• search
  • Live TV
ಯಾದಗಿರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾದಗಿರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು

|
Google Oneindia Kannada News

ಯಾದಗಿರಿ, ಡಿಸೆಂಬರ್ 12 : ಯಾದಗಿರಿ ಜಿಲ್ಲೆಯ ಬಹುದಿನಗಳ ಕನಸು ನನಸಾಗಿದೆ. ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಅಧಿಕೃತ ಘೋಷಣೆ ಮಾಡಿದೆ.

ಗುರುವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧಿಕೃತ ಆದೇಶ ಹೊರಡಿಸಿದರು. ಯಾದಗಿರಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಅಭಿವೃದ್ಧಿಪಡಿಸಿ ಅಲ್ಲಿಯೇ ವೈದ್ಯಕೀಯ ಕಾಲೇಜನ್ನು ನಿರ್ಮಾಣ ಮಾಡಲಾಗುತ್ತದೆ.

ಮೂರು ವೈದ್ಯಕೀಯ ಕಾಲೇಜು ಆರಂಭಕ್ಕೆ ಒಪ್ಪಿಗೆ ಸಿಕ್ಕಿತುಮೂರು ವೈದ್ಯಕೀಯ ಕಾಲೇಜು ಆರಂಭಕ್ಕೆ ಒಪ್ಪಿಗೆ ಸಿಕ್ಕಿತು

ರಾಯಚೂರು ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ್‌ಗೆ ಕೇಂದ್ರ ಸಚಿವರು ಬರೆದಿರುವ ಪತ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದಾಗಿ ಹೇಳಿದ್ದಾರೆ. ಆಸ್ಪತ್ರೆ ಜಿಲ್ಲೆಯ ಜನರ ವೈದ್ಯಕೀಯ ಅಗತ್ಯಗಳನ್ನು ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಮೂರು ಮೆಡಿಕಲ್ ಕಾಲೇಜು ಕೊಟ್ಟ ಕೇಂದ್ರ ಸರ್ಕಾರಕರ್ನಾಟಕಕ್ಕೆ ಮೂರು ಮೆಡಿಕಲ್ ಕಾಲೇಜು ಕೊಟ್ಟ ಕೇಂದ್ರ ಸರ್ಕಾರ

ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭ ವಿಚಾರ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವೈದ್ಯಕೀಯ ಕಾಲೇಜು ಮಂಜೂರಾತಿಗೆ ತಡೆ ನೀಡಿದ್ದರು.

ಮೆಡಿಕಲ್ ಕಾಲೇಜು ವಿಚಾರ: ಡಿಕೆಶಿಗೆ ತಿರುಗೇಟು ಕೊಟ್ಟ ಸುಧಾಕರ್ಮೆಡಿಕಲ್ ಕಾಲೇಜು ವಿಚಾರ: ಡಿಕೆಶಿಗೆ ತಿರುಗೇಟು ಕೊಟ್ಟ ಸುಧಾಕರ್

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಯಾದಗಿರಿ ಬಂದ್ ಸಹ ಮಾಡಲಾಗಿತ್ತು. ಈ ವೇಳೆ ಬಿ. ಎಸ್. ಯಡಿಯೂರಪ್ಪ ನಾನು ಮುಖ್ಯಮಂತ್ರಿಯಾದರೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು.

ಯಡಿಯೂರಪ್ಪ ಜಿಲ್ಲೆಯ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಯೂ ಚಿಕ್ಕಬಳ್ಳಾಪುರ ಮತ್ತು ಯಾದಗಿರಿ ವೈದ್ಯಕೀಯ ಕಾಲೇಜಿನ ಬಗ್ಗೆ ಚರ್ಚೆ ನಡೆದಿದೆ.

English summary
Union government approved to set up medical college in Yadgiri district of Karnataka. Health minister Harshvardhan announced it officially.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X