ಪತಿ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡ ವಿಜಯಲಕ್ಷ್ಮಿ
ಕನ್ನಡ ಚಿತ್ರನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯ ದರ್ಶನ್ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಕೈಲಾದ ಸಹಾಯ ಮಾಡುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ. ಪತ್ನಿ ವಿಜಯಲಕ್ಷ್ಮಿ ವಿಶೇಷವಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ. "ಪ್ರತಿ ದಿನವನ್ನೂ ಸಂಭ್ರಮಿಸೋ ವ್ಯಕ್ತಿಗೆ ಜನ್ಮದಿನದ ಶುಭಾಶಯ" ಎಂದು ಬರೆದು ಪತಿ ಹಾಗೂ ಮಗನ ಜೊತೆಗಿನ ಫೋಟೊ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿಶೇಷವಾದ ವಿಡಿಯೋ ಹಾಕಿದ್ದಾರೆ.

ಪತಿ ದರ್ಶನ್ ಹಾಗೂ ಮಗ ವಿನೀಶ್ ನಡುವಿನ ಸುಂದರ ಕ್ಷಣಗಳ ಝಲಕ್ ಅನ್ನು ನೋಡಬಹುದು. ಕೊನೆಗೆ ತಂದೆಗೆ ವಿನೀಶ್ ಹುಟ್ಟುಹಬ್ಬದ ಶುಭಾಶಯ ಕೋರಿರುವ ಆಡಿಯೋ ಕೇಳಬಹುದು. 'ಡೆವಿಲ್' ಚಿತ್ರದ ಚಿತ್ರೀಕರಣಕ್ಕಾಗಿ ಪತ್ನಿ ಹಾಗೂ ಮಗನ ಜೊತೆ ದರ್ಶನ್ ಬ್ಯಾಂಕಾಕ್‌ಗೆ ಹೋಗಿದ್ದರು. ಆ ಜರ್ನಿ ಝಲಕ್ ಅನ್ನು ವೀಡಿಯೋದಲ್ಲಿ ಗಮನಿಸಬಹುದು. ಜೊತೆಗೆ ತಂದೆ ಜೊತೆಗಿನ ಒಂದಷ್ಟು ಫೋಟೊಗಳು ಅದರಲ್ಲಿದೆ.
ವಿಜಯಲಕ್ಷ್ಮಿ ದರ್ಶನ್ ಪೋಸ್ಟ್‌ಗೆ ಅಭಿಮಾನಿಗಳು ಲೈಕ್ಸ್, ಕಾಮೆಂಟ್ಸ್ ಮಾಡಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕಾಮೆಂಟ್ ಬಾಕ್ಸ್‌ನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಿ ಹೊರ ಬರುತ್ತಾರೆ ಎನ್ನುವ ಅಭಿಮಾನಿಗಳ ಆಸೆ ಈಡೇರುತ್ತಲೇ ಇಲ್ಲ. ಹೈಕೋರ್ಟ್‌ನಲ್ಲಿ ಸಿಕ್ಕದ್ದ ಜಾಮೀನು ಸುಪ್ರೀಂ ಕೋರ್ಟ್‌ನಲ್ಲಿ ರದ್ದಾಗಿತ್ತು. ಕಳೆದ ವರ್ಷ ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲು ಸೇರುವಂತಾಗಿತ್ತು. ಈಗಾಗಲೇ 6 ತಿಂಗಳು ಕಳೆದೇ ಹೋಗಿದೆ.
Happiest Birthday Boss ❤️🥺
— BOSS 🔥 (@Boss79996) February 15, 2026
ಅಪ್ಪ 🥹❤️ಮಗ#DBoss #HappyBirthdayDBoss#DBoss𓃰 #BossOfSandalwood pic.twitter.com/NFXrvzSOYN
ನೆಚ್ಚಿನ ನಟನ ನೆನಪಿನಲ್ಲೇ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಬರ್ತ್‌ಡೇ ಸಿಡಿಪಿಗಳು, ಸ್ಪೆಷಲ್ ವೀಡಿಯೋಗಳು ವೈರಲ್ ಆಗ್ತಿದೆ. ದರ್ಶನ್ ನಟನೆಯ 'ಕರಿಯ' ಸಿನಿಮಾ ಎರಡು ದಿನಗಳ ಹಿಂದೆ ರೀ-ರಿಲೀಸ್ ಆಗಿ ಸದ್ದು ಮಾಡ್ತಿದೆ. ದರ್ಶನ್ ಅಭಿಮಾನಿ ಆಗಿರುವ ತನಿಷಾ ಈ ಸಿನಿಮಾ ರೀ-ರಿಲೀಸ್ ಅನ್ನು ಸ್ನೇಹಿತರ ಜೊತೆ ಸಂಭ್ರಮಿಸಿದ್ದಾರೆ.
