ಜಯಮಾಲ ವಿರುದ್ಧ ಮುನಿರತ್ನ ಪೈಪೋಟಿ; ಭೀಗರನ್ನೇ ನಿಲ್ಲಬೇಡಿ ಎಂದಿದ್ದೇಕೆ ರಾಕ್‌ಲೈನ್?
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಇತರೆ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಈಗ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವಾಣಿಜ್ಯ ಮಂಡಳಿಯ ಒಂದೊಂದು ಗುಂಪುಗಳು ತಮ್ಮ ಪ್ರತಿನಿಧಿಯನ್ನು ಕಣಕ್ಕೆ ಇಳಿಸಿ ಬ್ಯಾಟ್ ಬೀಸುತ್ತಿದ್ದಾರೆ. ಇದು ಪ್ರತಿ ಬಾರಿ ಚುನಾವಣೆ ನಡೆಯುವಾಗಲೂ ಕಾಣ ಸಿಗುವ ದೃಶ್ಯ. ಆದರೆ, ಈ ಬಾರಿ ವಾತಾವರಣ ಕೊಂಚ ಮಟ್ಟಿಗೆ ವಿಭಿನ್ನವಾಗಿದೆ.
ವಾಣಿಜ್ಯ ಮಂಡಳಿ ಚುನಾವಣೆ ಈ ಬಾರಿ ಬೇರೆಯದ್ದೇ ವಾತಾರವಣ ಸೃಷ್ಟಿಸಿರುವುದಕ್ಕೆ ಕಾರಣ ಮುನಿರತ್ನ ಹಾಗೂ ಡಾ.ಜಯಮಾಲ. ಇವರಿಬ್ಬರೂ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಈಗಾಗಲೇ ಇಬ್ಬರೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಮಾಡುವುದಕ್ಕೆ ಮುಂದೆ ಬಂದಿದ್ದಾರೆ. ಈ ಗ್ಯಾಪ್‌ನಲ್ಲಿ ಫಿಲ್ಮ್ ಚೇಂಬರ್ ಚುನಾವಣೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ಡಾ.ಜಯಮಾಲ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಮಾಡುತ್ತಿರುವುದರಿಂದ ಮುನಿರತ್ನ ಅಖಾಡಕ್ಕೆ ಇಳಿದಿದ್ದಾರೆ ಎನ್ನಲಾಗಿದೆ. ಯಾಕಂದ್ರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಡಾ.ಜಯಮಾಲ. ಮೊದಲೇ ಡಿಕೆ ಶಿವಕುಮಾರ್ ಹಾಗೂ ಮುನಿರತ್ನ ನಡುವೆ ಸಮರ ನಡೆಯುತ್ತಿದೆ. ಹೀಗಾಗಿ ಇಲ್ಲೂ ಟಕ್ಕರ್ ಕೊಡಲೇಬೇಕು ಅಂತ ಮುನಿರತ್ನ ಅಖಾಡಕ್ಕೆ ಇಳಿದಿದ್ದಾರೆ ಅನ್ನೋ ಮಾತಿದೆ. ಆದರೆ, ಭೀಕರಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ರಾಕ್‌ಲೈನ್ ವೆಂಕಟೇಶ್ ಹೇಳಿದ್ದು ಅಚ್ಚರಿ ಮೂಡಿಸಿದೆ.
ಮುನಿರತ್ನ Vs ಜಯಮಾಲ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಾರಕ್ಕೇರುತ್ತಿದೆ. ಅದರಲ್ಲೂ ಈ ಚುನಾವಣೆಗೆ ಮುನಿರತ್ನ ಹಾಗೂ ಜಯಮಾಲ ಇಬ್ಬರೂ ಅಖಾಡಕ್ಕೆ ಇಳಿದಿರೋದು ಗಮನ ಸೆಳೆಯುತ್ತಿದೆ. ಮುನಿರತ್ನ ವಾಣಿಜ್ಯ ಮಂಡಳಿ ಕಡೆ ಮುಖ ಮಾಡಿರೋದು ಬೇರೆಯದ್ದೇ ರಾಜಕೀಯ ಲೆಕ್ಕಾಚಾರಕ್ಕೆ ಎಡೆ ಮಾಡಿಕೊಟ್ಟಿದೆ. ನಿಜಕ್ಕೂ ಇದೆ ಮುನಿರತ್ನ Vs ಜಯಮಾಲನೇನಾ? ಇಲ್ಲ ಮುನಿರತ್ನ Vs ಡಿಕೆ ಶಿವಕುಮಾರ್ ಅನ್ನೋ ಅನುಮಾನ ಮೂಡುವುದಕ್ಕೆ ಶುರು ಮಾಡಿದೆ.
ಫಿಲ್ಮ್ ಚೇಂಬರ್‌ಗೆ ಮುನಿ Vs ಡಿಕೆ
ರಾಜ್ಯ ರಾಜಕಾರಣದಲ್ಲಿ ಮುನಿರತ್ನ ಹಾಗೂ ಡಿಕೆ ಶಿವಕುಮಾರ್ ಇಬ್ಬರ ವೈರತ್ವದ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ನಿರಂತರವಾಗಿ ಮುನಿರತ್ನ ಹಾಗೂ ಡಿಕೆ ನಡುವೆ ಫೈಟ್ ನಡೆಯುತ್ತಲೇ ಇದೆ. ಇದು ಫಿಲ್ಮ್ ಚೇಂಬರ್‌ಗೆ ಶಿಫ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಡಿಕೆ ಶಿವಕುಮಾರ್ ಬೆಂಬಲದಿಂದ ಡಾ.ಜಯಮಾಲಾ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಮುನಿರತ್ನ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದು, ಜಯಮಾಲಾರನ್ನು ಸೋಲಿಸಲೇಬೇಕು ಅತ ಪಣ ತೊಟ್ಟಿದ್ದಾರೆ ಎನ್ನಲಾಗಿದೆ.

ಬೀಗರಿಗೆ ರಾಕ್‌ಲೈನ್ ಮನವಿ
ಇಲ್ಲೊಂದು ಟ್ವಿಸ್ಟ್ ಏನಂದ್ರೆ, ಮುನಿರತ್ನ ಭೀಗರಾಗಿರುವ ರಾಕ್‌ಲೈನ್ ವೆಂಕಟೇಶ್ ಅವರೇ ಡಾ.ಜಯಮಾಲಾಗೆ ಬೆಂಬಲ ನೀಡುತ್ತಿದ್ದಾರೆ. ಜಯಮಾಲಾರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಅಂತ ಪಣತೊಟ್ಟಿದ್ದಾರೆ. ನಿನ್ನೆ (ಜನವರಿ 21) ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಸ್ವತ: ರಾಕ್‌ಲೈನ್ ವೆಂಕಟೇಶ್ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿಯುವಂತೆ ಭೀಗರಾಗಿರುವ ಮುನಿರತ್ನಗೆ ಮನವಿ ಮಾಡಿಕೊಂಡಿದ್ದಾರೆ. ಇದು ಅಚ್ಚರಿಗೆ ಕಾರಣವಾಗಿದೆ.
ಹಿಂದೆ ಸರಿಯುತ್ತಾರಾ ಮುನಿರತ್ನ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಮುನಿರತ್ನ ಹಿಂದೆ ಸರಿಯುತ್ತಾರಾ? ರಾಜಕೀಯ ಮುಖಂಡರು ಅವರ ಮನವೊಲಿಸುತ್ತಾರಾ? ಇಲ್ಲಾ ಡಿಕೆ ಶಿವಕುಮಾರ್ ವಿರುದ್ಧ ತೊಡೆತಟ್ಟಿ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳುತ್ತಾರಾ? ಅನ್ನೋ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ.
Credit: Filmibeat
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications