ಆಚಾರವಿಲ್ಲದ ನಾಲಿಗೆ ....
*ಪುರಂದರ ದಾಸರು
ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಪುದಕ್ಕೆ ಚಾಚಿಕೊಂಡಿರುವಂಥ ನಾಲಿಗೆ
ಪ್ರಾತಃ ಕಾಲದೊಳೆದ್ದು ನಾಲಿಗೆ -ಸಿರಿ ಪತಿಯೆನ್ನಬಾರದೆ ನಾಲಿಗೆ
ಪತಿತ ಪಾವನ ನಮ್ಮ ರತಿಪತಿ ಜನಕನ ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲಿ ಬೇಡ ನಾಲಿಗೆ-ನಿನ್ನ ಬೇಡಿಕೊಂಬುವೆನು ನಾಲಿಗೆ
ರೂಢಿಗೊಡೆಯ ಶ್ರೀರಾಮನ ನಾಮವ ಪಾಡುತಲಿರು ಕಂಡ್ಯ ನಾಲಿಗೆ
ಹರಿಯ ಸ್ಮರಣೆ ಮಾಡು ನಾಲಿಗೆ-ನರ ಹರಿಯ ಭಜಿಸು ಕಂಡ್ಯ ನಾಲಿಗೆ
ವರದ ಪುರಂದರವಿಠಲರಾಯನ ಚರಣ ಕಮಲವ ನೆನೆ ನಾಲಿಗೆ
ಇನ್ನೊಂದು ಕೀರ್ತನೆ
ಮುಖಪುಟ / ಸಾಹಿತ್ಯ ಸೊಗಡು












Click it and Unblock the Notifications