6 ಲಕ್ಷ ರೂಪಾಯಿಗೆ 7-ಸೀಟರ್‌ನ ಹೊಸ ಕಾರು.. ಇದ್ದಕ್ಕಿದ್ದಂತೆ ಕಾರಣ ಹೇಳದೆ ಬಿಡುಗಡೆ ದಿನಾಂಕ ಮುಂದೂಡಿದ ಕಂಪನಿ!
ನಿಸ್ಸಾನ್ ಇಂಡಿಯಾ (Nissan India), ಮಧ್ಯಮ ವರ್ಗದ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿತ್ತು. ಜನವರಿ 21 ರಂದು ಅಗ್ಗದ ದರದಲ್ಲಿ ನೂತನ ಕಾರೊಂದನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೀಗ ಯಾವುದೇ ಕಾರಣವನ್ನು ತಿಳಿಸದೇ ಏಕಾಏಕಿ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಅತಿ ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವ ಸಾಧ್ಯತೆಯಿದೆ. ಈ ಕುರಿತಂತೆ ವಿವಿಧ ಮಾಧ್ಯಮಗಳಲ್ಲೂ ವರದಿಯಾಗಿದೆ.
ಹೊಚ್ಚ ಹೊಸ ನಿಸ್ಸಾನ್ ಗ್ರಾವೈಟ್ (Nissan Gravite) ಎಂಪಿವಿಯು ಮಾರಾಟಕ್ಕೆ ಬರುವುದು ಸ್ವಲ್ಪ ಮಟ್ಟಿಗೆ ತಡವಾಗಿರುವುದು ಗ್ರಾಹಕರಿಗೆ ಬೇಸರ ತರಿಸಿದೆ. ಆದರೂ ಈ ಕಾರಿನ ಮೇಲೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಜಾಗತಿಕವಾಗಿ ನಿಸ್ಸಾನ್ ಹಾಗೂ ರೆನಾಲ್ಟ್ ಕಂಪನಿಗಳು ತಂತ್ರಜ್ಞಾನ ಹಂಚಿಕೆಯಲ್ಲಿ ಪಾಲುದಾರಿಕೆ ಹೊಂದಿವೆ. ಹೀಗಾಗಿ ನೂತನ 'ಗ್ರಾವೈಟ್' ಕಾರು 'ರೆನಾಲ್ಟ್ ಟ್ರೈಬರ್'ನ್ನು ಆಧರಿಸಿರಲಿದೆ ಎಂಬುದು ಬಹುತೇಕ ಖಚಿತವಾಗಿದೆ.

ಈ 'ನಿಸ್ಸಾನ್ ಗ್ರಾವೈಟ್' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದಲಿದೆ. ಹೆಚ್ಚು ಅತ್ಯಾಧುನಿಕವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರಬಹುದು. 3,985 ಮಿ.ಮೀ ಉದ್ದ, 1,739 ಮಿ.ಮೀ ಅಗಲ ಮತ್ತು 1,643 ಮಿ.ಮೀ ಎತ್ತರವಿರಲಿದೆ. 182 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿರಬಹುದು ಎನ್ನಲಾಗಿದೆ.
ಇದು 7 ಆಸನಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಣ್ಣದಾಗಿರುವ 84 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ. ಹಾಗೆಯೇ 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ನೂತನ 'ಗ್ರಾವೈಟ್' ಉತ್ತಮವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿರಲಿದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ. 20 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡುವ ನಿರೀಕ್ಷೆಯಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿರಲಿದೆ. 'ರೆನಾಲ್ಟ್ ಟ್ರೈಬರ್'ನಂತೆ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ, ವೈರ್‌ಲೆಸ್ ಫೋನ್ ಚಾರ್ಜರ್, 6-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಮ್ಯಾನುವಲ್ ಎಸಿಯಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್ ಹಾಗೂ ರೇರ್-ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿರಬಹುದು ಎನ್ನಲಾಗಿದೆ.
ಹೊಸ 'ನಿಸ್ಸಾನ್ ಗ್ರಾವೈಟ್' ಎಂಪಿವಿ, ಅಗ್ಗದ ದರದಲ್ಲೂ ಗ್ರಾಹಕರ ಖರೀದಿಗೆ ದೊರೆಯಲಿದೆ. ರೂ.6 ಲಕ್ಷದಿಂದ ರೂ.9 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಹಲವು ಎದುರಾಳಿಗಳಿವೆ. ಬಹುಮುಖ್ಯವಾಗಿ ಟೊಯೊಟಾ ರೂಮಿಯನ್, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಹಾಗೂ ಮಾರುತಿ ಸುಜುಕಿ ಎರ್ಟಿಗಾಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ರೆನಾಲ್ಟ್ ಟ್ರೈಬರ್ (Renault Triber) ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ದರದಲ್ಲೂ ಲಭ್ಯವಿದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
Credit: Drivespark
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications