ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈಕಾಲು ಕಳೆದುಕೊಂಡ ಇಂಜಿನಿಯರ್ ಗೆ 5 ಲಕ್ಷ ರೂ.ಪರಿಹಾರ ನೀಡಿದ HDK

|
Google Oneindia Kannada News

ಯಾದಗಿರಿ, ಜೂನ್ 22: ಕಳೆದ ಒಂದೂವರೆ ವರ್ಷದ ಹಿಂದೆ ಅಪಘಾತವೊಂದರಲ್ಲಿ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 5 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಕತೆ ಹೇಳುವ ಚಿತ್ರಗಳು

ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಭೀಮರೆಡ್ಡಿ ಅವರ ತಂದೆಗೆ ಕುಮಾರಸ್ವಾಮಿ ಅವರು ಗುರುಮಠಕಲ್ ತಾಲೂಕಿನ ಚಂಡ್ರಕಿಯಲ್ಲಿ ಪರಿಹಾರದ ಚೆಕ್ ಹಸ್ತಾಂತರಿಸಿದರು.

ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಲ್ಲೂ ಮೈತ್ರಿ ಪಕ್ಷಗಳ ಜಗಳಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಲ್ಲೂ ಮೈತ್ರಿ ಪಕ್ಷಗಳ ಜಗಳ

Yadgir: HD Kumaraswamy gives RS 5 lakh cheque to an accident victim

ಜೂನ್ 21 ರಂದು ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು. ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಬೆಳಿಗ್ಗೆ ಬಂದು ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. ಕೊಟ್ಟ ಭರವಸೆಯಂತೆ ಇಂದು ಜೂನ್ 22 ರಂದು ಬೆಳಿಗ್ಗೆ ಚೆಕ್ ಹಸ್ತಾಂತರಿಸಿದರು.

ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಮತ್ತಿತರರು ಇದ್ದರು.(ಕೃಪೆ: ಕರ್ನಾಟಕ ವಾರ್ತೆ)

English summary
Chief minister HD Kumaraswamy in Yadgir gives Rs 5 lakh cheque to an engineer degree holder, who lost his legs and hands in an accident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X