ಮತದಾರರ ಪಟ್ಟಿ ಅಂತಿಮ; ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ಯಾದಗಿರಿ, ಫೆಬ್ರವರಿ 13 : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಮುಕ್ತಾಯವಾಗಿದೆ. ಯಾದಗಿರಿ ಜಿಲ್ಲಾಡಳಿತ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ಮತದಾರರಪಟ್ಟಿಯನ್ನು ಅಂತಿಮಗೊಳಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ ಶೋರಾಪುರ, ಶಹಾಪೂರ, ಯಾದಗರಿ ಹಾಗೂ ಗುರುಮಿಠಕಲ್ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾವಚಿತ್ರವಿರುವ ಅಂತಿಮ ಅರ್ಹತಾ ಮತದಾರರ ಪಟ್ಟಿಯನ್ನು ಪ್ರಕಟಗೊಳಿಸಿದೆ ಎಂದು ಜಿಲ್ಲಾಧಿ ಎಂ. ಕೂರ್ಮಾರಾವ್ ಹೇಳಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ 1/1/2020ಕ್ಕೆ ಅನ್ವಯವಾಗುವಂತೆ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ನಂತರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

Yadgir District Administration Finalized Voters List

ಮತದಾರರ ಪಟ್ಟಿ ಪರಿಷ್ಕರಣೆ ನಿರಂತರವಾಗಿರಲಿದೆ. ಚುನಾವಣೆ ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶ ಇರುತ್ತದೆ. ತಮ್ಮ ಹೆಸರು ಬಿಟ್ಟು ಹೋಗಿದ್ದರೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ.

ಯಾದಗಿರಿಯ ಕರಡು ಮತದಾರರ ಪಟ್ಟಿಯಲ್ಲಿ 9,85,271 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 9,93,745 ಮತದಾರರು ಇದ್ದಾರೆ. ಕರಡು ಮತದಾರರ ಪಟ್ಟಿಯ ನಂತರ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ.

ಅಂತಿಮ ಮತದಾರರ ಪಟ್ಟಿಯನ್ನು http://ceokarnataka.kar.nic.in ಹಾಗೂ ಜಿಲ್ಲೆಯ yadgir.nic.in ಅಂತರ್ಜಾಲದಲ್ಲಿಯೂ ಸಹ ಪರಿಶೀಲಿಸಿಕೊಳ್ಳಬಹುದು. ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+