಗ್ರಾಮಗಳಿಗೆ ತಕ್ಷಣ ನೀರು ಪೂರೈಕೆ ಸ್ಥಗಿತಗೊಳಿಸಲಾಯಿತು. ನೀರು ಸೇವಿಸದಂತೆ ಗ್ರಾಮಗಳಲ್ಲಿ ಡಂಗುರ ಸಾರಲಾಯಿತು. ಮುದನೂರು ಗ್ರಾಮಕ್ಕೆ ಜಿ.ಪಂ ಸಿಇಒ ಕವಿತಾ ಮನ್ನಿಕೇರಿ ಸುರಪುರ ತಹಸೀಲ್ದಾರ್ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Like sulwadi poison prasadam case, In yadgiri some miscreants mixed posion in drinking water, women called Honnamma died after consuming water.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X