2003ರಲ್ಲಿ ಬಂದಿದ್ದ 'ಕರಿಯ' ಸಿನಿಮಾ ಸೂಪರ್ ಹಿಟ್ ಆಗಿತ್ತು. 3ನೇ ಬಾರಿ ಸಿನಿಮಾ ರೀ-ರಿಲೀಸ್ ಆಗ್ತಿದೆ. ದರ್ಶನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು(ಫೆಬ್ರವರಿ 16) ಕೂಡ ಸಿನಿಮಾ ಕೆಲವೆಡೆ ಪ್ರದರ್ಶನವಾಗ್ತಿದೆ. ಕಳೆದ ಕೆಲ ವರ್ಷಗಳಿಂದ ನಟ ದರ್ಶನ್ ಅದ್ಧೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದರು. ಸಂಭ್ರಮಾಚರಣೆ ಹೆಸರಿನಲ್ಲಿ ಅಭಿಮಾನಿಗಳು ಕೇಕ್, ಹಾರ, ಪಟಾಕಿ ತಂದು ವ್ಯರ್ಥ ಮಾಡುವುದು ಬೇಡ, ಅದೇ ಹಣವನ್ನು ಒಳ್ಳೆ ಕೆಲಸಗಳಿಗೆ ಬಳಸಲು ಹೇಳಿದ್ದರು.
ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಉಡುಗೊರೆ ರೂಪದಲ್ಲಿ ದವಸಧಾನ್ಯಗಳನ್ನು ತಂದು ಕೊಡುತ್ತಿದ್ದರು. ಅದನ್ನು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ನೀಡುವ ಪ್ರಯತ್ನವನ್ನು ದರ್ಶನ್ ವಹಿಸಿಕೊಂಡಿದ್ದರು. ಅಭಿಮಾನಿಗಳಿಗೆ ನಿರಾಸೆ ಮಾಡಬಾರದು ಎಂದು ಹುಟ್ಟುಹಬ್ಬದ ದಿನ ಭೇಟಿ ಮಾಡುತ್ತಿದ್ದರು. ಅಭಿಮಾನಿಗಳು ನೆಚ್ಚಿನ ನಟನ ಕೈಕುಲುಕಿ ಶುಭ ಕೋರುತ್ತಿದ್ದರು. ಆದರೆ ಕಳೆದೆರಡು ವರ್ಷಗಳಿಂದ ಅದು ಸಾಧ್ಯವಾಗುತ್ತಿಲ್ಲ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಯಾಗಿ ಜೂನ್ 11, 2024ರಂದು ನಟ ದರ್ಶನ್ ಬಂಧನವಾಗಿತ್ತು. 5 ತಿಂಗಳ ಬಳಿಕ ಜಾಮೀನು ಸಿಕ್ಕಿ ಜೈಲಿನಿಂದ ಬಿಡುಗಡೆ ಆಗಿದ್ದರು. 'ಡೆವಿಲ್' ಸಿನಿಮಾ ಚಿತ್ರೀಕರಣ ಮುಗಿಸಿದ್ದರು. ಆದರೆ ಮತ್ತೆ ಜೈಲು ಸೇರಿದ ಬಳಿಕ ಅವರ ಅನುಪಸ್ಥಿತಿಯಲ್ಲೇ ಸಿನಿಮಾ ತೆರೆಗೆ ಬಂದಿತ್ತು. ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿನಿಮಾ ಓಟಿಟಿಗೆ ಬರುತ್ತದೆ ಎಂದುಕೊಂಡಿದ್ದವರಿಗೆ ನಿರಾಸೆಯಾಗಿದೆ.
ಡಿಸೆಂಬರ್ 11ರಂದು ಬಿಡುಗಡೆಯಾಗಿದ್ದ 'ಡೆವಿಲ್' ಸಿನಿಮಾ 60 ದಿನ ಕಳೆದರೂ ಓಟಿಟಿಗೆ ಬಂದಿಲ್ಲ. ಅಭಿಮಾನಿಗಳು ಕಾದು ಕಾದು ಸುಸ್ತಾಗಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಅವರು ನಟಿಸಬೇಕಿದ್ದ ಸಿನಿಮಾಗಳೆಲ್ಲಾ ತಡವಾಗುತ್ತಿದೆ. ಯಾವಾಗ ಬಿಡುಗಡೆ ಆಗಿ ಹೊರ ಬರುತ್ತಾರೆ ಎನ್ನುವ ಬಗ್ಗೆ ಯಾವುದೇ ಸುಳಿವು ಸಿಗುತ್ತಿಲ್ಲ.
Credit: Filmibeat
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications