Get Updates
Get notified of breaking news, exclusive insights, and must-see stories!

Bharat Bandh-Holidays: ಭಾರತ್‌ ಬಂದ್‌; ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇದ್ಯಾ?

ಇಂದು, ಫೆಬ್ರವರಿ 12, 2026 ರಂದು ಭಾರತದಾದ್ಯಂತ ಭಾರತ್‌ ಬಂದ್‌ಗೆ (Bharat Bandh) ಕರೆ ಕೊಡಲಾಗಿದೆ. ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಮತ್ತು ರೈತ ಸಂಘಟನೆಗಳು (Farmers) ಕರೆ ನೀಡಿದ್ದು, ಈ ಹಿನ್ನೆಲೆ ದೇಶದ ಹಲವು ಭಾಗಗಳಲ್ಲಿ ಜನರ ಸಂಚಾರಕ್ಕೆ, ವಹಿವಾಟುಗಳಿಗೆ ಬಂದ್‌ ಬಿಸಿ ತಟ್ಟುವ ಸಾಧ್ಯತೆ ಇದೆ.

Bharat Bandh-School Holidays

ಕರ್ನಾಟಕದಲ್ಲಿ ಶಾಲೆಗಳಿಗೆ ರಜೆ ಇದ್ಯಾ?
ಹೌದು, ದೇಶವ್ಯಾಪಿ ಬಂದ್‌ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇದ್ಯಾ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೇ ಮುಷ್ಕರ ಹಿನ್ನೆಲೆ, ಪೋಷಕರು, ಮಕ್ಕಳ ಎಚ್ಚರಿಕೆ ವಹಿಸಿದ್ದಾರೆ. ಶಾಲಾ-ಕಾಲೇಜುಗಳಿಗೆ ರಜೆ ಕುರಿತು ಯಾವುದೇ ಅಧಿಕೃತ ಘೋಷಣೆ ಇಲ್ಲವಾದರೂ, ವಿದ್ಯಾರ್ಥಿ ಹಾಗೂ ಶಿಕ್ಷಕ ಸಂಘಟನೆಗಳು ಮುಷ್ಕರದಲ್ಲಿ ಭಾಗವಹಿಸುವ ಕೆಲವು ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳು ಮುಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿಯಂತಹ ನಗರಗಳಲ್ಲಿ ಸದ್ಯಕ್ಕೆ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಪೋಷಕರು ಸ್ಥಳೀಯ ಶಾಲಾ ಪ್ರಕಟಣೆಗಳನ್ನು ಗಮನಿಸಿ, ಪರಿಸ್ಥಿತಿ ನೋಡಿಕೊಂಡು ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಿದರೆ ಒಳ್ಳೆಯದು..

ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ
ದೇಶವ್ಯಾಪಿ ಬಂದ್ ಸಾರ್ವಜನಿಕ ಸಾರಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರಸ್ತೆ ತಡೆಗಳಿಂದ ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಸ್ಥಳೀಯ ರೈಲು ಸಂಚಾರಕ್ಕೆ ಅಡ್ಡಿಯಾಗಬಹುದು. ಅಲ್ಲದೇ ಅಂಗಡಿಗಳು ಮತ್ತು ರೆಸ್ಟೋರೆಂಟ್‌ಗಳು ಸಹ ಮುಚ್ಚಿರಬಹುದು. ವಿಮಾನ ನಿಲ್ದಾಣಗಳು ಸಾಮಾನ್ಯ ಕಾರ್ಯಾಚರಣೆಯಲ್ಲಿದ್ದರೂ, ಸಂಚಾರ ದಟ್ಟಣೆ ಅಥವಾ ಸಾರಿಗೆ ವ್ಯವಸ್ಥೆ ಇಲ್ಲದಿದ್ರೆ, ಪ್ರಯಾಣಿಕರ ಸಂಖ್ಯೆಯಲ್ಲೂ ಕಮ್ಮಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ..

ಬ್ಯಾಂಕಿಂಗ್‌ ಸೇವೆಗಳಲ್ಲಿ ಅಡ್ಡಿ
ಸಾರ್ವಜನಿಕ ಬ್ಯಾಂಕಿಂಗ್ ಸೇವೆಗಳಲ್ಲಿ ಬಹುತೇಕ ಅಡ್ಡಿಯಾಗುವ ಸಾಧ್ಯತೆ ಇದೆ. ಏಕೆಂದರೆ AIBEA, AIBOA, BEFI ಮುಂತಾದ ಸಂಘಟನೆಗಳು ಮುಷ್ಕರಕ್ಕೆ ಸೇರಿವೆ. ಎಸ್‌ಬಿಐ, ಪಿಎನ್‌ಬಿ ಮತ್ತು ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಪ್ರಮುಖ ಬ್ಯಾಂಕುಗಳು ಸೇವಾ ವಿಳಂಬವಾಗುವ ಬಗ್ಗೆ ಮೊದಲೇ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ.

INTUC, AITUC, HMS, CITU, AIUTUC, TUCC, SEWA, AICCTU, LPF ಮತ್ತು UTUC ಸೇರಿದಂತೆ 10ಕ್ಕೂ ಹೆಚ್ಚು ವ್ಯಾಪಾರ ಒಕ್ಕೂಟಗಳು ಈ ಬಂದ್‌ಗೆ ಕರೆ ನೀಡಿದೆ. 'ಸಮ್ಯುಕ್ತ ಕಿಸಾನ್ ಮೋರ್ಚಾ' (SKM) ಸಹ ಈ ಒಕ್ಕೂಟಕ್ಕೆ ಬೆಂಬಲ ನೀಡಿದೆ.

ಬಂದ್‌ಗೆ ಪ್ರಮುಖ ಬೇಡಿಕೆಗಳೆಂದರೆ:
ನವೆಂಬರ್ 2025ರಲ್ಲಿ ಅಧಿಸೂಚಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಮತ್ತು ನಿಯಮಗಳನ್ನು ರದ್ದುಮಾಡಬೇಕೆಂಬುದೇ ಕಾರ್ಮಿಕ ಸಂಘಟನೆಗಳ ಮುಖ್ಯ ಬೇಡಿಕೆ.

ಇದಲ್ಲದೆ, MGNREGA ಯೋಜನೆಯ ಪುನಃಸ್ಥಾಪನೆ, 2025ರ 'ವಿಕ್ಸಿತ್ ಭಾರತ್ - ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ'ಗೆ ವಿರೋಧ, ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟನೆ ರೈತರು ಪ್ರತಿಭಟನೆಗೆ ಇಳಿಯಲಿದ್ದಾರೆ. ಒಡಿಶಾ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಸಂಪೂರ್ಣ ಬಂದ್‌ ಆಗಲಿದೆ ಎಂದು ನಿರೀಕ್ಷಿಸಲಾಗಿದೆ, ಆದರೆ ಕರ್ನಾಟಕದಲ್ಲಿ ಸದ್ಯಕ್ಕೆ ಯಾವುದೇ ಮುಷ್ಕರದ ಬಿಸಿ ತಟ್ಟುವ ಬಗ್ಗೆ ಸೂಚನೆಗಳಿಲ್ಲ. ಆದರೂ, ಸಮಸ್ಯೆಗಳಾಗುವ ಸಾಧ್ಯತೆ ಇದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಈ ದಿನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Credit: Goodreturns

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+